ನವದೆಹಲಿ: ಚುನಾವಣಾ ರಾಜಕೀಯಕ್ಕೆ ಪ್ರಿಯಾಂಕಾ ವಾದ್ರಾ (Priyanka Vadra ಅಧಿಕೃತ ಎಂಟ್ರಿಯಾಗಿದ್ದು ಕೇರಳದ ವಯನಾಡಿನಿಂದ (Wayanad Lok Sabha) ಈ ಬಾರಿ ಕಣಕ್ಕೆ ಇಳಿಯಲಿದ್ದಾರೆ.
ಸಂಸದ ರಾಹುಲ್ ಗಾಂಧಿ (Rahul Gandhi) ಅವರ ರಾಜೀನಾಮೆಯಿಂದ ತೆರವಾದ ವಯನಾಡು ಕ್ಷೇತ್ರಕ್ಕೆ ಪ್ರಿಯಾಂಕಾ ಗಾಂಧಿ ಅವರನ್ನು ಕಣಕ್ಕೆ ಇಳಿಸುವುದಾಗಿ ಎಐಸಿಸಿ (AICC) ಅಧಿಕೃತ ಪ್ರಕಟಣೆಯ ಮೂಲಕ ತಿಳಿಸಿದೆ.
- Advertisement
- Advertisement
ವಯನಾಡು ಲೋಕಸಭಾ ಕ್ಷೇತ್ರದ ಉಪಚುನಾವಣೆ ನ.13 ರಂದು ನಡೆಯಲಿದ್ದು ನ. 23ಕ್ಕೆ ಫಲಿತಾಂಶ ಪ್ರಕಟವಾಗಲಿದೆ. ಇದನ್ನೂ ಓದಿ: ಇಸ್ರೇಲ್ ಜೊತೆ ಮೋದಿಗೆ ಉತ್ತಮ ಸಂಬಂಧವಿದೆ – ಕಾಂಗ್ರೆಸ್‌ನಿಂದ ಇವಿಎಂ-ಪೇಜರ್ ಅನುಮಾನ
ಲೋಕಸಭಾ ಚುನಾವಣೆಯಲ್ಲಿ ರಾಹುಲ್ ಗಾಂಧಿ ಕೇರಳದ ವಯನಾಡು ಮತ್ತು ಉತ್ತರ ಪ್ರದೇಶದ ರಾಯ್ ಬರೇಲಿಯಿಂದ ಸ್ಪರ್ಧಿಸಿದ್ದರು. ಎರಡೂ ಕ್ಷೇತ್ರಗಳಲ್ಲಿ ರಾಹುಲ್ ಗಾಂಧಿ ಜಯಗಳಿಸಿದ ಬಳಿಕ ವಯನಾಡು ಕ್ಷೇತ್ರಕ್ಕೆ ರಾಜೀನಾಮೆ ನೀಡಿದ್ದರು.