ಬೆಂಗಳೂರು: ಗಣೇಶ ಮೆರವಣಿಗೆಗೆ ಅವಕಾಶ ನೀಡದಿದ್ದರೆ ಪೊಲೀಸ್ ಠಾಣೆಗೆ ನುಗ್ಗುತ್ತೇವೆ ಎಂಬ ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿಕೆಗೆ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ತಿರುಗೇಟು ನೀಡಿದ್ದಾರೆ. ಪೊಲೀಸ್ ಠಾಣೆಗೆ ನುಗ್ಗಿದ್ರೆ ಸೀದ ಪರಪ್ಪನ ಅಗ್ರಹಾರಕ್ಕೆ ನುಗ್ಗಿಸುವ ವ್ಯವಸ್ಥೆ ಉಚಿತವಾಗಿ ಕಲ್ಪಿಸಲಾಗುವುದು ಎಂದು ಮಾಜಿ ಸಂಸದರಿಗೆ ಟಾಂಗ್ ಕೊಟ್ಟಿದ್ದಾರೆ.
ಪ್ರತಾಪ್ ಸಿಂಹ (Pratap Simha) ಹೇಳಿಕೆಗೆ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಳ್ಳುವ ಮೂಲಕ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ. ಮೈಸೂರಿನ ಕಡೆಯ ‘ಪೇಟೆ ರೌಡಿ’ಯೊಬ್ಬ ಪೊಲೀಸರನ್ನು ಬೆದರಿಸುವ ಮಾತುಗಳನ್ನಾಡಿದ್ದಾನೆ. ಅಸ್ತಿತ್ವ ಕಳೆದುಕೊಂಡ ಕತ್ತಲೆ ಜಗತ್ತಿನ ಆತ್ಮದಂತೆ ಪರಿತಪಿಸುತ್ತಿರುವ ಆ ವ್ಯಕ್ತಿ ವಾರಕ್ಕೊಮ್ಮೆ ಗೋಗರೆದು ಮಾಧ್ಯಮಗಳನ್ನು ಕರೆಸಿಕೊಂಡು ಅಸಂಬದ್ಧ ಹೇಳಿಕೆ ನೀಡುತ್ತಾ ಅಸ್ತಿತ್ವ ಉಳಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾನೆ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಮಸೀದಿ ಇರೋ ರಸ್ತೆಯಲ್ಲಿ ಗಣಪತಿ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿಡಿಸ್ತೀನಿ: ಇನ್ಸ್‌ಪೆಕ್ಟರ್ ಧಮ್ಕಿ
ಮೈಸೂರಿನ ಕಡೆಯ “ಪೇಟೆ ರೌಡಿ”ಯೊಬ್ಬ ಪೊಲೀಸರನ್ನು ಬೆದರಿಸುವ ಮಾತುಗಳನ್ನಾಡಿದ್ದಾನೆ.
ಅಸ್ತಿತ್ವ ಕಳೆದುಕೊಂಡ ಕತ್ತಲೆ ಜಗತ್ತಿನ ಆತ್ಮದಂತೆ ಪರಿತಪಿಸುತ್ತಿರುವ ಆ ವ್ಯಕ್ತಿ ವಾರಕ್ಕೊಮ್ಮೆ ಗೋಗರೆದು ಮಾಧ್ಯಮಗಳನ್ನು ಕರೆಸಿಕೊಂಡು ಅಸಂಬದ್ಧ ಹೇಳಿಕೆ ನೀಡುತ್ತಾ ಅಸ್ತಿತ್ವ ಉಳಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾನೆ..
“ಪೊಲೀಸ್ ಠಾಣೆಗೆ…
— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) September 12, 2026
‘ಪೊಲೀಸ್ ಠಾಣೆಗೆ ನುಗ್ಗುತ್ತೇನೆ’ ಎಂದಿರುವ ಆ ವ್ಯಕ್ತಿಗೆ ಮುಕ್ತ ಆಹ್ವಾನವಿದೆ. ಪೊಲೀಸ್ ಠಾಣೆಗೆ ನುಗ್ಗಿದ ನಂತರ ಸೀದಾ ಪರಪ್ಪನ ಅಗ್ರಹಾರಕ್ಕೆ ನುಗ್ಗಿಸುವ ವ್ಯವಸ್ಥೆಯನ್ನು ಉಚಿತವಾಗಿ ಕಲ್ಪಿಸಲಾಗುವುದು! ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸರ ಕರ್ತವ್ಯಕ್ಕೆ ಯಾರೇ ಅಡ್ಡಿಪಡಿಸಿದರೂ ಮುಲಾಜಿಲ್ಲದೆ ಕಾನೂನು ಕ್ರಮ ಜರುಗಿಸಲು ಸನ್ನದ್ಧವಾಗಿದೆ ಗೃಹ ಇಲಾಖೆ ಎಂದು ತಿಳಿಸಿದ್ದಾರೆ.
ಸೂಕ್ಷ್ಮ ಸಂದರ್ಭಗಳನ್ನು ಬಳಸಿಕೊಂಡು ಸಮಾಜದ ಸ್ವಾಸ್ಥ್ಯ ಕದಡುವ ಪ್ರಯತ್ನಗಳನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಪೊಲೀಸರ ನೈತಿಕ ಸ್ಥೈರ್ಯ ಕಸಿಯಲು ಬಿಡುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಮಂಡ್ಯದಲ್ಲಿ ಪರಿಸರ ಸ್ನೇಹಿ ಗಣೇಶೋತ್ಸವ: ಶಿವ-ಪಾರ್ವತಿ ವೇಷಧಾರಿಗಳಿಂದ 1000 ಮಣ್ಣಿನ ಮೂರ್ತಿ ವಿತರಣೆ

