ಕಲಬುರಗಿ: ಬಿಟ್‌ಕಾಯಿನ್ ಹಗರಣದಲ್ಲಿ ರಾಜ್ಯದ ಹಲವು ಜನಪ್ರತಿನಿಧಿಗಳು, ಅಧಿಕಾರಿಗಳು ನೇರವಾಗಿ ಶಾಮೀಲಾಗಿದ್ದಾರೆ. ಒಂದು ವೇಳೆ ಇದರ ತನಿಖೆ ನಡೆಸಿದರೆ ಕರ್ನಾಟಕದ ಮುಖ್ಯಮಂತ್ರಿಯನ್ನು ಖಂಡಿತವಾಗಿ ಬಲಿ ತೆಗೆದುಕೊಳ್ಳಲಿದೆ ಎಂದು ಶಾಸಕರಾದ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
Advertisement
ಕಲಬುರಗಿ ನಗರದ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸದ್ಯ ರಾಜ್ಯದಲ್ಲಿ ಬಿಟ್‌ಕಾಯಿನ್, ಕರೆನ್ಸಿ ಸೇರಿದಂತೆ ಹಲವು ಅಕ್ರಮ ದಂಧೆಗಳು ಬಿಂದಾಸಾಗಿ ನಡೆಯುತ್ತಿವೆ. ಇದರಲ್ಲಿ ಸಾವಿರಾರು ಕೋಟಿ ರೂಪಾಯಿಯ ವ್ಯವಹಾರ ಈಗಾಗಲೇ ಆಗಿದೆ. ಅಧಿಕಾರಿಗಳು ಹಾಗೂ ಪ್ರಭಾವಿ ನಾಯಕರು ಸಪೋರ್ಟ್‌ನಿಂದ ನಡೆಯುತ್ತಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಹೊತ್ತಿ ಉರಿದ ಬಸ್- 12 ಮಂದಿ ಸಜೀವ ದಹನ
Advertisement
Advertisement
ಪಾರದರ್ಶಕ ತನಿಖೆ ನಡೆಸಿದರೆ ಈ ಹಗರಣದಲ್ಲಿ ಯಾರು ಭಾಗವಹಿಸಿದ್ದಾರೆ ಎನ್ನುವುದು ಒಂದೇ ಒಂದು ತಿಂಗಳಲ್ಲಿ ಹೊರಬರಲಿದೆ. ಆದರೆ ಸರ್ಕಾರಕ್ಕೆ ಈ ಬಗ್ಗೆ ಆಸಕ್ತಿ ಇದೆಯಾ ಎನ್ನುವುದು ಮುಖ್ಯ ವಾಗಿದೆ. ಈ ಹಗರಣದಲ್ಲಿ ಕಾಂಗ್ರೆಸ್ ಬಿಜೆಪಿ ಯಾವುದೇ ನಾಯಕರು ಇರಲಿ ಮೊದಲು ತನಿಖೆ ನಡೆಸಿ ಕ್ರಮ ಜರುಗಿಸಬೇಕಾಗಿದೆ. ಆದರೆ ಪ್ರಮುಖ ಆರೋಪಿ ಶ್ರೀಕಿಯನ್ನು ವಿಚಾರಣೆಗೆ ಬಿಡುತ್ತಿಲ್ಲ, ಆತನನ್ನು 10 ದಿನ ವಿಚಾರಣೆ ನಡೆಸಿದರೆ ಈ ಹಗರಣ ಸಂಪೂರ್ಣ ಹೊರಬರುತ್ತದೆ ಎಂದು ಪ್ರಿಯಾಂಕ್ ಖರ್ಗೆ ಸರ್ಕಾರವನ್ನು ಆಗ್ರಹಿಸಿದ್ದಾರೆ. ಇದನ್ನೂ ಓದಿ: ನ.11 ಕ್ಕೆ ರಾಜ್ಯಾದ್ಯಂತ ಒನಕೆ ಓಬವ್ವ ಜಯಂತಿ ಆಚರಣೆಗೆ ಸರ್ಕಾರ ಆದೇಶ
Advertisement
ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಡಾ ಶರಣಪ್ರಕಾಶ್ ಪಾಟೀಲ್, ಡಿಸಿಸಿ ಅಧ್ಯಕ್ಷರಾದ ಜಗದೇವ ಗುತ್ತೇದಾರ, ಮಾಜಿ ಎಂ ಎಲ್ ಸಿ ತಿಪ್ಪಣ್ಣಪ್ಪ ಕಮಕನೂರು, ಮಲ್ಲಿಕಾರ್ಜುನ, ಎಪಿಎಂಸಿ ಅಧ್ಯಕ್ಷರಾದ ಸಿದ್ದು ಪಾಟೀಲ್, ಈರಣ್ಣ ಝಳಕಿ ಮತ್ತಿತರು ಇದ್ದರು.