ನವದೆಹಲಿ: ಹಣದುಬ್ಬರದ ವಿರುದ್ಧ ಕಾಂಗ್ರೆಸ್ ಜೈಪುರದಲ್ಲಿ ಹಮ್ಮಿಕೊಂಡಿರುವ ಮೆಹಂಗೈ ಹಠಾವೋ ರ‍್ಯಾಲಿಯಲ್ಲಿ ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾಗ್ದಾಳಿ ನಡೆಸಿದರು.
Advertisement
ಕಾಂಗ್ರೆಸ್ 70 ವರ್ಷದಲ್ಲಿ ಏನು ಅಭಿವೃದ್ಧಿ ಮಾಡಿದೆ ಎಂದು ಬಿಜೆಪಿಗರು ಪ್ರಶ್ನಿಸುತ್ತಾರೆ. ವಿಚಿತ್ರ ಎಂದರೆ ಆ 70 ವರ್ಷಗಳಲ್ಲಿ ಕಾಂಗ್ರೆಸ್ ನಿರ್ಮಿಸಿದ ಎಲ್ಲವನ್ನೂ ಇದೀಗ ಬಿಜೆಪಿಯ 7 ವರ್ಷದ ಆಡಳಿತದಲ್ಲಿ ಮಾರಾಟ ಮಾಡಲಾಗುತ್ತಿದೆ ಎಂದು ಆಡಳಿತ ಪಕ್ಷದ ವಿರುದ್ಧವಾಗಿ ಕಿಡಿಕಾರಿದ್ದಾರೆ. ಇದನ್ನೂ ಓದಿ: ಸೂಪರ್ ಸ್ಟಾರ್ ರಜನಿಕಾಂತ್‍ಗೆ 71ನೇ ಹುಟ್ಟುಹಬ್ಬದ ಸಂಭ್ರಮ
Advertisement
केंद्र की भाजपा सरकार का लक्ष्य है: झूठ, लालच और लूट।
आज पूरा देश भाजपा सरकार की झूठ, लालच और लूट की नीतियों के खिलाफ एकजुट है।
महंगाई हटाओ रैली, जयपुर। pic.twitter.com/m6Zl2AQhYj
— Priyanka Gandhi Vadra (@priyankagandhi) December 12, 2021
Advertisement
7 ವರ್ಷಗಳ ಬಿಜೆಪಿ ಆಡಳಿತದಲ್ಲಿ ಆರೋಗ್ಯ ಸೇವೆಗಾಗಿ ಒಂದೇ ಒಂದು ಏಮ್ಸ್ ಸಂಸ್ಥೆಯನ್ನು ನಿರ್ಮಾಣ ಮಾಡಲಾಗಿದೆಯೇ?, ನೀವು ಬಳಸುತ್ತಿರುವ ಪ್ರತಿ ವಿಮಾನ ನಿಲ್ದಾಣಗಳು ಕಾಂಗ್ರೆಸ್ ಅವಧಿಯಲ್ಲಿ ನಿರ್ಮಾಣವಾಗಿವೆ. ನೀವು ಮಾಡಿದ ಅಭಿವೃದ್ಧಿ ಕಾರ್ಯಗಳೇನು ಎಂಬುವನ್ನು ತಿಳಿಸಿ ಎಂದು ಪ್ರಿಯಾಂಕಾ ಗಾಂಧಿ ಬಿಜೆಪಿ ಪಕ್ಷವನ್ನು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಜೀವಾವಧಿ ಶಿಕ್ಷೆಗೆ ಒಳಗಾದ ಕೈದಿ ಜೈಲಿನಲ್ಲಿಯೇ ಆತ್ಮಹತ್ಯೆ
Advertisement
ಆಹಾರ ಪದಾರ್ಥಗಳು ಮತ್ತು ಇಂಧನದ ಬೆಲೆ ಗಗನಕ್ಕೇರಿದೆ. ಎಲ್‍ಪಿಜಿ ಸಿಲಿಂಡರ್‌ಗೆ1000 ರೂಪಾಯಿ ಆಗಿದೆ. ದಿನ ಬಳಕೆಯ ವಸ್ತುಗಳ ದರವೂ ವಿಪರೀತ ಏರಿಕೆಯಾಗಿದೆ. ಈ ಬಗ್ಗೆ ಯಾವೊಬ್ಬ ಬಿಜೆಪಿ ನಾಯಕನೂ ಸಾಮಾನ್ಯರ ಮಾತನ್ನು ಕೇಳಿಸಿಕೊಳ್ಳಲು ಸಿದ್ಧರಿಲ್ಲ ಎಂದು ಆಕ್ರೋಶವ್ಯಕ್ತಪಡಿಸಿದ್ದಾರೆ.