ಪುರುಷರಿಂದ ಅಧಿಕಾರವನ್ನು ಕಸಿದುಕೊಳ್ಳಿ: ಪ್ರಿಯಾಂಕಾ ಗಾಂಧಿ

Public TV
1 Min Read
priyanka gandhi

ಲಕ್ನೋ: ಅಪರಾಧಗಳಿಂದ ನಿಮ್ಮನ್ನು ನೀವು ರಕ್ಷಿಸಿಕೊಳ್ಳಲು ಜನಸಂಖ್ಯೆಗೆ ಅನುಗುಣವಾಗಿ ಪುರುಷರಿಂದ ಅಧಿಕಾರವನ್ನು ಕಸಿದುಕೊಳ್ಳಿ ಎಂದು ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.

ಲಕ್ನೋಗೆ ಎರಡು ದಿನಗಳ ಭೇಟಿಗೆ ಆಗಮಿಸಿದ್ದ ಪ್ರಿಯಾಂಕಾ ಗಾಂಧಿ ಮಾಧ್ಯಮಗಳೊಂದಿಗೆ ಮಾತನಾಡಿದರು. ಮಹಿಳೆಯ ಮೇಲೆ ನಡೆಯುತ್ತಿರುವ ಅಪರಾಧಗಳ ಕುರಿತು ಪ್ರತಿಕ್ರಿಯೆ ನೀಡಿದ ಪ್ರಿಯಾಂಕಾ ಗಾಂಧಿ ಅವರು, ಸಮಾಜದಲ್ಲಿ ಮಹಿಳೆಯರು ಅಧಿಕಾರ ಪಡೆಯಬೇಕು ಎಂದು ನಾನು ಬಯಸುತ್ತೇನೆ. ನನ್ನ ಸಹೋದರಿಯರಿಗೆ ನಾನು ಹೇಳುವುದು ಇಷ್ಟೇ, ರಾಜಕೀಯ ಪ್ರವೇಶ ಮಾಡಿ ಪಂಚಾಯಿತಿ, ವಿಧಾನಸಭಾ ಚುನಾವಣೆಯಲ್ಲಿ ಭಾಗಿಯಾಗಿ ಅಧಿಕಾರ ಪಡೆಯಿರಿ. ನಿಮ್ಮ ಮೇಲೆ ನಡೆಯುತ್ತಿರುವ ಅಪರಾಧಗಳಿಂದ ರಕ್ಷಿಸಿಕೊಳ್ಳಲು ಪುರುಷರಿಂದ ಅಧಿಕಾರವನ್ನು ಕಸಿದುಕೊಳ್ಳಿ ಎಂದರು.

ಇದೇ ವೇಳೆ ಉತ್ತರ ಪ್ರದೇಶ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಪ್ರಿಯಾಂಕಾ ಗಾಂಧಿ, ಕಾಂಗ್ರೆಸ್ ಪಕ್ಷ ಮಹಿಳೆಯರ ಹಕ್ಕುಗಳಿಗಾಗಿ ಹೋರಾಟ ನಡೆಸಲಿದೆ. ಕಳೆದ 11 ತಿಂಗಳ ಅವಧಿಯಲ್ಲಿ ಉನ್ನಾವೋ ಪ್ರದೇಶವೊಂದರಲ್ಲೇ 90ಕ್ಕೂ ಹೆಚ್ಚು ಅತ್ಯಾಚಾರ ಪ್ರಕರಣಗಳು ದಾಖಲಾಗಿದೆ. ಇಲ್ಲಿನ ಸರ್ಕಾರ ಅಪರಾಧಿಗಳಿಗೆ ರಕ್ಷಣೆ ನೀಡುತ್ತಿದೆ. ಮಹಿಳೆಯರು ನ್ಯಾಯಕ್ಕಾಗಿ ಯುದ್ಧದಲ್ಲಿ ಹೋರಾಟ ನಡೆಸುವುದು ಎಷ್ಟು ಕಷ್ಟ ಎಂಬುವುದನ್ನು ನೀವೇ ಯೋಚಿಸಿ ಎಂದು ಉನ್ನಾವೋ ಅತ್ಯಾಚಾರ ಪ್ರಕರಣದಲ್ಲಿ ಬಿಜೆಪಿ ಶಾಸಕರೊಬ್ಬರು ಆರೋಪಿಯಾಗಿರುವುದನ್ನು ಉಲ್ಲೇಖಿಸಿದರು.

Share This Article
Leave a Comment

Leave a Reply

Your email address will not be published. Required fields are marked *