ಲಕ್ನೋ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಉನ್ನಾವೋ ಸಂತ್ರಸ್ತೆಯ ಕುಟುಂಬಕ್ಕೆ ಭೇಟಿ ನೀಡಿ, ಸಾಂತ್ವಾನ ಹೇಳಿದರು.
ಯುವತಿಯನ್ನು ಈ ಹಿಂದೆ ಅತ್ಯಾಚಾರ ಎಸಗಲಾಗಿತ್ತು. ಜಾಮೀನಿನ ಮೇಲೆ ಹೊರ ಬಂದಿದ್ದ ಆರೋಪಿ ಕೋರ್ಟಿಗೆ ಸಾಕ್ಷಿ ಹೇಳಲು ಯುವತಿ ತೆರಳುತ್ತಿದ್ದಾಗ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿದ್ದ. ಯುವತಿಯ ದೇಹ ಶೇ.90ರಷ್ಟು ಸುಟ್ಟಿತ್ತು. ನಂತರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕೆಲ ದಿನಗಳಿಂದ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದ ಯುವತಿ ಶುಕ್ರವಾರ ರಾತ್ರಿ 11.30ಕ್ಕೆ ಸಾವನ್ನಪ್ಪಿದ್ದಳು. ಇದನ್ನೂ ಓದಿ: ದುರುಳರ ಕ್ರೌರ್ಯಕ್ಕೆ ಮತ್ತೊಂದು ಬಲಿ – ಬದುಕಲಿಲ್ಲ ಬೆಂಕಿಯಲ್ಲಿ ಬೆಂದ ಉನ್ನಾವ್ ಸಂತ್ರಸ್ತೆ
Advertisement
ಸುದ್ದಿ ತಿಳಿದ ಪ್ರಿಯಾಂಕಾ ಗಾಂಧಿ ಉತ್ತರ ಪ್ರದೇಶದ ಉನ್ನವೋದಲ್ಲಿನ ಸಂತ್ರಸ್ತೆಯ ಕುಟುಂಬಕ್ಕೆ ಭೇಟಿ ನೀಡಿ ಸಾಂತ್ವಾನ ಹೇಳಿದರು.
Advertisement
ಭೇಟಿ ನಂತರ ಟ್ವೀಟ್ ಮಾಡಿರುವ ಅವರು, ಈ ಹಿಂದೆ ಇಂತಹುದೇ ಪ್ರಕರಣ ನಡೆದಿದ್ದರೂ 23 ವರ್ಷದ ಮಹಿಳೆಗೆ ಯಾಕೆ ರಕ್ಷಣೆ ನೀಡಲಿಲ್ಲ ಎಂದು ಪ್ರಶ್ನಿಸಿದ್ದಾರೆ. ಈ ಮೂಲಕ ಈ ಹಿಂದೆ ಅತ್ಯಾಚಾರಕ್ಕೊಳಗಾಗಿದ್ದ ಮಹಿಳೆ ಮೇಲೆ ಆರೋಪಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಲಾರಿ ಹರಿಸಿ ಅಪಘಾತವಾಗಿದೆ ಎನ್ನುವ ರೀತಿಯಲ್ಲಿ ಕೊಲೆ ಮಾಡಲು ಯತ್ನಿಸಿದ್ದಾರೆ ಎಂದು ಹೇಳಲಾಗಿತ್ತು. ಈ ಪ್ರಕರಣವನ್ನು ಸಹ ಪ್ರಿಯಾಂಕಾ ಗಾಂಧಿ ಅವರು ಉಲ್ಲೇಖಿಸಿದ್ದಾರೆ.
