ತಿರುವನಂತಪುರಂ: ಕಾಂಗ್ರೆಸ್ (Congress) ನಾಯಕಿ ಪ್ರಿಯಾಂಕಾ ಗಾಂಧಿ (Priyanka Gandhi) ಅವರು ಕೇರಳ (Kerala) ವಯನಾಡ್ (wayanad) ಲೋಕಸಭಾ ಕ್ಷೇತ್ರದಲ್ಲಿ (Loksabha Constituency) 3 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
Advertisement
ರಾಹುಲ್ ಗಾಂಧಿ (Rahul Gandhi) ಅವರ ರಾಜೀನಾಮೆಯಿಂದ ತೆರವಾದ ವಯನಾಡ್ ಲೋಕಸಭಾ ಕ್ಷೇತ್ರದಲ್ಲಿ ಅವರ ಸಹೋದರಿ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಿದ್ದು 4,10,931 ಅಧಿಕ ಮತಗಳ ಅಂತರದಿಂದ ಚೊಚ್ಚಲ ಗೆಲುವು ಸಾಧಿಸಿದ್ದಾರೆ.ಇದನ್ನೂ ಓದಿ: 11 ಮುಸ್ಲಿಂ ಸ್ಪರ್ಧಿಗಳನ್ನು ಹಿಂದಿಕ್ಕಿ ಏಕೈಕ ಹಿಂದೂ ಅಭ್ಯರ್ಥಿ ಮುನ್ನಡೆ
Advertisement
Advertisement
ಪ್ರಿಯಾಂಕಾ ಗಾಂಧಿ ಅವರು ಒಟ್ಟು 6,22,338 ಮತಗಳನ್ನು ಪಡೆದುಕೊಂಡಿದ್ದು, ಸಿಪಿಐನ ಹಿರಿಯ ನಾಯಕ ಸತ್ಯನ್ ಮೊಕೇರಿ 2,11,407 ಲಕ್ಷ ಮತಗಳನ್ನು ಪಡೆದುಕೊಂಡಿದ್ದಾರೆ. ಬಿಜೆಪಿಯ ನವ್ಯಾ ಹರಿದಾಸ್ ಸುಮಾರು 1,09,939 ಮತಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ.
Advertisement
2024ರ ಲೋಕಸಭಾ ಚುನಾವಣೆಯಲ್ಲಿ ರಾಹುಲ್ ವಯನಾಡ್ ಮತ್ತು ರಾಯ್ ಬರೇಲಿ ಎರಡೂ ಕ್ಷೇತ್ರದಲ್ಲಿ ಸ್ಪರ್ಧಿಸಿ ಭಾರಿ ಮತಗಳ ಅಂತರದಿಂದ ಗೆದ್ದಿದ್ದರು. ಸೋನಿಯಾ ಗಾಂಧಿ ಅವರು ರಾಜ್ಯಸಭೆಗೆ ಪ್ರವೇಶಿಸಿದ್ದರಿಂದ ರಾಯ್ ಬರೇಲಿ ಕ್ಷೇತ್ರ ಉಳಿಸಿಕೊಂಡ ರಾಹುಲ್ ಗಾಂಧಿ, ವಯನಾಡ್ ಕ್ಷೇತ್ರವನ್ನು ಸಹೋದರಿಗೆ ಬಿಟ್ಟುಕೊಟ್ಟರು.
ವಿಶೇಷವೆಂದರೆ ಕಳೆದ ಬಾರಿ ಲೋಕಸಭಾ ಚುನಾವಣೆಯಲ್ಲಿ ರಾಹುಲ್ ಗಾಂಧಿ 3.64 ಲಕ್ಷ ಮತಗಳ ಅಂತರದಿಂದ ಒಟ್ಟು 6.47 ಲಕ್ ಮತಗಳನ್ನು ಪಡೆದು ಗೆಲುವು ಸಾಧಿಸಿದ್ದರು. ಇದೀಗ ಪ್ರಿಯಾಂಕಾ ಗಾಂಧಿ 4.10 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ಕಳೆದ ಒಂದು ತಿಂಗಳಿಂದ ಪ್ರಿಯಾಂಕಾ ಪರ ಪ್ರಚಾರ ನಡೆಸಿದ್ದ ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ (Sonia Gandhi) ಅವರು 5 ಲಕ್ಷಕ್ಕೂ ಹೆಚ್ಚು ಅಂತರದಿಂದ ಪ್ರಿಯಾಂಕಾ ಗೆಲ್ಲುತ್ತಾರೆ ಎಂದು ಭವಿಷ್ಯ ನುಡಿದಿದ್ದರು.ಇದನ್ನೂ ಓದಿ: ಶಿಗ್ಗಾಂವಿ ಕ್ಷೇತ್ರದ ಜನರ ತೀರ್ಪನ್ನು ನಾನು ತಲೆಬಾಗಿ ಒಪ್ಪಿಕೊಳ್ತೇನೆ: ಬೊಮ್ಮಾಯಿ