ಮೈಸೂರು: ವಿಧಾನಸಭಾ ಚುನಾವಣೆ ಹಿನ್ನೆಲೆ ಕಾಂಗ್ರೆಸ್ (Congress) ಪರ ಪ್ರಚಾರಕ್ಕೆ ಕಾರ್ನಾಟಕ (Karnataka) ಪ್ರವಾಸದಲ್ಲಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ (Priyanka Gandhi Vadra) ಬುಧವಾರ ಮೈಸೂರು (Mysuru) ತೆರಳಿದ್ದಾರೆ. ಅರಮನೆ ನಗರಿಯ ಪ್ರಸಿದ್ಧ ಮೈಲಾರಿ ದೋಸೆಯನ್ನು (Mailari Dosa) ಸವಿದು ಪ್ರಿಯಾಂಕಾ ಫಿದಾ ಆಗಿದ್ದಾರೆ.
ಪ್ರಿಯಾಂಕಾ ಗಾಂಧಿ ಮೈಸೂರಿನ ಅಗ್ರಹಾರ ಬಳಿ ಇರುವಾ ಹೆಸರಾಂತ ಮೈಲಾರಿ ಹೋಟೆಲ್‌ಗೆ (Mailari Hotel) ತೆರಳಿದ್ದು, ಅಲ್ಲಿ ಅವರು ಅಡುಗೆ ಮನೆಯಲ್ಲಿ ಖುದ್ದು ತವಾ ಮೇಲೆ ದೋಸೆ ಹಾಕಿದ್ದಾರೆ. ತವಾಗೆ ಸಂಪಣ ಹಾಕಿ ದೋಸೆ ಮಾಡಿ ಸಂತೋಷ ವ್ಯಕ್ತಪಡಿಸಿದ ಪ್ರಿಯಾಂಕಾ ಬಳಿಕ ದೋಸೆ ಸವಿದು ರುಚಿಗೆ ಮನಸೋತಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಮುಸ್ಲಿಂ ಮೀಸಲಾತಿ ರದ್ದು ನಿರ್ಧಾರ ಸಮರ್ಥಿಸಿಕೊಂಡ ರಾಜ್ಯ ಸರ್ಕಾರ
ಬಳಿಕ ಮಾತನಾಡಿದ ಅವರು, ನಾನಿಲ್ಲಿ ಇಡ್ಲಿ, ದೋಸೆ ಸವಿದಿದ್ದೇನೆ. ಎಲ್ಲವೂ ತುಂಬಾ ರುಚಿಕರವಾಗಿತ್ತು. ಇದನ್ನು ಮನೆಯಲ್ಲಿ ಹೇಗೆ ಮಾಡಬೇಕು ಎಂಬುದನ್ನು ತಿಳಿದುಕೊಂಡಿದ್ದೇನೆ. ನಾನು ಇದನ್ನು ಮನೆಯಲ್ಲಿಯೂ ಟ್ರೈ ಮಾಡುತ್ತೇನೆ ಎಂದು ಹೇಳಿದರು.
ಈ ವೇಳೆ ಪ್ರಿಯಾಂಕಾ ಗಾಂಧಿ ಅವರಿಗೆ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಾಥ್ ನೀಡಿದರು. ಇದನ್ನೂ ಓದಿ: ಜೆಡಿಎಸ್ ಅಭ್ಯರ್ಥಿಗೆ ಆಮಿಷ? – ಸೋಮಣ್ಣರದ್ದು ಎನ್ನಲಾದ ಆಡಿಯೋ ವೈರಲ್