ಲಕ್ನೋ: ಜಮೀನು ವಿವಾದದ ಗಲಾಟೆಯಲ್ಲಿ ಸಾವನ್ನಪ್ಪಿದ ಕುಟುಂಬದರನ್ನು ಭೇಟಿಯಾಗಲು ತೆರಳುತ್ತಿದ್ದ ಕಾಂಗ್ರೆಸ್‍ನ ಮುಖಂಡೆ ಪ್ರಿಯಾಂಕ ಗಾಂಧಿಯವರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಸ್ವಲ್ಪ ಸಮಯದ ಬಳಿಕ ಬಿಡುಗಡೆ ಮಾಡಿದ್ದಾರೆ.
ಉತ್ತರ ಪ್ರದೇಶದ ಸೋನ್‍ಭದ್ರಾ ಎಂಬಲ್ಲಿ ಜಮೀನು ವಿದಾದ ಗಲಾಟೆಯಲ್ಲಿ ಗ್ರಾಮದ ಮುಖ್ಯಸ್ಥನಾಗಿದ್ದ ಯಾಗ್ಯ ದತ್ ಬೆಂಬಲಿಗರು ಆದಿವಾಸಿ ಕುಟುಂಬಗಳ ಮೇಲೆ ಗುಂಡು ಹಾರಿಸಿದ್ದರು. ಗುಂಡೇಟಿಗೆ 10 ಜನರು ಮೃತಪಟ್ಟಿದ್ದು, 19 ಜನರು ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಘಟನಾ ಪ್ರದೇಶದ ವ್ಯಾಪ್ತಿಯಲ್ಲಿ ಸೆಕ್ಷನ್ 144 ಜಾರಿ ಮಾಡಿದ್ದರು. ಇದೀಗ ಸಂತ್ರಸ್ತರನ್ನು ಭೇಟಿ ಮಾಡಲು ಪ್ರಿಯಾಂಕ ಗಾಂಧಿ ತೆರಳಿದ್ದು, ಪೊಲೀಸರು ತಡೆಯೋಡ್ಡಿದ್ದಾರೆ.
Advertisement
I condemn in the strongest terms the autocratic arrest of Congress General Secretary Smt.@priyankagandhi who was going to meet the families of those killed in Sonbhadra massacre. UP government led by Yogi Adityanath has completely failed on the law&order front. #UPmeinJungleRaj pic.twitter.com/iVN5n5F4ld
— K C Venugopal (@kcvenugopalmp) July 19, 2019
Advertisement
ಪ್ರಿಯಾಂಕ ಗಾಂಧಿ ಅವರು ಇಂದು ಆದಿವಾಸಿ ಕುಟುಂಬದನ್ನು ಭೇಟಿ ಮಾಡಲು ಹೋಗಿದ್ದರು. ಗುಂಡಿನ ದಾಳಿ ಖಂಡಿಸಿ ಶಾಂತಿಯುತ ಪ್ರತಿಭಟನೆಗೆ ಮುಂದಾದಾಗ, ಪ್ರಿಯಾಂಕ ಅವರನ್ನು ನಾರಾಯಣಪುರ ಪೊಲೀಸರು ವಶಕ್ಕೆ ಪಡೆದು, ಸ್ವಲ್ಪ ಸಮಯದ ಬಳಿಕ ಬಿಟ್ಟು ಕಳುಹಿಸಿದ್ದಾರೆ.
Advertisement
ಈ ಸಂಬಂಧ ಮಾಧ್ಯಮಗಳೊಂದಿಗೆ ಮಾತನಾಡಿದ ಪ್ರಿಯಾಂಕ ಗಾಂಧಿ ಅವರು, ಸೋನ್‍ಭದ್ರಾದ ಆದಿವಾಸಿ ಸಂತ್ರಸ್ತರ ಭೇಟಿ ಮಾಡಬೇಕಿತ್ತು. ಹೀಗಾಗಿ ನಾಲ್ಕು ಜನರ ತಂಡದೊಂದಿಗೆ ಇಲ್ಲಿಗೆ ಬಂದಿದ್ದೆವು. ಆದರೆ ಪೊಲೀಸರು ಅಲ್ಲಿಗೆ ಹೋಗಲು ಅವಕಾಶ ನೀಡದೆ, ನಮ್ಮನ್ನು ವಶಕ್ಕೆ ಪಡೆದಿದ್ದಾರೆ. ಶಾಂತಯುತವಾಗಿ ಪ್ರತಿಭಟನೆ ಮಾಡಲು ನಿರ್ಧರಿಸಿದ್ದೇವೆ. ಇದಕ್ಕೆ ಅವಕಾಶ ನೀಡದೆ ವಶಕ್ಕೆ ಪಡೆದಿದ್ದಾರೆ ಎಂದು ಹೇಳಿದರು.
