ನವದೆಹಲಿ: ಜನರಿಗೆ ತೊಂದರೆ ಕೊಡುವುದರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ದಾಖಲೆ ಸೃಷ್ಟಿಸಿದೆ ಎಂದು ಕಾಂಗ್ರೆಸ್ ಪಕ್ಷದ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿದ್ದಾರೆ.
उत्तरप्रदेश की प्रगति की प्रतिज्ञाएं।
????टिकटों में महिलाओं की 40 प्रतिशत हिस्सेदारी
????लड़कियों को स्मार्टफोन और स्कूटी
????किसानों का पूरा कर्जा माफ
????2500 में गेहूं-धान, 400 पाएगा गन्ना किसान
????बिजली बिल सबका हाफ, कोरोना काल का बकाया साफ #कांग्रेस_की_प्रतिज्ञाएँ pic.twitter.com/OsBJZzckgc
— Priyanka Gandhi Vadra (@priyankagandhi) October 23, 2021
Advertisement
ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಕುರಿತು ಇಂದು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಪ್ರಿಯಾಂಕಾ ಗಾಂಧಿ ವಾದ್ರಾ, ಮೋದಿ ಸರ್ಕಾರ ಜನರಿಗೆ ತೊಂದರೆ ನೀಡುವಲ್ಲಿ ದಾಖಲೆಗಳನ್ನು ಸೃಷ್ಟಿಸಿದೆ. ಈ ವರ್ಷ ಪೆಟ್ರೋಲ್ ಬೆಲೆ ದಾಖಲೆಯ 23.53 ರೂ.ಗಳಷ್ಟು ಹೆಚ್ಚಾಗಿದೆ. ಮೋದಿ ಜಿ ಸರ್ಕಾರವು ಸಾರ್ವಜನಿಕರಿಗೆ ತೊಂದರೆ ನೀಡುವಲ್ಲಿ ದೊಡ್ಡ ದಾಖಲೆಗಳನ್ನು ಮಾಡಿದೆ. ಅತಿ ಹೆಚ್ಚು ನಿರುದ್ಯೋಗ, ಸರ್ಕಾರಿ ಆಸ್ತಿ ಮಾರಾಟದಲ್ಲಿ ದಾಖಲೆ ನಿರ್ಮಿಸಿದೆ ಎಂದು ಆರೋಪ ಮಾಡಿದ್ದಾರೆ. ಇದನ್ನೂ ಓದಿ: ಕುಮಾರಸ್ವಾಮಿ ಬ್ರದರ್, ಬ್ರದರ್ ಅಂತ ಕತ್ತು ಕೊಯ್ಯೋದು: ಜಮೀರ್ ಅಹ್ಮದ್
Advertisement
Advertisement
ಕಾಂಗ್ರೆಸ್ ಮುಖ್ಯ ವಕ್ತಾರ ರಣದೀಪ್ ಸುರ್ಜೇವಾಲಾ ಅವರು ಇದೇ ಮಾಧ್ಯಮ ವರದಿಯನ್ನು ಟ್ಯಾಗ್ ಮಾಡಿ ಅಚ್ಛೇ ದಿನ್ (ಒಳ್ಳೆಯ ದಿನಗಳು) ಎಂದು ಟ್ವೀಟ್ ಮಾಡುವ ಮೂಲಕ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. ಇದನ್ನೂ ಓದಿ: 14 ವರ್ಷದ ಬಳಿಕ ಬೆಂಕಿಪೊಟ್ಟಣದ ಬೆಲೆ ಏರಿಕೆ
Advertisement
ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯು ಸತತ ನಾಲ್ಕನೇ ದಿನವಾದ ಶನಿವಾರ ಪ್ರತಿ ಲೀಟರ್‍ಗೆ 35 ಪೈಸೆ ಏರಿಕೆಯಾಗಿದ್ದು, ಪೆಟ್ರೋಲ್ ಮೇಲಿನ ದರವನ್ನು ಪ್ರತಿ ಲೀಟರ್‍ಗೆ 36 ರೂ. ಮತ್ತು ಡೀಸೆಲ್ ಮೇಲೆ 26.58 ರೂ.ಗೆ ಏರಿಕೆ ಮಾಡಲಾಗಿದೆ.