ನವದೆಹಲಿ: ಕಾಂಗ್ರೆಸ್ (Congress) ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ (Priyanka Gandhi Vadra) ಅವರು ದೆಹಲಿಯ ಜಂತರ್ ಮಂತರ್‌ನಲ್ಲಿ (Jantar Mantar) ಧರಣಿ ನಡೆಸುತ್ತಿದ್ದ ಮಹಿಳಾ ಕುಸ್ತಿಪಟುಗಳನ್ನು ಶನಿವಾರ ಮುಂಜಾನೆ ಭೇಟಿಯಾಗಿದ್ದು, ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.
Advertisement
ಕುಸ್ತಿ ಫೆಡರೇಶನ್ ಆಫ್ ಇಂಡಿಯಾ ಮುಖ್ಯಸ್ಥ ಹಾಗೂ ಬಿಜೆಪಿ ಸಂಸದ ಬ್ರಿಜ್‍ಭೂಷಣ್ ಶರಣ್ ಸಿಂಗ್ (Brij Bhushan Sharan Singh) ವಿರುದ್ಧ ಲೈಂಗಿಕ ದೌರ್ಜನ್ಯ (Sexual Harassment) ಆರೋಪದ ಮೇಲೆ ಪ್ರತಿಭಟನೆ ನಡೆಯುತ್ತಿದೆ. ಪ್ರತಿಭಟನೆಯ ನೇತೃತ್ವ ವಹಿಸಿರುವ ಮಹಿಳಾ ಕುಸ್ತಿಪಟುಗಳಾದ ಸಾಕ್ಷಿ ಮಲಿಕ್ (Sakshi Malik), ವಿನೇಶ್ ಫೋಗಟ್ (Vinesh Phogat) ಅವರನ್ನು ಪ್ರಿಯಾಂಕಾ ಭೇಟಿಯಾಗಿದ್ದಾರೆ. ಇದನ್ನೂ ಓದಿ: ಕುಸ್ತಿ ಪಟುಗಳಿಗೆ ನ್ಯಾಯ ಸಿಗುತ್ತಾ – ಬ್ಯಾಟ್‍ನಂತೆ ಚಾಟಿ ಬೀಸಿದ ಕ್ರಿಕೆಟ್ ದಿಗ್ಗಜ ಕಪಿಲ್ ದೇವ್
Advertisement
Advertisement
ಬ್ರಿಜ್‍ಭೂಷಣ್ ಶರಣ್ ಸಿಂಗ್ ಅವರನ್ನು ಬಂಧಿಸುವಂತೆ ಒತ್ತಾಯಿಸಿ ನಡೆಯುತ್ತಿರುವ ಪ್ರತಿಭಟನೆಗೆ ಒಲಿಂಪಿಕ್ಸ್ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾ ಹಾಗೂ ಭಾರತದ ಮಾಜಿ ಕ್ರಿಕೆಟ್ ತಾರೆ ಕಪಿಲ್ ದೇವ್ ಸಹ ಬೆಂಬಲ ಘೋಷಿಸಿದ್ದರು.
Advertisement
ಸುಪ್ರೀಂ ಕೋರ್ಟ್ (Supreme Court) ಆದೇಶದ ನಂತರ ದೆಹಲಿ ಪೊಲೀಸರು (Delhi Police) ಶುಕ್ರವಾರ ಕುಸ್ತಿ ಫೆಡರೇಶನ್ ಆಫ್ ಇಂಡಿಯಾ ಮುಖ್ಯಸ್ಥನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಪೊಲೀಸ್ ಕ್ರಮದ ಭರವಸೆಯ ನಂತರವೂ ಕುಸ್ತಿಪಟುಗಳು ತಕ್ಷಣ ಬಂಧನಕ್ಕೆ ಒತ್ತಾಯಿಸಿ ತಮ್ಮ ಪ್ರತಿಭಟನೆಯನ್ನು ಮುಂದುವರೆಸುವುದಾಗಿ ಹೇಳಿದ್ದಾರೆ.
ನಾವು ಸುಪ್ರೀಂ ಕೋರ್ಟ್‍ನ ಆದೇಶವನ್ನು ಗೌರವಿಸುತ್ತೇವೆ. ಆದರೆ ನಮಗೆ ದೆಹಲಿ ಪೊಲೀಸರ ಮೇಲೆ ನಂಬಿಕೆ ಇಲ್ಲ. ಈ ಹೋರಾಟ ಕೇವಲ ಎಫ್‌ಐಆರ್‌ಗಾಗಿ ಅಲ್ಲ. ಈ ಹೋರಾಟ ಅವರಂತಹವರನ್ನು ಶಿಕ್ಷಿಸಲು. ಅವರು ಜೈಲಿನಲ್ಲಿರಬೇಕು ಮತ್ತು ಅವರ ಅಧಿಕಾರವನ್ನು ಕಸಿದುಕೊಳ್ಳಬೇಕು ಎಂದು ಕುಸ್ತಿಪಟುಗಳು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಕುಸ್ತಿಪಟುಗಳು ಬೀದಿಗಿಳಿದು ಪ್ರತಿಭಟನೆ ಮಾಡ್ತಿರೋದು ದೇಶದ ಘನತೆಗೆ ಧಕ್ಕೆ – ಪಿ.ಟಿ ಉಷಾ ಬೇಸರ