ಬೆಂಗಳೂರು: ಕಾಂಗ್ರೆಸ್ (Congress) ಸರ್ಕಾರ ಅಧಿಕಾರಕ್ಕೆ ಬಂದರೆ ಪ್ರತಿ ಕುಟುಂಬದ ಓರ್ವ ಮಹಿಳೆಗೆ ಪ್ರತಿ ತಿಂಗಳು 2,000 ಹಣ ನೀಡುವುದಾಗಿ ಎಐಸಿಸಿ (AICC) ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ (Priyanka Gandhi) ಭರವಸೆ ನೀಡಿದರು.
ಬೆಂಗಳೂರಿನ (Bengaluru) ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಮಹಿಳಾ ಕಾಂಗ್ರೆಸ್ನ ‘ನಾ ನಾಯಕಿ’ ಕಾರ್ಯಕ್ರಮದಲ್ಲಿ ಭಾಗಿಯಾಗಿ ರಾಜ್ಯ ಕಾಂಗ್ರೆಸ್ನ ಮಹಿಳಾ ಪ್ರಣಾಳಿಕೆಯ ಕೆಲವು ಪ್ರಮುಖ ವಿಚಾರಗಳನ್ನು ಘೋಷಣೆ ಮಾಡಿದ್ದಾರೆ. ಅಷ್ಟೇ ಅಲ್ಲದೇ ವೇದಿಕೆ ಮೇಲೆ ಗೃಹ ಲಕ್ಷ್ಮಿ ಬಾಂಡ್ ಅನ್ನು ಪ್ರಿಯಾಂಕಾ ಗಾಂಧಿ ಪ್ರದರ್ಶಿಸಿದರು.
Advertisement
Advertisement
ಕುಟುಂಬದ ಮಹಿಳೆಗೆ ಪ್ರತಿ ತಿಂಗಳು 2,000 ಹಣ ಕೊಡುವುದಾಗಿ ಘೋಷಣೆ ಮಾಡಿ, ಪಕ್ಷದ ವತಿಯಿಂದ ಮಾದರಿ ಚೆಕ್ ಪ್ರದರ್ಶನ ಮಾಡಿದರು. ಈ ವೇಳೆ ವೇದಿಕೆ ಮೇಲಿದ್ದ ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ (DK Shivakumar) ಸಹ ಚೆಕ್ಗೆ ಸಹಿ ಹಾಕಿದರು. ಕಾಂಗ್ರೆಸ್ ಸರ್ಕಾರ ಬಂದರೆ ಹೀಗೆ ಸಹಿ ಹಾಕಿ ಚೆಕ್ ಕೊಡುತ್ತೇವೆ ಎಂದು ಬೃಹತ್ ಚೆಕ್ ಪ್ರದರ್ಶನ ಮಾಡಿದರು.
Advertisement
Advertisement
ಈ ವೇಳೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಬೆಲೆ ಏರಿಕೆಯಿಂದ ದಿಕ್ಕೆಟ್ಟ ರಾಜ್ಯದ ಪ್ರತಿ ಕುಟುಂಬದ ಗೃಹಿಣಿಗೆ ಪ್ರತಿ ತಿಂಗಳು 72,000 ಆರ್ಥಿಕ ನೆರವು ನೀಡುತ್ತೇವೆ. ರಾಜ್ಯ ಹಾಗೂ ದೇಶದಲ್ಲಿ ಮಹಿಳೆಯರ ಸಬಲಿಕರಣಕ್ಕೆ ನಿರಂತರವಾಗಿ ಅಗತ್ಯ ಯೋಜನೆಗಳನ್ನು ನೀಡುತ್ತಾ ಬಂದಿರುವ ಕಾಂಗ್ರೆಸ್, ಈ ಬಾರಿ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಮಹಿಳೆಯರಿಗಾಗಿ ಪ್ರತ್ಯೇಕ ಪ್ರಣಾಳಿಕೆಯನ್ನು ಘೋಷಣೆ ಮಾಡಲು ತೀರ್ಮಾನಿಸಿದೆ ಎಂದು ಹೇಳಿದರು.
