ನವದೆಹಲಿ: ರೈತರ ಸತ್ಯಾಗ್ರಹವು ಒಂದು ವರ್ಷದ ಪೂರ್ಣಗೊಳಿಸಿದ್ದು, ಬಿಜೆಪಿ ಸರ್ಕಾರದ ದುರಹಂಕಾರ ಮತ್ತು ಹುತಾತ್ಮರಾದ 700 ರೈತರ ತ್ಯಾಗವನ್ನು ನೆನಪಿಸಲಿದೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶವನ್ನು ಹೊರ ಹಾಕಿದ್ದಾರೆ.
ಒಂದು ವರ್ಷದ ರೈತ ಚಳವಳಿಯಾಗಿದೆ. ರೈತರ ಅಚಲ ಸತ್ಯಾಗ್ರಹ, 700 ರೈತರ ಹುತಾತ್ಮತೆ ಮತ್ತು ನಿರ್ದಯ ಬಿಜೆಪಿ ಸರ್ಕಾರದ ದುರಹಂಕಾರ ಮತ್ತು ಅನ್ನದಾತರ ಮೇಲಿನ ದೌರ್ಜನ್ಯಕ್ಕೆ ಹೆಸರುವಾಸಿಯಾಗಲಿದೆ. ಆದರೆ ರೈತನ ಮೆರಗು ಭಾರತದಲ್ಲಿ ಸದಾ ಇತ್ತು, ಇದ್ದೇ ಇರುತ್ತದೆ ಮತ್ತು ಇರುತ್ತದೆ. ರೈತರ ಹೋರಾಟಕ್ಕೆ ಸಿಕ್ಕ ಜಯವೇ ಇದಕ್ಕೆ ಸಾಕ್ಷಿ ಎಂದು ಪ್ರಿಯಾಂಕಾ ಗಾಂಧಿ ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಕೃಷಿ ಕಾಯ್ದೆ ವಾಪಸ್ ಪಡೆದ ಮೋದಿ ಸರ್ಕಾರ
Advertisement
किसान आंदोलन का एक साल
किसानों के अडिग सत्याग्रह, 700 किसानों की शहादत और निर्मम भाजपा सरकार के अहंकार व अन्नदाताओं पर अत्याचार के लिए जाना जाएगा।
लेकिन भारत में किसान की जय-जयकार हमेशा थी, है और रहेगी।
किसानों के संघर्ष की जीत इसका प्रमाण है।
जय किसान। pic.twitter.com/KCWnLNog0B
— Priyanka Gandhi Vadra (@priyankagandhi) November 26, 2021
Advertisement
ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿದ ರೈತರು ಕಳೆದ ವರ್ಷದ 26ರಿಂದ ದೆಹಲಿಯ ವಿವಿಧ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಪ್ರತಿಭಟನೆಗೆ ಇಂದಿಗೆ ಒಂದು ವರ್ಷಗಳು ಕಳೆಯುತ್ತಿದೆ. ಒಂದು ವರ್ಷದ ರೈತರ ಸತ್ಯಾಗ್ರಹವು ರೈತರ ದೃಢ ನಿಲುವು ಮತ್ತು ಅನ್ನದಾತರ ಮೇಲೆ ಸರ್ಕಾರ ನಡೆಸಿದ ದೌರ್ಜನ್ಯವನ್ನು ನೆನಪಿಸುತ್ತದೆ. ಆದರೆ ಭಾರತದಲ್ಲಿ ರೈತರನ್ನು ಎಂದಿಗೂ ಕಡೆಗಣಿಸಲು ಸಾಧ್ಯವಿಲ್ಲ. ರೈತರ ಹೋರಾಟಕ್ಕೆ ಸಿಕ್ಕ ಗೆಲುವೇ ಇದಕ್ಕೆ ನಿದರ್ಶನ ಎಂದು ಹೇಳಿದ್ದಾರೆ. ಅಲ್ಲದೆ, ಜೈ ಕಿಸಾನ್ ಎಂದು ಘೋಷಣೆಯನ್ನೂ ಸೇರಿಸಿದ್ದಾರೆ. ಇದನ್ನೂ ಓದಿ: ರೈತರ ಹೋರಾಟಕ್ಕೆ ಇಂದಿಗೆ ಒಂದು ವರ್ಷ – ಸಿಂಘು, ಟಿಕ್ರಿ ಗಡಿಯಲ್ಲಿ ಅನ್ನದಾತರ ಮಹಾಪಂಚಾಯತ್
Advertisement
Advertisement
ಕಳೆದ ವರ್ಷ ಅಂದರೆ 2020ರ ಸೆಪ್ಟೆಂಬರ್ 17ರಂದು ಪ್ರಧಾನಿ ಮೋದಿ ಸರ್ಕಾರ ಮೂರು ಕೃಷಿ ಕಾಯ್ದೆಗಳನ್ನು ಜಾರಿಗೆ ತಂದಿತ್ತು. ಆದರೆ ಈ ಕೃಷಿ ಕಾಯ್ದೆಗಳ ವಿರುದ್ಧ ನವೆಂಬರ್ 26ರಂದು ರೈತರು ಬೃಹತ್ ಹೋರಾಟ ಆರಂಭಿಸಿದ್ದರು. ಸದ್ಯ ರೈತರು ಹೋರಾಟ ಆರಂಭಿಸಿ ಇಂದಿಗೆ 1 ವರ್ಷ ಪೂರ್ಣಗೊಂಡಿದೆ. ಈ ಹಿನ್ನೆಲೆಯಲ್ಲಿ ಇಂದು ದೆಹಲಿ ಸಂಪರ್ಕಿಸುವ ಸಿಂಘು ಮತ್ತು ಟಿಕ್ರಿ ಗಡಿಯಲ್ಲಿ ರೈತರ ಮಹಾ ಪಂಚಾಯತ್ ನಡೆಯಲಿದೆ. ಹೀಗಾಗಿ ಪಂಜಾಬ್ ಮತ್ತು ಹರಿಯಾಣದಿಂದ ರೈತರು ದೆಹಲಿ ಗಡಿಗಳತ್ತ ರೈಲು, ರಸ್ತೆ ಮಾರ್ಗವಾಗಿ ಬರುತ್ತಿದ್ದಾರೆ.