ದೆಹಲಿ: ಉತ್ತರ ಪ್ರದೇಶ ಪೂರ್ವದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಅವರು ಚುನಾವಣಾ ಪ್ರಚಾರ ನಡೆಸುವ ಮೂಲಕ ಸಮಯ ವ್ಯರ್ಥ ಮಾಡುತ್ತಿದ್ದಾರೆ ಎಂದು ದೆಹಲಿ ಮುಖ್ಯಮಂತ್ರಿ, ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಅರವಿಂದ್ ಕೇಜ್ರಿವಾಲ್ ಕಿಡಿಕಾರಿದ್ದಾರೆ.
ದೆಹಲಿ ಎಎಪಿ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರಿಯಾಂಕ ಗಾಂಧಿ ಅವರು ಯಾಕೆ ಮಧ್ಯಪ್ರದೇಶ ಹಾಗೂ ರಾಜಸ್ಥಾನದಲ್ಲಿ ಪ್ರಚಾರ ಮಾಡುತ್ತಿಲ್ಲ. ಉತ್ತರ ಪ್ರದೇಶದಲ್ಲಿ ಬಹುಜನ ಸಮಾಜ ಪಕ್ಷ (ಬಿಎಸ್‍ಪಿ), ಸಮಾಜವಾದಿ ಪಕ್ಷ (ಎಸ್‍ಪಿ) ವಿರುದ್ಧ ಪ್ರಚಾರ ಮಾಡುತ್ತಿದ್ದಾರೆ. ದೆಹಲಿಯಲ್ಲಿ ನಮ್ಮ ವಿರುದ್ಧವೇ ಪ್ರಚಾರ ಮಾಡುತ್ತಿದ್ದಾರೆ. ಈ ಮೂಲಕ ಸುಮ್ಮನೆ ತಮ್ಮ ಸಮಯವನ್ನು ವ್ಯರ್ಥ ಮಾಡುತ್ತಿದ್ದಾರೆ ಎಂದು ಗುಡುಗಿದರು.
Advertisement
Delhi CM A Kejriwal: She (Priyanka Gandhi) is wasting her time,why doesn't she campaign in Rajasthan&MP?She's doing rallies in UP against SP-BSP,she's doing rallies in Delhi against AAP. Both the brother&the sister aren't going to those places where there's direct fight with BJP. pic.twitter.com/jTEsOmIJjT
— ANI (@ANI) May 8, 2019
Advertisement
ಪ್ರಿಯಾಂಕ ಗಾಂಧಿ ಹಾಗೂ ಸಹೋದರ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ನೇರವಾಗಿ ಬಿಜೆಪಿ ವಿರುದ್ಧ ಸ್ಪರ್ಧೆ ಮಾಡುತ್ತಿರುವ ಲೋಕಸಭಾ ಕ್ಷೇತ್ರಗಳಲ್ಲಿ ಪ್ರಚಾರ ಮಾಡುತ್ತಿಲ್ಲ ಎಂದು ದೂರಿದರು.
Advertisement
ಮಧ್ಯಪ್ರದೇಶ ಹಾಗೂ ರಾಜಸ್ಥಾನದಲ್ಲಿ ಕಾಂಗ್ರೆಸ್ ಸರ್ಕಾರವಿದೆ. ಮಧ್ಯಪ್ರದೇಶದ ಭೋಪಾಲ್, ಸಾಗರ್ ಸೇರಿದಂತೆ 8 ಲೋಕಸಭಾ ಕ್ಷೇತ್ರಗಳ ಮತದಾನ ಮೇ 19ರಂದು ನಡೆಯಲಿದೆ. ಉಜೈನಿ, ಧಾರ್, ಇಂದೋರ್ ಸೇರಿದಿಂತೆ 8 ಕ್ಷೇತ್ರಗಳ ಮತದಾನ ಮೇ 19ರಂದು ನಡೆಯಲಿದೆ.
Advertisement
ದೆಹಲಿಯಲ್ಲಿ ಒಟ್ಟು 7 ಲೋಕಸಭಾ ಕ್ಷೇತ್ರಗಳಿದ್ದು, ಎಲ್ಲ ಕ್ಷೇತ್ರಗಳ ಮತದಾನ ಮೇ 19ರಂದು ನಡೆಯಲಿದ್ದು, ಫಲಿತಾಂಶ ಮೇ 23ರಂದು ಹೊರ ಬೀಳಲಿದೆ.