LatestLeading NewsMain PostNational

ಸೋನಿಯಾ ಗಾಂಧಿ ಬಳಿಕ ಪ್ರಿಯಾಂಕಾ ಗಾಂಧಿಗೂ ಕೊರೊನಾ

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಬಳಿಕ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೂ ಕೊರೊನಾ ಸೋಂಕು ದೃಢವಾಗಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಸೋಂಕಿನ ಕೆಲವು ಲಕ್ಷಣಗಳು ಕಂಡುಬಂದಿದ್ದರಿಂದ ತಪಾಸಣೆಗೆ ಒಳಗಾಗಿದ್ದೆ. ಇದರಲ್ಲಿ ಕೊರೊನಾ ಸೋಂಕು ಇರುವುದು ದೃಢವಾಗಿದೆ. ಈ ಹಿನ್ನೆಲೆಯಲ್ಲಿ ಕ್ವಾರಂಟೈನ್‍ಗೆ ಒಳಗಾಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರೆಲ್ಲರೂ ತಪಾಸಣೆಗೆ ಒಳಗಾಗಬೇಕೆಂದು ಕೇಳಿಕೊಂಡಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಬುಧವಾರ ಸಂಜೆ ಜ್ವರ ಬಂದ ಹಿನ್ನೆಲೆ ಕೋವಿಡ್-19 ಪರೀಕ್ಷೆ ನಡೆಸಿದಾಗ ಅವರಿಗೆ ಪಾಸಿಟಿವ್ ಬಂದಿದೆ. ಈ ಹಿನ್ನೆಲೆಯಲ್ಲಿ ಸೋನಿಯಾ ಗಾಂಧಿ ಅವರು ಕ್ವಾರಂಟೈನ್‍ನಲ್ಲಿದ್ದಾರೆ ಎಂದು ಗುರುವಾರ ಹಿರಿಯ ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೆವಾಲಾ ತಿಳಿಸಿದ್ದರು. ಇದನ್ನೂ ಓದಿ: ಸೋನಿಯಾ ಗಾಂಧಿ ಶೀಘ್ರವೇ ಗುಣಮುಖರಾಗಲಿ – ಮೋದಿ ಶುಭಹಾರೈಕೆ

ಆದರೂ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ವಿಚಾರಣೆಗಾಗಿ ಅವರು ಜೂನ್ 8 ರಂದು ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗುತ್ತಾರೆ ಎಂದು ಪಕ್ಷವು ತಿಳಿಸಿದೆ. ಇದನ್ನೂ ಓದಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಕೊರೊನಾ

Leave a Reply

Your email address will not be published.

Back to top button