ಲಕ್ನೋ: ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಗೂ ಮುನ್ನವೇ ರಾಜ್ಯದಲ್ಲಿ ಸರ್ಕಾರ ರಚನೆಯಾದ ಬಳಿಕ ತಮ್ಮ ಪಕ್ಷದಿಂದ 10 ಲಕ್ಷ ರೂಪಾಯಿವರೆಗೆ ಉಚಿತ ಚಿಕಿತ್ಸೆ ಹಾಗೂ ಆರೋಗ್ಯ ಸೌಲಭ್ಯಗಳನ್ನು ಒದಗಿಸಲಾಗುತ್ತದೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಭರವಸೆ ನೀಡಿದ್ದಾರೆ.
ಈ ಕುರಿತಂತೆ ಪ್ರಿಯಾಂಕಾ ಗಾಂಧಿ ತಮ್ಮ ಟ್ವಿಟ್ಟರ್‌ನಲ್ಲಿ, ಕೋವಿಡ್-19 ಸಾಂಕ್ರಾಮಿಕ ಸಮಯದಲ್ಲಿ ಉತ್ತರ ಪ್ರದೇಶದಲ್ಲಿ ಪ್ರತಿಯೊಬ್ಬರ ಆರೋಗ್ಯದ ಸ್ಥಿತಿ ಹೇಗಿತ್ತು ಎಂಬುವುದನ್ನು ನೋಡಿದ್ದೇವೆ. ಇದು ಆಡಳಿತ ಸರ್ಕಾರದ ನಿರಾಸಕ್ತಿ ಮತ್ತು ನಿರ್ಲಕ್ಷ್ಯದ ಪರಿಣಾಮವಾಗಿತ್ತು. ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಸರ್ಕಾರ ರಚಿಸಿದ ನಂತರ ಪ್ರಣಾಳಿಕೆ ಸಮಿತಿಯ ಒಪ್ಪಿಗೆಯೊಂದಿಗೆ, ಯಾವುದೇ ರೋಗಕ್ಕೂ ಉಚಿತವಾಗಿ ಚಿಕಿತ್ಸೆ ನೀಡಲು ಪಕ್ಷ ನಿರ್ಧರಿಸಿದ್ದು, 10 ಲಕ್ಷದವರೆಗೂ ಚಿಕಿತ್ಸೆಯ ವೆಚ್ಚ ಸರ್ಕಾರ ಭರಿಸುತ್ತದೆ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಕಿನ್ನೌರ್‌ನಲ್ಲಿ ಭಾರೀ ಹಿಮಪಾತಕ್ಕೆ ಮೂವರು ಬಲಿ – 10 ಮಂದಿಯ ರಕ್ಷಣೆ
- Advertisement3
- Advertisement
ಈ ಮುನ್ನ ಮುಂದಿನ ವರ್ಷದ ವಿಧಾನಸಭಾ ಚುನಾವಣೆಯಲ್ಲಿ ಅಧಿಕಾರಕ್ಕೆ ಬಂದರೆ ರೈತರ ಸಾಲ ಮನ್ನಾ ಮತ್ತು 20 ಲಕ್ಷ ಜನರಿಗೆ ಉದ್ಯೋಗ ಸೇರಿದಂತೆ ಏಳು ಭರವಸೆಗಳನ್ನು ಈಡೇರಿಸುವಂತೆ ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ಕಾಂಗ್ರೆಸ್ ಪ್ರತಿಜ್ಞಾ ಯಾತ್ರೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಸಿಗದ ಜಾಮೀನು – ಜೈಲಿನಲ್ಲಿ ರಾಮನ ಮೊರೆ ಹೋದ ಆರ್ಯನ್ ಖಾನ್
कोरोना काल में और अभी प्रदेश में फैले बुखार में सरकारी उपेक्षा के चलते उप्र की स्वास्थ्य व्यवस्था की जर्जर हालत सबने देखी।
सस्ते व अच्छे इलाज के लिए घोषणापत्र समिति की सहमति से यूपी कांग्रेस ने निर्णय लिया है कि सरकार बनने पर
‘कोई भी हो बीमारी
मुफ्त होगा 10 लाख तक इलाज सरकारी।’ pic.twitter.com/wJbTZXbjmk
— Priyanka Gandhi Vadra (@priyankagandhi) October 25, 2021
ಇದೇ ವೇಳೆ ಗೋಧಿ ಮತ್ತು ಭತ್ತವನ್ನು ಪ್ರತಿ ಕ್ವಿಂಟಾಲ್‍ಗೆ 2,500ರೂ. ಮತ್ತು ಕಬ್ಬನ್ನು 400ರೂ. ದೊರಕಿಸಿಕೊಡುವಂತೆ ಮತ್ತು ಎಲ್ಲರ ವಿದ್ಯುತ್ ಬಿಲ್ ಅನ್ನು ಅರ್ಧದಷ್ಟು ಕಡಿಮೆಗೊಳಿಸುವುದಾಗಿ ಹೇಳಿದ್ದಾರೆ. ಅಲ್ಲದೇ ಚುನಾವಣೆಯಲ್ಲಿ ಗೆದ್ದ ಮಹಿಳೆಯರಿಗೆ ತಮ್ಮ ಪಕ್ಷದಲ್ಲಿ ಶೇಕಡಾ 40 ರಷ್ಟು ಟಿಕೆಟ್ ನೀಡುವುದಾಗಿ ಘೋಷಿಸಿದ್ದಾರೆ. ಇದನ್ನೂ ಓದಿ: ಸೌಂದರ್ಯ ಜಗದೀಶ್ ಕುಟುಂಬದಿಂದ ಹಲ್ಲೆ ಕೇಸ್ – ಪತ್ನಿ ರೇಖಾ, ಪುತ್ರ ಸ್ನೇಹಿತ್‍ಗೆ ಪೊಲೀಸರಿಂದ ನೋಟಿಸ್
12ನೇ ತರಗತಿ ತೇರ್ಗಡೆಯಾದ ಬಾಲಕಿಯರಿಗೆ ಸ್ಮಾರ್ಟ್‍ಫೋನ್ ಮತ್ತು ಪದವೀಧರ ಬಾಲಕಿಯರಿಗೆ ಇ-ಸ್ಕೂಟರ್ ನೀಡುವುದಾಗಿ ತಿಳಿಸಿದ್ದಾರೆ ಮತ್ತು ಕೋವಿಡ್ ಬಿಕ್ಕಟ್ಟಿನಿಂದ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಕುಟುಂಬಗಳಿಗೆ 25,000 ರೂಪಾಯಿ ನೀಡುವುದಾಗಿ ಭರವಸೆ ನೀಡಿದ್ದಾರೆ.