Advertisement
General Secretary UP East @priyankagandhi addresses party workers from Chunar Fort. #UPmeinJungleRaj pic.twitter.com/AHkmgUZGD4
— Congress (@INCIndia) July 19, 2019
ಈ ಘಟನೆಯನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಖಂಡಿಸಿದ್ದಾರೆ. ಜೊತೆಗೆ ಸಹೋದರಿ ಪ್ರಿಯಾಂಕ ಗಾಂಧಿ ಅವರೊಂದಿಗೆ ಹೋರಾಟಕ್ಕೆ ನಿಲ್ಲುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
ಆಗಿದ್ದೇನು?:
ಯಾಗ್ಯ ದತ್ ಉಭಾ ಗ್ರಾಮದ ಸಮೀಪದ ಘೋರ್‍ವಾಲ್‍ನಲ್ಲಿ ಎರಡು ವರ್ಷಗಳ ಹಿಂದೆ 36 ಎಕರೆ ಕೃಷಿ ಭೂಮಿಯನ್ನು ಖರೀದಿಸಿದ್ದ. ಆದರೆ ಯಾಗ್ಯ ದತ್ ತನ್ನ ಸಹವರ್ತಿಗಳ ಜೊತೆಗೆ ಬುಧವಾರ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಹೋಗಿದ್ದ. ಇದಕ್ಕೆ ಗ್ರಾಮಸ್ಥರು ಭಾರೀ ವಿರೋಧಿಸಿದ್ದರು. ಇದರಿಂದಾಗಿ ಗಲಾಟೆ ಆರಂಭವಾಗುತ್ತಿದ್ದಂತೆ ಯಾಗ್ಯ ದತ್ ಕಡೆಯ ವ್ಯಕ್ತಿಯೊಬ್ಬ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾನೆ. ಗುಂಡು ತಗುಲಿ 10ಸ ಜನರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, 19 ಜನರ ಸ್ಥಿತಿ ಗಂಭೀರವಾಗಿದೆ.
The illegal arrest of Priyanka in Sonbhadra, UP, is disturbing. This arbitrary application of power, to prevent her from meeting families of the 10 Adivasi farmers brutally gunned down for refusing to vacate their own land, reveals the BJP Govt’s increasing insecurity in UP. pic.twitter.com/D1rty8KJVq
— Rahul Gandhi (@RahulGandhi) July 19, 2019
ಈ ಕೃತ್ಯದ ಕುರಿತು ವ್ಯಾಪಕ ಟೀಕೆ ವ್ಯಕ್ತವಾಗಿದೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಕೂಡ ಘಟನೆಯನ್ನು ಖಂಡಿಸಿದ್ದು, ಮೃತರ ಕುಟುಂಬಸ್ಥರಿಗೆ ಸಂತಾಪ ಸೂಚಿಸಿದ್ದಾರೆ. ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ 19 ಜನರಿಗೆ ಅಗತ್ಯ ವೈದ್ಯಕೀಯ ನೆರವು ನೀಡುವಂತೆ ಜಿಲ್ಲಾಡಳಿತಕ್ಕೆ ಆದೇಶ ಹೊರಡಿಸಿದ್ದಾರೆ.
Priyanka Gandhi Vadra in Narayanpur on if she has been arrested: Yes, we still won't be cowed down. We were only going peacefully to meet victim families(of Sonbhadra firing case). I don't know where are they taking me, we are ready to go anywhere.' pic.twitter.com/q1bwkucl0g
— ANI UP/Uttarakhand (@ANINewsUP) July 19, 2019