ನವದೆಹಲಿ: ವಯನಾಡು (Wayanadu) ಸಂಸದೆ ಪ್ರಿಯಾಂಕಾ ಗಾಂಧಿ (Priyanka Gandhi) ತಮ್ಮ ಬ್ಯಾಗ್‌ಗಳ ಮೂಲಕ ಚರ್ಚೆಯಲ್ಲಿದ್ದಾರೆ. ನಿನ್ನೆ (ಡಿ.16) ಪ್ಯಾಲೆಸ್ತೀನ್ ಬೆಂಬಲಿಸುವ ಬ್ಯಾಗ್ ಧರಿಸಿ ಸಂಸತ್‌ಗೆ ಆಗಮಿಸಿದ್ದ ಅವರು ಇಂದು (ಡಿ.17) ಬಾಂಗ್ಲಾದೇಶದಲ್ಲಿ ದೌರ್ಜನ್ಯಕ್ಕೊಳಗಾದ ಅಲ್ಪಸಂಖ್ಯಾತರ ಜೊತೆಗಿದ್ದೇವೆ ಎನ್ನುವ ಟ್ಯಾಗ್ ಇರುವ ಧಿರಿಸನ್ನು ಹಾಕಿಕೊಂಡು ಕಾಣಿಸಿಕೊಂಡಿದ್ದಾರೆ.
ಬಾಂಗ್ಲಾದೇಶದ (Bangladesh) ಬ್ಯಾಗ್‌ನೊಂದಿಗೆ ಸಂಸತ್ ಆವರಣಕ್ಕೆ ಆಗಮಿಸಿದ ಅವರು ಬಾಂಗ್ಲಾದೇಶದಲ್ಲಿನ ಹಿಂದೂಗಳು ಮತ್ತು ಕ್ರಿಶ್ಚಿಯನ್ನರ ಮೇಲೆ ನಡೆದ ದೌರ್ಜನ್ಯವನ್ನು ವಿರೋಧಿಸಿ ಕಾಂಗ್ರೆಸ್ ಸಂಸದರು ನಡೆಸಿದ ಪ್ರತಿಭಟನೆಯನ್ನು ಮುನ್ನಡೆಸಿದರು.ಇದನ್ನೂ ಓದಿ: ವಿಶ್ವ ಚೆಸ್ ಚಾಂಪಿಯನ್ ಗುಕೇಶ್‌ಗೆ ತಮಿಳುನಾಡು ಸರ್ಕಾರದಿಂದ ಸನ್ಮಾನ – 5 ಕೋಟಿ ರೂ. ಬಹುಮಾನ!
Advertisement
Advertisement
ವಯನಾಡು ಚುನಾವಣಾ ಗೆಲುವಿನ ನಂತರ ತಮ್ಮ ಚೊಚ್ಚಲ ಸಂಸತ್ ಅಧಿವೇಶನದಲ್ಲಿ ಭಾಗವಹಿಸುತ್ತಿರುವ ಪ್ರಿಯಾಂಕಾ ಗಾಂಧಿ ಅವರು ಸೋಮವಾರ ಲೋಕಸಭೆಯ ಅಧಿವೇಶನದಲ್ಲಿ ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ಮೇಲೆ ನಡೆದ ದೌರ್ಜನ್ಯದ ವಿರುದ್ಧ ಧ್ವನಿ ಎತ್ತಿದರು.
Advertisement
अयं निजः परो वेति गणना लघुचेतसाम्।
उदारचरितानां तु वसुधैव कुटुम्बकम्॥ pic.twitter.com/qf47VDTdyS
— Priyanka Gandhi Vadra (@priyankagandhi) December 17, 2024
Advertisement
ಶೂನ್ಯ ವೇಳೆಯಲ್ಲಿ ಮಾತನಾಡಿದ ಅವರು, ಈ ದಾಳಿಯಿಂದ ಬಳಲುತ್ತಿರುವವರಿಗೆ ಸರ್ಕಾರ ಬೆಂಬಲ ನೀಡಬೇಕೆಂದು ಕರೆ ನೀಡಿದರು. ಸರ್ಕಾರವು ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರು, ಹಿಂದೂಗಳು ಮತ್ತು ಕ್ರಿಶ್ಚಿಯನ್ನರ ಮೇಲಿನ ದೌರ್ಜನ್ಯದ ವಿಷಯವನ್ನು ಎತ್ತಬೇಕು. ಈ ಬಗ್ಗೆ ಬಾಂಗ್ಲಾದೇಶ ಸರ್ಕಾರದೊಂದಿಗೆ ಚರ್ಚಿಸಬೇಕು ಮತ್ತು ನೋವಿನಲ್ಲಿರುವವರಿಗೆ ಬೆಂಬಲ ನೀಡಬೇಕು ಎಂದು ಉಲ್ಲೇಖಿಸಿದರು.ಇದನ್ನೂ ಓದಿ: ಕಾಲಾಯ ತಸ್ಮೈ ನಮಃ – ದರ್ಶನ್ ಬೇಲ್ ಬಗ್ಗೆ ಶ್ರೀಮುರಳಿ ರಿಯಾಕ್ಷನ್