ನವದೆಹಲಿ: ದೇಶದ ಬಹುತೇಕ ರಾಜ್ಯಗಳಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಕಿಚ್ಚು ಹೊತ್ತಿಕೊಂಡಿದ್ದು, ಈಶಾನ್ಯ ರಾಜ್ಯಗಳು ಹಾಗೂ ಪಶ್ಚಿಮ ಬಂಗಾಳದಲ್ಲಿನ ಹಿಂಸಾಚಾರದ ನಂತರ ದೆಹಲಿಯಲ್ಲೂ ಹೆಚ್ಚಾಗಿದೆ. ಈ ನಡುವೆಯೇ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರು ಧರಣಿ ನಡೆಸಲು ಪ್ರಾರಂಭಿಸಿದ್ದಾರೆ.
ಪ್ರಿಯಾಂಕಾ ಗಾಂಧಿಯವರು ಇಂಡಿಯಾ ಗೇಟ್ ಬಳಿ ಧರಣಿ ಆರಂಭಿಸಿದ್ದು, ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಕಾಯ್ದೆ ವಿರುದ್ಧ ಹೋರಾಟ ನಡೆಸುತ್ತಿರುವ ವಿದ್ಯಾರ್ಥಿ ಸಂಘಟನೆಗಳು ಅವರಿಗೆ ಬೆಂಬಲ ವ್ಯಕ್ತಪಡಿಸಿವೆ.
Advertisement
Priyanka Gandhi leads 'symbolic protest' at India Gate against police action on students over citizenship law
Read @ANI story | https://t.co/dFHRPaskUv pic.twitter.com/TutkxkF8r6
— ANI Digital (@ani_digital) December 16, 2019
Advertisement
ಇದಕ್ಕೂ ಮುನ್ನ ಸುದ್ದಿಗೋಷ್ಠಿಯಲ್ಲಿ ಹೇಳಿಕೆ ನೀಡಿದ್ದ ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೆವಾಲಾ, ಪ್ರಿಯಾಂಕಾ ಗಾಂಧಿ ಸೇರಿದಂತೆ ಪಕ್ಷದ ನಾಯಕರು ಎರಡು ಗಂಟೆಗಳ ಕಾಲ ಇಂಡಿಯಾ ಗೇಟ್ ಬಳಿ ಧರಣಿ ನಡೆಸುವುದಾಗಿ ಹೇಳಿದ್ದರು. ಇದು ದೇಶದ ವಿದ್ಯಾರ್ಥಿಗಳು ಹಾಗೂ ಯುವಕರ ಪ್ರಶ್ನೆಯಾಗಿದೆ. ಹೀಗಾಗಿ ಪ್ರಿಯಾಂಕಾ ಗಾಂಧಿ ನೇತೃತ್ವದಲ್ಲಿ ಸಂಜೆ ನಾಲ್ಕರಿಂದ 2ಗಂಟೆಗಳ ಕಾಲ ಸಾಂಕೇತಿಕ ಧರಣಿ ನಡೆಸುತ್ತೇವೆ ಎಂದು ಹೇಳಿದ್ದರು.
Advertisement
ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ವಿರೋಧ ಪಕ್ಷಗಳು ಆಕ್ರೋಶ ವ್ಯಕ್ತಪಡಿಸಿದ್ದು, ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಟೀಕಾಪ್ರಹಾರ ನಡೆಸುತ್ತಿವೆ. ಈ ಮಧ್ಯೆಯೇ ಈಶಾನ್ಯ ರಾಜ್ಯಗಳು ಹಾಗೂ ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ ಹೆಚ್ಚಾಗಿದೆ. ಪೌರತ್ವ ತಿದ್ದಪಡಿ ಮಸೂದೆಯು ಮೇಲ್ಮನೆ ಹಾಗೂ ಕೆಳಮನೆ ಎರಡರಲ್ಲೂ ಪಾಸ್ ಆಗಿ ರಾಷ್ಟ್ರಪತಿ ರಾಮ್‍ನಾಥ್ ಕೋವಿಂದ್ ಸಹ ಅಂಕಿತ ಹಾಕಿದ್ದು, ಕಾಯ್ದೆಯಾಗಿದೆ. ಇದರ ಬೆನ್ನಲ್ಲೇ ದೇಶದ ಬಹುತೇಕ ರಾಜ್ಯಗಳಲ್ಲಿ ಹೋರಾಟ ತೀವ್ರಗೊಂಡಿದೆ.
Advertisement
Delhi: Priyanka Gandhi Vadra, KC Venugopal, AK Antony, PL Punia, Ahmed Patel, Ambika Soni & other Congress leaders continue to sit on a symbolic protest near India Gate over police action during students' protests in Jamia Millia Islamia & Aligarh Muslim University(Uttar Pradesh) pic.twitter.com/s0v9NWzvns
— ANI (@ANI) December 16, 2019
ಅಸ್ಸಾಂ, ಮೆಘಾಲಯ ಸೇರಿದಂತೆ ಈಶಾನ್ಯದ ರಾಜ್ಯಗಳು ಹಾಗೂ ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ ಹೆಚ್ಚಾಗಿದ್ದು, ಬಸ್, ರೈಲುಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಪೌರತ್ವ ತಿದ್ದುಪಡಿ ಕಾಯ್ದೆಯು ಪಾಕಿಸ್ತಾನ, ಬಾಂಗ್ಲಾದೇಶ ಹಾಗೂ ಅಫ್ಘಾನಿಸ್ಥಾನ ಅಲ್ಪಸಂಖ್ಯಾತರಿಗೆ ಪೌರತ್ವ ವಿಸ್ತರಿಸುವುದಾಗಿದೆ.