ಲಕ್ನೋ: ಉತ್ತರಪ್ರದೇಶಕ್ಕೆ ನಾನೇ ಸಿಎಂ ಮುಖ ಎಂದು ಎಐಸಿಸಿ ನಾಯಕಿ ಪ್ರಿಯಾಂಕಾ ಗಾಂಧಿ ಘೋಷಣೆ ಮಾಡಿದ್ದಾರೆ.
ಚುನಾವಣೆ ಹಿನ್ನಲೆಯಲ್ಲಿ ಇಂದು ಕಾಂಗ್ರೆಸ್ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದಾರೆ. ಈ ವೇಳೆ ಮಾಧ್ಯಮಗಳು ನಿಮ್ಮ ಪಕ್ಷದ ಸಿಎಂ ಅಭ್ಯರ್ಥಿ ಯಾರು ಎಂದು ಕೇಳಿದ ಪ್ರಶ್ನೆಗೆ, ಉತ್ತರಿಸಿದ ಪ್ರಿಯಾಂಕಾ ಗಾಂಧಿ ನಿಮಗೆ ಬೇರೆ ಮುಖ ಸಿಎಂ ಸ್ಥಾನಕ್ಕೆ ಕಾಣುತ್ತಿದೆಯೇ? ಸಿಎಂ ಅಭ್ಯರ್ಥಿಯಾಗಿ ನನ್ನ ಮುಖವನ್ನು ನೋಡಬಹುದು ಅಲ್ಲವೇ ಎಂದು ಪ್ರಶ್ನೆ ಮಾಡಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಸುಳಿವು ನೀಡಿದರು. ಈ ಕುರಿತಾಗಿ ಚರ್ಚೆ ಶುರುವಾಗಿದೆ. ಇದನ್ನೂ ಓದಿ: ರೆಮೋ ಡಿಸೋಜಾ ಸೋದರ ಮಾವ ಸಾವು – ಆತ್ಮಹತ್ಯೆ ಶಂಕೆ
Advertisement
LIVE: Shri @RahulGandhi and Smt. @priyankagandhi launch UP’s Youth Manifesto, at the AICC HQ.#कांग्रेस_का_भर्ती_विधानhttps://t.co/Wsq9Gy2LjK
— Karnataka Congress (@INCKarnataka) January 21, 2022
Advertisement
ಈ ಹಿಂದೆ ಪ್ರಿಯಾಂಕಾ ಗಾಂಧಿ, ಮುಂಬರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ತನ್ನ ಶೇ.40 ಟಿಕೆಟ್‍ಗಳನ್ನು ಮಹಿಳೆಯರಿಗೆ ನೀಡುವುದಾಗಿ ಪ್ರಿಯಾಂಕಾ ಗಾಂಧಿ ಘೋಷಿಸಿದ್ದರು. ಸಿಎಂ ಸ್ಥಾನಕ್ಕೆ ಪಕ್ಷದ ಅಭ್ಯರ್ಥಿಯಾಗಿ ಮಹಿಳೆಯೊಬ್ಬರನ್ನು ನಾಮನಿರ್ದೇಶನ ಮಾಡಬಹುದು ಎಂಬ ಊಹಾಪೋಹ ಸುದ್ದಿಗಳು ಹರಿದಾಡುತ್ತಿದ್ದವು. ಇದನ್ನೂ ಓದಿ: ಕೆಲವರಿಗೆ ದೇಶ ಭಕ್ತಿ ಅರ್ಥವಾಗುವುದಿಲ್ಲ: ರಾಹುಲ್ ಗಾಂಧಿ
Advertisement
Congress leader Rahul Gandhi & Priyanka Gandhi launch Uttar Pradesh’s Youth Manifesto, at the All India Congress Committee (AICC) HQ in Delhi pic.twitter.com/lMzXVdzIic
— ANI (@ANI) January 21, 2022
Advertisement
ಕಾಂಗ್ರೆಸ್ ಈ ವರ್ಷ ಯುಪಿಯಲ್ಲಿ ಮಹಿಳಾ ಸಮಸ್ಯೆಗಳನ್ನು ಚುನಾವಣಾ ಪ್ರಣಾಳಿಕೆಯಲ್ಲಿ ತೆಗೆದುಕೊಂಡಿದೆ. ಈ ಹಿಂದೆ ಪ್ರಿಯಾಂಕಾ ಗಾಂಧಿ ಮಹಿಳಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಸರ್ಕಾರಿ ಉದ್ಯೋಗಗಳಲ್ಲಿ ಹೆಣ್ಣು ಮಕ್ಕಳಿಗೆ ಶೇ.40ರಷ್ಟು ಮೀಸಲಾತಿ ನೀಡುತ್ತೇವೆ. ರಾಜ್ಯದಲ್ಲಿ ಉತ್ತಮ ಉದ್ಯೋಗಾವಕಾಶಗಳಿಗಾಗಿ ಉದ್ಯೋಗ ಕ್ಯಾಲೆಂಡರ್ ತಯಾರಿಸಿ ಕಟ್ಟುನಿಟ್ಟಾಗಿ ಅನುಸರಿಸಲಾಗುವುದು. ನಾವು ಸ್ಟಾರ್ಟ್‌ಅಪ್‌ಗಳಿಗೆ 5000 ಕೋಟಿ ರೂಪಾಯಿ ನೀಡುತ್ತೇವೆ. ಪೊಲೀಸ್ ಇಲಾಖೆಯಲ್ಲಿ 1 ಲಕ್ಷ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.
We will provide 40% reservations for girls in govt jobs. A job calendar will be made and strictly followed for better employment opportunities in the state. We will provide Rs 5000 cr for startups. 1 lakh vacant posts will be filled in the Police department: Priyanka Gandhi Vadra pic.twitter.com/eVCMOr9qnC
— ANI UP/Uttarakhand (@ANINewsUP) January 21, 2022
ರಾಜ್ಯದಲ್ಲಿ ಫೆಬ್ರವರಿ 10 ರಿಂದ ಮಾರ್ಚ್ 7 ರ ನಡುವೆ ಏಳು ಹಂತಗಳಲ್ಲಿ ಮತದಾನ ನಡೆಯಲಿದ್ದು, ಮಾರ್ಚ್ 10 ರಂದು ಫಲಿತಾಂಶ ಪ್ರಕಟವಾಗಲಿದೆ.