ನವದೆಹಲಿ: ತೈಲ ಬೆಲೆ ಏರಿಕೆ ಸಂಬಂಧ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.
ಇಷ್ಟುದಿನ ತೈಲ ಬೆಲೆ ಏರಿಕೆ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುವಲ್ಲಿ ಬಿಜೆಪಿ ನೇತೃತ್ವ ಕೇಂದ್ರ ಸರ್ಕಾರ ವಿಫಲವಾಗಿದೆ. ಇದರಿಂದ ಸಾಮಾನ್ಯರ ಜೀವನ ಸಂಕಷ್ಟಕ್ಕೆ ತಿರುಗಿದೆ ಎಂದು ಪ್ರಿಯಾಂಕಾ ಗಾಂಧಿ ಕಿಡಿಕಾರಿದ್ದಾರೆ.
ಕೇಂದ್ರ ಸರ್ಕಾ ತೈಲ ಬೆಲೆ ಇಳಿಕೆ ಮಾಡಿದೆ. ಕೇಂದ್ರ ಸರ್ಕಾರದ ಪೆಟ್ರೋಲ್ ಬೆಲೆ ಇಳಿಕೆಯ ನಂತರ ಪ್ರಿಯಾಂಕಾ ಗಾಂಧಿ ಪ್ರತಿಕ್ರಿಯೆ ನೀಡಿದ್ದು, ತೈಲ ಬೆಲೆ ಇಳಿಕೆ ಮಾಡಿದ್ದು, ಹೃಯದದಿಂದ ಅಲ್ಲ, ಬದಲಾಗಿ ಭಯದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಲೂಟಿಕೋರ ಸರ್ಕಾರಕ್ಕೆ ಚುನಾವಣೆಯಲ್ಲಿ ಉತ್ತರ ನೀಡಬೇಕಾಗಿದೆ ಎಂದು ಟ್ವೀಟ್ ಮಾಡಿ ಆಢಳಿತ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆಯಿಂದ ಬೊಕ್ಕಸಕ್ಕೆ 2,100 ಕೋಟಿ ಆದಾಯ ನಷ್ಟ: ಸಿಎಂ
ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಕ್ರಮವಾಗಿ 10 ರೂ. ಹಾಗೂ 5 ರೂ. ಕ್ಕೆ ಇಳಿಸಿದ ಬೆನ್ನಲ್ಲೇ ಸರ್ಕಾರ ಆದೇಶ ಹೊರಡಿಸಿದೆ. ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ನಿರಂತರವಾಗಿತ್ತು. ಅಕ್ಟೋಬರ್ ಒಂದೇ ತಿಂಗಳಲ್ಲಿ ಸುಮಾರು 30ಕ್ಕೂ ಅಧಿಕ ಬಾರಿ ಪೈಸೆಗಳ ಲೆಕ್ಕದಲ್ಲಿ ಬೆಲೆ ಏರಿಕೆಯಾಗಿತ್ತು. ಇದರಿಂದ ಜನ ಸಾಮಾನ್ಯರಿಗೆ ನೇರವಾಗಿ ಪರಿಣಾಮ ಬೀರುವುದಲ್ಲದೇ ಪೆಟ್ರೋಲ್, ಡೀಸೆಲ್ ಅವಲಂಬಿತ ಎಲ್ಲ ವಸ್ತುಗಳ ಬೆಲೆಯೂ ಅಧಿಕವಾಗಿತ್ತು. ಪೆಟ್ರೋಲ್, ಡೀಸೆಲ್ ಬೆಲೆ ನಿರಂತರ ಏರಿಕೆ ಸಾರ್ವಜನಿಕ ವಲಯದಲ್ಲಿ ಭಾರೀ ಟೀಕೆಗೆ ಕಾರಣವಾಗಿತ್ತು. ಜನ ಸಾಮಾನ್ಯರ ಆಕ್ರೋಶ ಎದುರಿಸಲಾಗದ ಹಲವು ರಾಜ್ಯ ಸರ್ಕಾರಗಳು ಕೇಂದ್ರ ಸರ್ಕಾರಕ್ಕೆ ಬೆಲೆ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲು ಮನವಿ ಮಾಡಿದ್ದವು. ಈ ವಿಚಾರವನ್ನು ಗಣನೆಗೆ ತೆಗೆದುಕೊಂಡ ಮೋದಿ ಪೆಟ್ರೋಲ್, ಡೀಸೆಲ್ ಮೇಲಿನ ಸುಂಕ ಇಳಿಕೆ ಮಾಡಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಪೆಟ್ರೋಲ್ 100.63, ಡೀಸೆಲ್ 85.03ರೂ. – ಸರ್ಕಾರದಿಂದ ಅಧಿಕೃತ ಅಧಿಸೂಚನೆ