ಬೆಂಗಳೂರು: ಬಿಟ್ ಕಾಯಿನ್ ಹಗರಣ ಸಂಬಂಧ ಪ್ರಿಯಾಂಕ್ ಖರ್ಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ವಿರುದ್ಧ ಆರೋಪಿಸಿದ್ದರು. ಖರ್ಗೆ ಹೇಳಿಕೆಯನ್ನು ಮಾಧ್ಯಮಗಳು ಸಿಎಂ ಮುಂದೆ ಪ್ರಸ್ತಾಪಿಸಿದಾಗ ಬಿಟ್ ಕಾಯಿನ್ ಹಗರಣದಲ್ಲಿ ಕಾಂಗ್ರೆಸ್ ನಾಯಕರೂ ಇದ್ದಾರೆ ಎಂದು ಹೇಳುವ ಮೂಲಕ ಖರ್ಗೆ ಹೇಳಿಕೆಗೆ ಪ್ರತಿಕ್ರಿಯೆ ಕೊಡಲ್ಲ ಎಂದು ಬೊಮ್ಮಾಯಿ ಹೇಳಿದ್ದಾರೆ. ಈ ಹೇಳಿಕೆ ವಿಚಾರವಾಗಿ ಕಾಂಗ್ರೆಸ್ ಪಕ್ಷದ ನಾಯಕ ಸಿದ್ದರಾಮಯ್ಯ ಅನುಮಾನ ವ್ಯಕ್ತಪಡಿಸಿದ್ದಾರೆ.
Advertisement
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಟ್‍ಕಾಯಿನ್ ಹಗರಣದಲ್ಲಿ ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಯಾರೇ ಇರಲಿ ಕ್ರಮ ಕೈಗೊಳ್ಳಲಿ ತಪ್ಪಿಸಿಕೊಳ್ಳೋಕೆ ಎಸ್ಕೆಪಿಂಗ್ ಉತ್ತರ ಕೊಡಬಾರದು, ಸಿಎಂ ರೆಸ್ಪಾನ್ಸಿಬಲ್ ಉತ್ತರ ಕೊಡಬೇಕು ಎಂದು ಹೇಳಿದ್ದಾರೆ. ಇದನ್ನೂ ಓದಿ: ಬಿಟ್‌ಕಾಯಿನ್ ಹಗರಣದಲ್ಲಿ ಸಿಎಂ ತಲೆದಂಡ ಪಡೆಯಲಿದೆ: ಪ್ರಿಯಾಂಕ್ ಖರ್ಗೆ
Advertisement
Advertisement
ಬಿಟ್‍ಕಾಯಿನ್ ಹಗರಣದಲ್ಲಿ ಯಾರೇ ಭಾಗಿಯಾಗಿರಲಿ ಅದು ಬಿಜೆಪಿ ಅವರೇ ಆಗಲಿ, ಕಾಂಗ್ರೆಸ್ ಅವರೇ ಅಗಲಿ ಮೊದಲು ಬುಕ್ ಮಾಡಲಿ. ಹೆಸರು ಹೇಳಲಿ, ಸರ್ಕಾರ ಅವರದ್ದಾಗಿದೆ. ತಪ್ಪಿಸಿಕೊಳ್ಳಲು ಎಸ್ಕೇಪ್ ಹೇಳಿಕೆ ನೀಡಬಾರದು. ಹೆಸರು ಹೇಳಲು ಆಗಿಲ್ಲ ಎಂದರೆ ಸರ್ಕಾರ ಬಿಟ್ಟು ಕೊಡಲಿ. ನಂತರ ನಾವು ಹೇಳುತ್ತೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಪ್ರತಿಕ್ರಿಯೆ ಕೊಡಲ್ಲ: ಬೊಮ್ಮಾಯಿ ಗರಂ
Advertisement
ಬಸವರಾಜ ಬೊಮ್ಮಾಯಿ ಈ ರೀತಿ ಮಾತನಾಡುವುದು ನೋಡಿದರೆ ನನಗೆ ಅನುಮಾನ ಬರುತ್ತದೆ. ಅವರೇ ಸಿಕ್ಕಿಹಾಕಿಕೊಂಡಿರುವಾಗೇ ನಡೆದುಕೊಳ್ಳುತ್ತಿದ್ದಾರೆ. ಆದರೆ ನಾನು ಎಲ್ಲೂ ಬೊಮ್ಮಾಯಿ ಅವರ ಹೆಸರು ಹೇಳಿಲ್ಲ. ಆದರೂ ಅವರ ಹೇಳಿಕೆಗಳು ನೋಡುತ್ತಿದ್ದರೇ ಅನುಮಾನ ಬರುತ್ತಿದೆ ಎಂದು ವಾಗ್ದಾಳಿ ಮಾಡಿದ್ದಾರೆ. ಇದನ್ನೂ ಓದಿ: ದೆಹಲಿ ವಿವಿ ಪ್ರೊಫೆಸರ್ ಪತ್ನಿಯನ್ನು ಕತ್ತು ಹಿಸುಕಿ ಕೊಂದ ಕಾರು ಚಾಲಕ!
