ಲಕ್ನೋ: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‍ನಿಂದ ಮುಂದಿನ ಸಿಎಂ ಅಭ್ಯರ್ಥಿ ಪ್ರಿಯಾಂಕಾ ಗಾಂಧಿ ವಾದ್ರಾ ಆಗುತ್ತಾರಾ ಎಂಬ ಪ್ರಶ್ನೆ ಇದೀಗ ಎಲ್ಲೆಡೆ ಕುತೂಹಲ ಕೆರಳಿಸಿದೆ. ಈ ಬಗ್ಗೆ ಮಾಜಿ ಕೇಂದ್ರ ಸಚಿವ ಹಾಗೂ ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷಿದ್ ಉತ್ತರ ಪ್ರದೇಶದ ಸಿಎಂ ಆಗಬೇಕೆ ಅಥವಾ ಬೇಡವೇ ಎಂದು ಪ್ರಿಯಾಂಕಾ ಗಾಂಧಿಯವರೇ ನಿರ್ಧರಿಸಲಿದ್ದಾರೆ ಎಂದು ಹೇಳಿದ್ದಾರೆ.
Advertisement
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿಯವರ ನೇತೃತ್ವದಲ್ಲಿ ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆ ನಡೆಯಲಿದೆ ಮತ್ತು ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯಾಗಲಿದ್ದಾರೋ ಇಲ್ಲವೋ ಎಂಬುವುದನ್ನು ಸ್ವತಃ ಅವರೇ ನಿರ್ಧರಿಸುತ್ತಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಪ್ರಿಯಾಂಕಾ ಗಾಂಧಿ ನೇತೃತ್ವದಲ್ಲಿ ಉತ್ತರ ಪ್ರದೇಶ ಚುನಾವಣೆ: ಸಲ್ಮಾನ್ ಖುರ್ಷಿದ್
Advertisement
Congress would contest the UP assembly polls under party General Secretary Priyanka Gandhi Vadra’s leadership & she herself would decide on the issue of whether she would be party’s chief ministerial candidate or not: Congress leader Salman Khurshid in Prayagraj (18.09) pic.twitter.com/aFWDl151EO
— ANI UP (@ANINewsUP) September 18, 2021
Advertisement
ಕಾಂಗ್ರೆಸ್‍ನ ಸೋಶಿಯಲ್ ಮೀಡಿಯಾ ವಿಭಾಗವು ಶನಿವಾರ ರಾಹುಲ್ ಗಾಂಧಿಯನ್ನು ಪಕ್ಷದ ಅಧ್ಯಕ್ಷರನ್ನಾಗಿ ಮಾಡುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದೆ. ಈ ವಾರದ ಆರಂಭದಲ್ಲಿ ದೆಹಲಿಯ ಮಹಿಳಾ ಕಾಂಗ್ರೆಸ್ ಕೂಡ ಇದೇ ನಿರ್ಣವನ್ನು ತೆಗೆದುಕೊಂಡಿದೆ. ಇದನ್ನೂ ಓದಿ: ನಿವೃತ್ತ ಹವಾಲ್ದಾರ್ ಪುತ್ರನ ಆತ್ಮಹತ್ಯೆ ಪ್ರಕರಣ- ಸೈಕೋ ರೀತಿ ವರ್ತಿಸುತ್ತಿದ್ದ ವಿದ್ಯಾರ್ಥಿ
Advertisement