ಲಕ್ನೋ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ರ್‍ಯಾಲಿಗಳಿಗೆ ಜನರನ್ನು ಸೇರಿಸಲು ಉತ್ತರ ಪ್ರದೇಶ ಸರ್ಕಾರ ಸಾರ್ವಜನಿಕರ ಹಣವನ್ನು ವ್ಯಯಿಸುತ್ತಿದೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಆಕ್ರೋಶವ್ಯಕ್ತಪಡಿಸಿದ್ದಾರೆ.
Advertisement
ಬಿಜೆಪಿಯ ಇಂಥ ಚಾಲಾಕಿ ರಾಜಕೀಯವನ್ನು ರಾಜ್ಯದ ಪ್ರತಿಯೊಬ್ಬರು ಅರ್ಥ ಮಾಡಿಕೊಂಡಿದ್ದಾರೆ. ಅವರು ರ್‍ಯಾಲಿಗಳಿಗೆ ಜನರನ್ನು ಸೇರಿಸಲು ಅಧಿಕಾರಿಗಳು ಸಾರ್ವಜನಿಕರಿಂದ ಹಣ ಸಂಗ್ರಹಿಸುತ್ತಿದ್ದಾರೆ ಎಂಬ ಮಾಧ್ಯಮಗಳ ವರದಿಗಳ ತುಣುಕನ್ನು ಟ್ವೀಟ್ ಜೊತೆಗೆ ಹಂಚಿಕೊಂಡು ವಾಗ್ದಾಳಿ ಮಾಡಿದ್ದಾರೆ. ಇದನ್ನೂ ಓದಿ: ದಲಿತರೊಂದಿಗೆ ಚಹಾ ಸೇವಿಸಿ, ಬಿಜೆಪಿಗೆ ಮತ ಹಾಕುವಂತೆ ಮನವೊಲಿಸಿ: ಸ್ವತಂತ್ರ ದೇವ್
Advertisement
लॉकडाउन के दौरान जब दिल्ली से लाखों श्रमिक बहन-भाई पैदल चलकर उप्र में अपने गांवों की तरफ लौट रहे थे, उस समय भाजपा सरकार ने श्रमिकों को बसें उपलब्ध नहीं कराई थीं।
लेकिन, पीएम और गृहमंत्री की रैलियों में भीड़ लाने के लिए सरकार जनता की गाढ़ी कमाई के करोड़ों रुपए खर्च कर रही है। pic.twitter.com/jV3yG2Qx8n
— Priyanka Gandhi Vadra (@priyankagandhi) November 16, 2021
Advertisement
ಟ್ವೀಟ್‍ನಲ್ಲಿ ಏನಿದೆ?: ಲಾಕ್‍ಡೌನ್ ಸಮಯದಲ್ಲಿ ಲಕ್ಷಾಂತರ ಕಾರ್ಮಿಕರು ದೆಹಲಿಯಿಂದ ಉತ್ತರ ಪ್ರದೇಶದ ತಮ್ಮ ಹಳ್ಳಿಗಳಿಗೆ ಕಾಲ್ನಡಿಗೆಯಲ್ಲಿ ಹಿಂದಿರುಗುತ್ತಿದ್ದಾಗ ಬಿಜೆಪಿ ಸರ್ಕಾರ ಅವರಿಗೆ ಬಸ್ ವ್ಯವಸ್ಥೆ ಮಾಡಲಿಲ್ಲ. ಆದರೆ ಪ್ರಧಾನಿ ಮತ್ತು ಗೃಹ ಸಚಿವರ ಕಾರ್ಯಕ್ರಮಗಳಿಗೆ ಜನ ಸೇರಿಸಲು ಸರ್ಕಾರ ಕೋಟಿಗಟ್ಟಲೆ ಸಾರ್ವಜನಿಕರ ಹಣವನ್ನು ವೆಚ್ಚ ಮಾಡುತ್ತಿದೆ ಎಂದು ಬರೆದುಕೊಂಡಿದ್ದಾರೆ.