BollywoodCinemaLatestMain PostNational

ಪತಿಯಿಂದ ವಿಚ್ಛೇದನ ಪಡೆಯುತ್ತಾರಾ ಪ್ರಿಯಾಂಕಾ ಚೋಪ್ರಾ?

Advertisements

ವಾಷಿಂಗ್ಟನ್: ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಅವರು ಸೋಶಿಯಲ್ ಮೀಡಿಯಾ ಖಾತೆಯಲ್ಲಿ ತಮ್ಮ ಹೆಸರಿನ ಜೊತೆಗೆ ಇದ್ದ ಪತಿ ನಿಕ್ ಜೋನಾಸ್ ಅವರ ಹೆಸರನ್ನು ತೆಗೆದುಹಾಕಿದ್ದಾರೆ. ಇಬ್ಬರ ದಾಂಪತ್ಯ ಜೀವನದಲ್ಲಿ ಬಿರುಕು ಮೂಡಿದೆ ಎನ್ನುವ ಸುದ್ದಿಯೊಂದು ಬಾಲಿವುಡ್‌ ಅಂಗಳಲದಲ್ಲಿ ಹರಿದಾಡುತ್ತಿದೆ.

ಮದುವೆಯ ನಂತರ ಪ್ರಿಯಾಂಕಾ ಚೋಪ್ರಾ ಇನ್‍ಸ್ಟಾಗ್ರಾಮ್‌ನಲ್ಲಿ  ತಮ್ಮ ಹೆಸರಿನ ಜೊತೆಗೆ ಜೋನಾಸ್ ಎಂದು ಸೇರಿಸಿಕೊಂಡಿದ್ದರು. ಇಂದು ಜೋನಾಸ್ ಹೆಸರನ್ನು ತೆಗೆದುಹಾಕಿರುವುದು ತೀವ್ರ ಕುತೂಹಲಕ್ಕಿಡುಮಾಡಿದೆ. ಅಲ್ಲದೆ ಪ್ರಿಯಾಂಕಾ ಅವರ ಈ ದಿಢೀರ್ ಬದಲಾವಣೆ ಅಭಿಮಾನಿಗಳಲ್ಲಿ ಆತಂಕವನ್ನುಂಟು ಮಾಡಿದೆ. ಸೋಶಿಯಲ್ ಮೀಡಿಯಾದಲ್ಲಿ ಅಭಿಮಾನಿಗಳು ಈ ಕುರಿತಾಗಿ ಚರ್ಚೆ ಮಾಡುತ್ತಿದ್ದಾರೆ. ಇದನ್ನೂ ಓದಿ: ಐಷಾರಾಮಿ ರೆಸ್ಟೋರೆಂಟ್ ಆರಂಭಿಸಿದ ಪ್ರಿಯಾಂಕಾ ಚೋಪ್ರಾ

 

ಪ್ರಿಯಾಂಕಾ ಅವರು ಪಾಪ್ ಸ್ಟಾರ್ ನಿಕ್ ಜೋನಾಸ್ ಅವರನ್ನು 2018 ಡಿಸೆಂಬರ್ 1ರಂದು ವಿವಾಹವಾಗಿದ್ದರು. ದಾಂಪತ್ಯ ಜೀವನಕ್ಕೆ ಕಾಲಿಟ್ಟ ಮೇಲೆ ಪ್ರಿಯಾಂಕಾ ಅಮೆರಿಕದಲ್ಲಿ ನೆಲೆಸಿದ್ದಾರೆ. ಇತ್ತೀಚೆಗಷ್ಟೆ ಹೊಸ ಮನೆಯನ್ನು ಖರೀದಿಸಿದ್ದಾರೆ. ಅಲ್ಲಿ ಪ್ರಿಯಾಂಕಾ ದೀಪಾವಳಿಯನ್ನು ಆಚರಿಸಿಕೊಂಡಿದ್ದರು. ಆ ಸಂದರ್ಭದಲ್ಲಿ ಪತಿಯ ಜೊತೆ  ಫೋಟೋ ಕ್ಲಿಕ್ಕಿಸಿಕೊಂಡು ಈ ಬಾರಿಯ ದೀಪಾವಳಿ ತುಂಬಾ ಸ್ಪೆಷಲ್ ಎನ್ನುವ ಸಂದೇಶವನ್ನು ಅಭಿಮಾನಿಗಳ ಜೊತೆಗೆ ಹಂಚಿಕೊಂಡಿದ್ದರು. ಇದನ್ನೂ ಓದಿ:ಹೊಸ ಉದ್ಯಮದತ್ತ ಮುಖ ಮಾಡಿದ ಪ್ರಿಯಾಂಕಾ ಚೋಪ್ರಾ

ಪ್ರಿಯಾಂಕಾ ಚೋಪ್ರಾ ನ್ಯೂಯಾರ್ಕ್‍ನಲ್ಲಿ ರೆಸ್ಟೋರೆಂಟ್ ಒಂದನ್ನು ಆರಂಭಿಸಿದ್ದಾರೆ. ಈ ಹೋಟೆಲ್‍ಗೆ ಸೋನಾ ಎಂದು ಪ್ರಿಯಾಂಕಾ ಹೆಸರು ಇಟ್ಟಿದ್ದಾರೆ. ಇದು ಕೇವಲ ರೆಸ್ಟೋರೆಂಟ್ ಮಾತ್ರವಲ್ಲ, ನನ್ನ ಕನಸು ಕೂಡ. ನಾನು ಸೋನಾದಲ್ಲಿದ್ದೇನೆ ಎಂಬುದನ್ನು ನಂಬೋಕೆ ಸಾಧ್ಯವಾಗುತ್ತಿಲ್ಲ. 3 ವರ್ಷದ ಪ್ಲ್ಯಾನಿಂಗ್‍ನಿಂದ ಈ ರೆಸ್ಟೋರೆಂಟ್ ಸಿದ್ಧಗೊಂಡಿದೆ. ಪ್ರಿಯಾಂಕಾ ಚೋಪ್ರಾ ಅವರು ಪತಿಯಿಂದ ವಿಚ್ಛೇದನವನ್ನು ಪಡೆದುಕೊಳ್ಳುತ್ತಾರೆ ಎನ್ನುವ ವದಂತಿಯೊಂದು ಹರಿದಾಡುತ್ತಿದೆ. ಈ ಕುರಿತಾಗಿ ಅವರೇ ಸ್ಪಷ್ಟನೆ ನೀಡಬೇಕಾಗಿದೆ.

Leave a Reply

Your email address will not be published.

Back to top button