ಪ್ರಿಯಾಂಕ್ ಖರ್ಗೆ ಹೇಳಿದ್ದೇನು..?: ಸದ್ಯ ರಾಜ್ಯದಲ್ಲಿ ಬಿಟ್ ಕಾಯಿನ್, ಕರೆನ್ಸಿ ಸೇರಿದಂತೆ ಹಲವು ಅಕ್ರಮ ದಂಧೆಗಳು ಬಿಂದಾಸಾಗಿ ನಡೆಯುತ್ತಿವೆ. ಇದರಲ್ಲಿ ಸಾವಿರಾರು ಕೋಟಿ ರೂಪಾಯಿಯ ವ್ಯವಹಾರ ಈಗಾಗಲೇ ಆಗಿದೆ. ಅಧಿಕಾರಿಗಳು ಹಾಗೂ ಪ್ರಭಾವಿ ನಾಯಕರು ಸಪೋರ್ಟ್ ನಿಂದ ನಡೆಯುತ್ತಿದೆ ಎಂದು ಪ್ರಿಯಾಂಕ್ ಖರ್ಗೆ ಕಲಬುರಗಿಯಲ್ಲಿ ಹೇಳಿದ್ದಾರೆ.
ಪಾರದರ್ಶಕ ತನಿಖೆ ನಡೆಸಿದರೆ ಈ ಹಗರಣದಲ್ಲಿ ಯಾರು ಭಾಗವಹಿಸಿದ್ದಾರೆ ಎನ್ನುವುದು ಒಂದೇ ಒಂದು ತಿಂಗಳಲ್ಲಿ ಹೊರಬರಲಿದೆ. ಆದರೆ ಸರ್ಕಾರಕ್ಕೆ ಈ ಬಗ್ಗೆ ಆಸಕ್ತಿ ಇದೆಯಾ ಎನ್ನುವುದು ಮುಖ್ಯವಾಗಿದೆ. ಈ ಹಗರಣದಲ್ಲಿ ಕಾಂಗ್ರೆಸ್, ಬಿಜೆಪಿ ಯಾವುದೇ ನಾಯಕರು ಇರಲಿ ಮೊದಲು ತನಿಖೆ ನಡೆಸಿ ಕ್ರಮ ಜರುಗಿಸಬೇಕಾಗಿದೆ. ಆದರೆ ಪ್ರಮುಖ ಆರೋಪಿ ಶ್ರೀಕಿಯನ್ನು ವಿಚಾರಣೆಗೆ ಬಿಡುತ್ತಿಲ್ಲ, ಆತನನ್ನು 10 ದಿನ ವಿಚಾರಣೆ ನಡೆಸಿದರೆ ಈ ಹಗರಣ ಸಂಪೂರ್ಣ ಹೊರಬರುತ್ತದೆ ಎಂದು ಸರ್ಕಾರವನ್ನು ಆಗ್ರಹಿಸಿದ್ದಾರೆ.