Advertisement
उन्नाव की दिवंगत पीड़िता का परिवार अपार दुःख और गुस्से में है। साल भर से इस परिवार पर अत्याचार हो रहा था। पीड़िता के पिता को घर में घुसकर पीटा। उनका खेत जला दिया। उनकी 9 साल की पोती को स्कूल में जान से मारने की धमकी दी। महीनों केस दर्ज करने से अधिकारी टरकाते रहे।
— Priyanka Gandhi Vadra (@priyankagandhi) December 7, 2019
Advertisement
ಇನ್ನೊಂದು ಟ್ವೀಟ್ ಮಾಡಿರುವ ಅವರು ಸಂತ್ರಸ್ತೆಯ ಕುಟುಂಬಕ್ಕೆ ಬೆಂಬಲ ನೀಡುವ ಸಲುವಾಗಿ ವ್ಯಾಪಕ ಪ್ರಚಾರ ನೀಡಬೇಕಿದೆ ಎಂದು ಒತ್ತಾಯಿಸಿದ್ದಾರೆ.
ಎಫ್‍ಐಆರ್ ದಾಖಲಿಸಿಕೊಳ್ಳಲೂ ನಿರಾಕರಿಸಿದ ಪೊಲೀಸರು ಯಾವ ರೀತಿಯ ಕ್ರಮ ಕೈಗೊಂಡಿದ್ದಾರೆ? ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯ ತಡೆಯಲು ರಾಜ್ಯ ಸರ್ಕಾರ ಯಾವ ಕ್ರಮ ಕೈಗೊಂಡಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಗುಡುಗಿದ್ದಾರೆ. ನಿತ್ಯ ನಡೆಯುವ ಪ್ರಕರಣದ ಆಧಾರದ ಮೇಲೆ ಕ್ರಮ ಕೈಗೊಳ್ಳುತ್ತಿದ್ದಾರೆಯೇ ಎಂದು ಪ್ರಶ್ನಿಸಿದ್ದಾರೆ.
उन्नाव की पिछली घटना को ध्यान में रखते हुए सरकार को तत्काल पीड़िता को सुरक्षा क्यों नहीं दी गई? जिस अधिकारी ने उसका FIR दर्ज करने से मना किया उस पर क्या कार्रवाई हुई? उप्र में रोज रोज महिलाओं पर जो अत्याचार हो रहा है, उसको रोकने के लिए सरकार क्या कर रही है ?
— Priyanka Gandhi Vadra (@priyankagandhi) December 7, 2019
ಅಲ್ಲದೆ ಸಾಮಾಜಿಕವಾಗಿ ಪ್ರತಿಯೊಬ್ಬರ ಸಾಮೂಹಿಕ ವೈಫಲ್ಯದಿಂದಾಗಿ ಮಹಿಳೆಗೆ ನ್ಯಾಯ ಒದಗಿಸಲು ಸಾಧ್ಯವಾಗಲಿಲ್ಲ. ಸಾಮಾಜಿಕವಾಗಿ ನಾವೆಲ್ಲರೂ ತಪ್ಪಿತಸ್ಥರು. ಅದೇ ರೀತಿ ಯುಪಿಯಲ್ಲಿನ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದನ್ನು ತೋರಿಸುತ್ತದೆ ಎಂದು ಹರಿಹಾಯ್ದಿದ್ದಾರೆ.
ದುರುಳರ ಅಟ್ಟಹಾಸಕ್ಕೆ ಮತ್ತೊಂದು ಬಲಿಯಾಗಿದ್ದು, ದುಷ್ಟರು ಇಟ್ಟ ಬೆಂಕಿಯಲ್ಲಿ ಬೆಂದು ಉನ್ನಾವೋ ಸಂತ್ರಸ್ತೆ ಮೃತಪಟ್ಟಿದ್ದಾಳೆ. ದೆಹಲಿಯ ಸಫ್ದರ್ಜಂಗ್ ಆಸ್ಪತ್ರೆಯಲ್ಲಿ ಜೀವನ್ಮರಣದ ನಡುವೆ ಹೋರಾಟ ನಡೆಸಿದ್ದ ಸಂತ್ರಸ್ತೆ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ರಾತ್ರಿ 11.40ಕ್ಕೆ ಕೊನೆಯುಸಿರೆಳೆದಿದ್ದಾಳೆ.
