ವಯನಾಡಿನಲ್ಲಿ ಪ್ರಿಯಾಂಕಾಗೆ 68,000 ಮತಗಳ ಭರ್ಜರಿ ಮುನ್ನಡೆ

Public TV
1 Min Read
Priyanka Gandhi

ತಿರುವನಂತಪುರಂ: ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ (Priyanka Gandhi) ಅವರು ಕೇರಳ ವಯನಾಡ್‌ ಲೋಕಸಭಾ ಕ್ಷೇತ್ರದಲ್ಲಿ 68,000 ಮತಗಳೊಂದಿಗೆ ಮುನ್ನಡೆ ಸಾಧಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರ (Congress Workers) ಸಂಭ್ರಮ ಮುಗಿಲು ಮುಟ್ಟಿದೆ.

ರಾಹುಲ್‌ ಗಾಂಧಿ (Rahul Gandhi) ಅವರ ರಾಜೀನಾಮೆಯಿಂದ ತೆರವಾದ ವಯನಾಡ್‌ ಲೋಕಸಭಾ ಕ್ಷೇತ್ರದಲ್ಲಿ (Wayanad Lok Sabha Constituency) ಅವರ ಸಹೋದರಿ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಿದ್ದು, ಚೊಚ್ಚಲ ಗೆಲುವು ಸಾಧಿಸುವ ಉತ್ಸಾಹದಲ್ಲಿದ್ದಾರೆ. ಇದನ್ನೂ ಓದಿ: ಗಯಾನಾ ಅಧ್ಯಕ್ಷಗೆ ಚನ್ನಪಟ್ಟಣ ಗೊಂಬೆ ಗಿಫ್ಟ್ ನೀಡಿದ ಮೋದಿ

Priyanka Gandhi 1

ಈವರೆಗೆ ನಡೆದ ಮತ ಎಣಿಕೆಯಲ್ಲಿ ಪ್ರಿಯಾಂಕಾ ಗಾಂಧಿ 68,000 ಮತಗಳನ್ನು ಗಳಿಸಿದ್ದಾರೆ. ಸಿಪಿಐನ ಹಿರಿಯ ನಾಯಕ ಸತ್ಯನ್ ಮೊಕೇರಿ 20,000 ಮತಗಳು ಹಾಗೂ ಬಿಜೆಪಿಯ ನವ್ಯಾ ಹರಿದಾಸ್ 11,235 ಮತಗಳೊಂದಿಗೆ 3ನೇ ಸ್ಥಾನದಲ್ಲಿದ್ದಾರೆ. ಪ್ರಿಯಾಂಕಾ ಗಾಂಧಿ ಸೇರಿದಂತೆ ಒಟ್ಟು 16 ಅಭ್ಯರ್ಥಿಗಳು ವಯನಾಡ್‌ ಉಪಚುನಾವಣಾ ಕಣದಲ್ಲಿದ್ದಾರೆ. ಇದನ್ನೂ ಓದಿ: ಮಹಾರಾಷ್ಟ್ರ, ಜಾರ್ಖಂಡ್ ವಿಧಾನಸಭಾ ಚುನಾವಣಾ ಮತ ಎಣಿಕೆ ಆರಂಭ

Wayanad Bypolls Priyanka Gandhi Declares Assets Worth Rs 12 Crore 3

2019ರ ಲೋಕಸಭಾ ಚುನಾವಣೆಯಲ್ಲಿ ಅಮೇಥಿಯಲ್ಲಿ ಸ್ಮೃತಿ ಇರಾನಿ ಎದುರು ಸೋತಿದ್ದ ರಾಹುಲ್‌ ಗಾಂಧಿ, ವಯನಾಡ್‌ ಕ್ಷೇತ್ರದಿಂದ ಗೆದ್ದು ಸಂಸದರಾಗಿದ್ದರು. 2024ರ ಲೋಕಸಭಾ ಚುನಾವಣೆಯಲ್ಲಿ ರಾಹುಲ್‌ ವಯನಾಡ್‌ ಮತ್ತು ರಾಯ್‌ ಬರೇಲಿ ಎರಡೂ ಕ್ಷೇತ್ರದಲ್ಲಿ ಸ್ಪರ್ಧಿಸಿ ಭಾರಿ ಮತಗಳ ಅಂತರದಿಂದ ಗೆದ್ದಿದ್ದರು. ಸೋನಿಯಾ ಗಾಂಧಿ ಅವರು ರಾಜ್ಯಸಭೆಗೆ ಪ್ರವೇಶಿಸಿದ್ದರಿಂದ ರಾಯ್‌ ಬರೇಲಿ ಕ್ಷೇತ್ರ ಉಳಿಸಿಕೊಂಡ ರಾಹುಲ್‌ ಗಾಂಧಿ, ವಯನಾಡ್‌ ಕ್ಷೇತ್ರವನ್ನು ಸಹೋದರಿಗೆ ಬಿಟ್ಟುಕೊಟ್ಟರು.

ಕಳೆದ ಒಂದು ತಿಂಗಳಿಂದ ಪ್ರಿಯಾಂಕಾ ಪರ ಪ್ರಚಾರ ನಡೆಸಿದ್ದ ಕಾಂಗ್ರೆಸ್‌ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರು 5 ಲಕ್ಷಕ್ಕೂ ಹೆಚ್ಚು ಅಂತರದಿಂದ ಪ್ರಿಯಾಂಕಾ ಗೆಲ್ಲುತ್ತಾರೆ ಎಂದು ಭವಿಷ್ಯ ನುಡಿದಿದ್ದರು. ಇದನ್ನೂ ಓದಿ: ಮಹಾರಾಷ್ಟ್ರ ಮತ ಎಣಿಕೆ: ಎನ್‌ಡಿಎಗೆ ಆರಂಭಿಕ ಮುನ್ನಡೆ

Share This Article