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನಮ್ಮ ಸರ್ಕಾರದಿಂದ ರಾಜ್ಯದ ಮಹಿಳೆಯರು ಏನನ್ನು ಬಯಸುತ್ತಾರೆ? ಎಂಬುದನ್ನ ತಿಳಿಯಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ರಾಜ್ಯದ ಮಹಿಳೆಯರಿಗೆ ಅಭಿಪ್ರಾಯ ಹಂಚಿಕೊಳ್ಳುವಂತೆ ಕರೆ ನೀಡಿದ್ದರು. ಈ ಕರೆಗೆ ಸ್ಪಂದಿಸಿ ಸಾಮಾಜಿಕ ಜಾಲತಾಣ, ಇ ಮೇಲ್, ವಾಟ್ಸಪ್ ಹಾಗೂ ಪಕ್ಷದ ಕಚೇರಿಗೆ ಪತ್ರದ ರೂಪದಲ್ಲಿ ಸಾವಿರಾರು ಸಲಹೆಗಳು ಸ್ವೀಕಾರವಾಗಿವೆ. ಇದರಲ್ಲಿ ಬಹುತೇಕ ಮಹಿಳೆಯರು ಬೆಲೆ ಏರಿಕ ಸಮಸ್ಯೆಗೆ ಕಾಂಗ್ರೆಸ್ ಪಕ್ಷದಿಂದ ಪರಿಹಾರ ನಿರೀಕ್ಷಿಸುತ್ತಿರುವುದಾಗಿ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಬೆಲೆ ಏರಿಕೆ ಪರಿಣಾಮವಾಗಿ ಮನೆಯಲ್ಲಿ ದುಡಿಯುವವರ ವೇತನ ಸಾಲದೇ ಸಂಕಷ್ಟ ಅನುಭವಿಸುತ್ತಿರುವುದಾಗಿ ಹೇಳಿದ್ದಾರೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ಮಹಿಳಾ ಪ್ರಣಾಳಿಕೆ ಘೋಷಿಸಲಿದ್ದಾರೆ ಪ್ರಿಯಾಂಕಾ ಗಾಂಧಿ
ಮಹಿಳೆಯರು ನಮ್ಮ ಮನೆ ಹಾಗೂ ರಾಜ್ಯದ ಶಕ್ತಿ ಮೂಲವಾಗಿದ್ದಾರೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಕುಟುಂಬ ಹಾಗೂ ಮನೆ ನಿರ್ವಹಣೆಯಲ್ಲಿ ಅವರು ಅನುಭವಿಸುತ್ತಿರುವ ಸಂಕಷ್ಟ ಅತೀವವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಮಹಿಳೆಯರ ಸಂಕಷ್ಟಕ್ಕೆ ಪ್ರಮಾಣದ ನೆರವು ನೀಡುವ ಉದ್ದೇಶದಿಂದ ಕಾಂಗ್ರೆಸ್ ಪಕ್ಷ ಗೃಹಲಕ್ಷ್ಮಿ ಯೋಜನೆಯನ್ನು ಘೋಷಣೆ ಮಾಡಿದ್ದು, ಈ ಯೋಜನೆ ಮೂಲಕ ರಾಜ್ಯದ ಪ್ರತಿ ಕುಟುಂಬದ ಓರ್ವ ಗೃಹಿಣಿಗೆ ಸರ್ಕಾರದ ವತಿಯಿಂದ ಪ್ರತಿ ತಿಂಗಳು 2,000ರಂತೆ ವರ್ಷಕ್ಕೆ 24 ಸಾವಿರ ಆರ್ಥಿಕ ನೆರವನ್ನು ಕಾಂಗ್ರೆಸ್ ಸರ್ಕಾರ ಒದಗಿಸಲಿದೆ. ಈ ಯೋಜನೆಯು ರಾಜ್ಯದ 1.5 ಕೋಟಿ ಗೃಹಿಣಿಯರಿಗೆ ನೆರವಾಗಲಿದೆ ಎಂದು ಭರವಸೆ ನೀಡಿದರು. ಇದನ್ನೂ ಓದಿ: ಚುನಾವಣೆ ಬಂದ್ಮೇಲೆ ಬಿಜೆಪಿಯವರು ಮಸೀದಿ, ಮಂದಿರ, ಪಾಕಿಸ್ತಾನ ಅಷ್ಟೇ ತೋರಿಸೋದು: ಸತೀಶ್ ಜಾರಕಿಹೊಳಿ
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k