ಸಂತ್ರಸ್ತ ಯುವತಿ ಮೇಲೆ 2018ರಲ್ಲಿ ಸಾಮೂಹಿಕ ಅತ್ಯಾಚಾರ ನಡೆಸಲಾಗಿತ್ತು. ಮಾರ್ಚ್ 5 ಮತ್ತು 6 ರಂದು ಆರೋಪಿಗಳ ವಿರುದ್ಧ ಯುವತಿ ದೂರು ನೀಡಿದ್ದರು. ತನಿಖೆ ನಡೆಸಿದ ಪೊಲೀಸರು ಪ್ರಮುಖ ಆರೋಪಿ ಶುಭಂ ತ್ರಿವೇದಿ ಎಂಬಾತನನ್ನು ಬಂಧಿಸಿದ್ದರು. ಕಳೆದ ನವೆಂಬರ್ 30ರಂದು ಆರೋಪಿ ಶುಭಂಗೆ ಕೋರ್ಟ್ ಜಾಮೀನು ನೀಡಿತ್ತು. ಡಿಸೆಂಬರ್ 5ರಂದು ಸಾಕ್ಷಿ ಹೇಳಲು ಕೋರ್ಟಿಗೆ ತೆರಳುತ್ತಿದ್ದ ಸಂತ್ರಸ್ತೆ ಮೇಲೆ ಆರೋಪಿಗಳು ಹಲ್ಲೆ ನಡೆಸಿ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ್ದರು.
ಘಟನೆಯಲ್ಲಿ ಸಂತ್ರಸ್ತೆಯ ದೇಹ ಶೇ.90 ರಷ್ಟು ಹೋಗಿತ್ತು. ಇನ್ನು ಸಾಯುವ ಮುನ್ನ ಸಂತ್ರಸ್ತೆ “ನನಗೆ ಸಾಯಲು ಇಷ್ಟವಿಲ್ಲ ನನ್ನನ್ನು ಈ ಪರಿಸ್ಥಿತಿಗೆ ತಂದವರು ಸಾಯುವುದನ್ನು ನಾನು ನೋಡಬೇಕು” ಎಂದು ಹೇಳಿಕೊಂಡಿದ್ದರು. ಹೈದ್ರಾಬಾದ್ ಎನ್‍ಕೌಂಟರಿನಿಂದ ಕೊಂಚ ಮಟ್ಟಿಗೆ ನಿರಾಳರಾಗಿದ್ದ ಬೆನ್ನಲ್ಲೇ ಈ ಆಘಾತಕಾರಿ ಬೆಳವಣಿಗೆಯಾಗಿದೆ.
ಬೆಂಕಿ ಹಚ್ಚಿದ್ರು: ಬೆಂಕಿ ಹೊತ್ತಿಕೊಂಡಿದ್ದ ಸಂತ್ರಸ್ತೆಯು ಕಾಪಾಡಿ, ಕಾಪಾಡಿ ಎಂದು ಕೂಗುತ್ತಿದ್ದಳು. ಆದರೆ ಬೆಂಕಿಯನ್ನು ಕಂಡು ನಾವು ಭಯಭೀತರಾಗಿದ್ದೇವು. ಯಾರೊಬ್ಬರೂ ರಕ್ಷಣೆಗೆ ನಿಲ್ಲದ ಪರಿಣಾಮ ಸಂತ್ರಸ್ತೆಯು ಸಂಪೂರ್ಣವಾಗಿ ಸುಟ್ಟುಹೋದಳು. ಅಷ್ಟೇ ಅಲ್ಲದೆ ಆಕೆ ಮಾಟಗಾತಿ ಎಂದು ಭಾವಿಸಿದ್ದೇವೆ. ಹೀಗಾಗಿ ಆಕೆಯ ಹಿಂದೆ ಓಡಿ ಕೊಲೆಗೆ ಯತ್ನಿಸಿದ್ದೇವು. ಸಂತ್ರಸ್ತೆಯ ದೇಹ ಶೇ.90ರಷ್ಟು ಸುಟ್ಟ ನಂತರವೂ ಆಕೆ ಸಹಾಯಕ್ಕಾಗಿ ಸುಮಾರು ಒಂದು ಕಿಲೋಮೀಟರ್ ಓಡಿ, ಸ್ವತಃ ಪೊಲೀಸರಿಗೆ ಕರೆ ಮಾಡಿದ್ದಾಳೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿದ್ದರು.