ಲಕ್ನೋ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸಹೋದರಿ ಪ್ರಿಯಾಂಕಾ ಗಾಂಧಿ ಅವರು ಸಕ್ರಿಯ ರಾಜಕೀಯಕ್ಕೆ ಕಾಲಿಟ್ಟಿದ್ದಾರೆ. ಈ ಮೂಲಕ ಲೋಕಸಭಾ ಚುನಾವಣೆಯ ಉತ್ತರಪ್ರದೇಶ ಪೂರ್ವ ವಲಯ ಉಸ್ತುವಾರಿ ವಹಿಸಿಕೊಂಡಿದ್ದಾರೆ.
2014ರ ಲೋಕಸಭಾ ಚುನಾವಣೆಯ ವೇಳೆ ಉತ್ತರ ಪ್ರದೇಶದ ಅಮೇಠಿ ಹಾಗೂ ರಾಯ್‍ಬರೇಲಿಯಲ್ಲಿ ಸಹೋದರ ರಾಹುಲ್ ಗಾಂಧಿ ಹಾಗೂ ತಾಯಿ ಸೋನಿಯಾ ಗಾಂಧಿ ಪರ ಪ್ರಚಾರ ಮಾಡುತ್ತಿದ್ದರು. ಆದರೆ ಈ ಬಾರಿ ಉಸ್ತುವಾರಿಯನ್ನೇ ವಹಿಸಿಕೊಳ್ಳುವ ಮೂಲಕ ಅಧಿಕೃತವಾಗಿ ಲೋಕಸಭಾ ಚುನಾವಣೆಯ ಕಣಕ್ಕೆ ಇಳಿಯಲಿದ್ದಾರಾ ಎನ್ನುವ ಪ್ರಶ್ನೆ ಎದ್ದಿದೆ.
Advertisement
Advertisement
ಉತ್ತರ ಪ್ರದೇಶದ ಪೂರ್ವದ ಉಸ್ತುವಾರಿಯನ್ನು ಪ್ರಿಯಾಂಕಾ ಗಾಂಧಿ ಅವರು 2019 ಫೆಬ್ರವರಿ ಮೊದಲ ವಾರದಿಂದ ವಹಿಸಿಕೊಳ್ಳಲಿದ್ದಾರೆ. ಜೊತೆಗೆ ಜ್ಯೋತಿರಾದಿತ್ಯ ಸಿಂಧ್ಯಾ ಅವರು ಉತ್ತರ ಪ್ರದೇಶದ ಉಸ್ತುವಾರಿ, ಕೆ.ಸಿ.ವೇಣುಗೋಪಾಲ್ ಅವರಿಗೆ ಕರ್ನಾಟಕದ ಜವಾಬ್ದಾರಿಯನ್ನು ನೀಡಲಾಗಿದೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪ್ರಕಟಣೆ ಹೊರಡಿಸಿದ್ದಾರೆ.
Advertisement
ಈ ಮೂಲಕ ಪ್ರಿಯಾಂಕಾ ಗಾಂಧಿ ಅವರು ತಾಯಿ ಸೋನಿಯಾ ಗಾಂಧಿ ಮತಕ್ಷೇತ್ರ ರಾಯ್‍ಬರೇಲಿಯಿಂದ ಲೋಕಸಭಾ ಚುನಾವಣಾ ಕಣಕ್ಕೆ ಇಳಿಯುತ್ತಾರೆ ಎನ್ನಲಾಗುತ್ತಿದೆ. ಆದರೆ ರಾಜಸ್ಥಾನ ಹಾಗೂ ಹರ್ಯಾಣದ ಭೂ ಹಗರಣ ಆರೋಪವನ್ನು ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್ ವಾದ್ರಾ ಎದುರಿಸುತ್ತಿದ್ದಾರೆ. ಇದನ್ನೇ ಬಿಜೆಪಿ ಅಸ್ತ್ರವಾಗಿಸಿಕೊಂಡು ಕಾಂಗ್ರೆಸ್ ವಿರುದ್ಧ ಪ್ರಚಾರ ಮಾಡಲು ರಣತಂತ್ರ ರೂಪಿಸಿದೆಯಂತೆ.
Advertisement
INC COMMUNIQUE
Appointment of General Secretaries for All India Congress Committee. pic.twitter.com/zHENwt6Ckh
— INC Sandesh (@INCSandesh) January 23, 2019
ಮಾಜಿ ಪ್ರಧಾನಿ ಹಾಗೂ ಅಜ್ಜಿ ಇಂದಿರಾ ಗಾಂಧಿ ಅವರ ಹೊಲಿಕೆಯನ್ನು 47 ವರ್ಷದ ಪ್ರಿಯಾಂಕಾ ಗಾಂಧಿ ಹೊಂದಿದ್ದಾರೆ. ಹೀಗಾಗಿ ಪ್ರಿಯಾಂಕ ಗಾಂಧಿ ಸಕ್ರಿಯ ರಾಜಕಾರಣಕ್ಕೆ ಇಳಿಯಬೇಕೆಂದು ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು ಈ ಹಿಂದೆ ಹೈಕಮಾಂಡ್ ನಲ್ಲಿ ಆಗ್ರಹಿಸಿದ್ದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv