ಲಕ್ನೋ: ಲಖಿಂಪುರ್ ಘಟನೆಗೆ ಸಂಬಂಧಿಸಿದಂತೆ ಸಂತ್ರಸ್ತ ರೈತರನ್ನು ಭೇಟಿ ಮಾಡಲು ತೆರಳಿದ್ದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಪೊಲೀಸರು ಗೃಹ ಬಂಧನದಲ್ಲಿಟ್ಟಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಿಯಾಂಕಾ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಇದನ್ನೂ ಓದಿ: ನೀವು ಹತ್ಯೆ ಮಾಡಿದ ಜನರಿಗಿಂತ ನಾನು ಮುಖ್ಯ ಅಲ್ಲ: ಪ್ರಿಯಾಂಕಾ ಗಾಂಧಿ
ಈ ಸಂಬಂಧ ಟ್ವೀಟ್ ಮಾಡಿರುವ ಪ್ರಿಯಾಂಕಾ ಗಾಂಧಿ, ನರೇಂದ್ರ ಮೋದಿ ಜೀ, ಕಳೆದ 28 ಗಂಟೆಗಳಿಂದ ನಿಮ್ಮ ಸರ್ಕಾರ ಯಾವುದೇ ಆದೇಶವಿಲ್ಲದೇ ಹಾಗೂ ಎಫ್‍ಐಆರ್ ಇಲ್ಲದೇ ನನ್ನನ್ನು ಗೃಹ ಬಂಧನದಲ್ಲಿರಿಸಿದೆ ಎಂದು ಟ್ವೀಟ್ ಮಾಡಿ ಮೋದಿಗೆ ಟ್ಯಾಗ್ ಮಾಡಿದ್ದಾರೆ.
Advertisement
“Narendra Modi sir, your government has kept me in detention for the last 28 hours without any order and FIR,” tweets Congress leader Priyanka Gandhi Vadra
She was detained yesterday while she was on her way to Lakhimpur Kheri. pic.twitter.com/3SfdntXNno
— ANI UP (@ANINewsUP) October 5, 2021
Advertisement
ಹಿನ್ನೆಲೆ:
ಲಖೀಂಪುರ್‍ನಲ್ಲಿ ಉಪ ಮುಖ್ಯಮಂತ್ರಿ ಕೇಶವ್‍ಪ್ರಸಾದ್ ಮೌರ್ಯ ಮತ್ತು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಭೇಟಿ ನೀಡುವ ವೇಳೆ ರೈತರು ಪ್ರತಿಭಟನೆ ನಡೆಸಿದ್ದರು. ಈ ವೇಳೆ ಬೆಂಗಾವಲು ವಾಹನಗಳ ಸಾಲಿನಲ್ಲಿ ಬರುತ್ತಿದ್ದ ಕೇಂದ್ರ ಸಚಿವ ಅಜಯ್ ಮಿಶ್ರಾನ ಪುತ್ರ ಇದ್ದ ರೈತರ ಮೇಲೆ ಹರಿದು ನಾಲ್ವರು ರೈತರು ಮೃತಪಟ್ಟಿದ್ದಾರೆ ಎಂದು ರೈತ ಸಂಘಟನೆಗಳು ಆರೋಪಿಸಿವೆ. ಆ ಬಳಿಕ ಅಲ್ಲಿ ಪ್ರತಿಭಟನೆ ಉದ್ರಿಕ್ತಗೊಂಡು ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಇದನ್ನೂ ಓದಿ: ಗೆಸ್ಟ್ ಹೌಸ್‌ನಲ್ಲಿ ಕಸ ಗುಡಿಸುತ್ತಿರೋ ಪ್ರಿಯಾಂಕಾ ಗಾಂಧಿ ವೀಡಿಯೋ ವೈರಲ್
Advertisement
Congress supporters continue to protest outside PAC guest house in Sitapur where party leader Priyanka Gandhi Vadra is detained
She was detained yesterday while she was on her way to Lakhimpur Kheri pic.twitter.com/7HuQq5w2ch
— ANI UP (@ANINewsUP) October 5, 2021
Advertisement
ಲಂಖಿಪುರದಲ್ಲಿ ನಡೆದ ಘಟನೆಯಲ್ಲಿ ಮೃತಪಟ್ಟ ರೈತರ ಮನೆಗಳಿಗೆ ಭೇಟಿ ನೀಡಲೆಂದು ತೆರಳುತ್ತಿದ್ದ ಪ್ರಿಯಾಂಕಾ ಗಾಂಧಿಯವರನ್ನು ಉತ್ತರಪ್ರದೇಶದ ಪೊಲೀಸರು ತಡೆದಿದ್ದರು. ಈ ವೇಳೆ ಪ್ರಿಯಾಂಕಾ ಗಾಂಧಿ ಹಾಗೂ ಪೊಲೀಸರ ಮಧ್ಯೆ ಮಾತಿನ ಚಕಮಕಿ ನಡೆದಿತ್ತು. ಬಳಿಕ ಪೊಲೀಸರು ಪ್ರಿಯಾಂಕಾ ಅವರನ್ನು ವಶಕ್ಕೆ ಪಡೆದಿದ್ದರು. ಸದ್ಯ ಪೊಲೀಸರ ವಶದಲ್ಲಿರುವ ಪ್ರಿಯಾಂಕ ಅವರಿಗೆ ರಾಹುಲ್ ಗಾಂಧಿ ಧೈರ್ಯದ ಮಾತುಗಳನ್ನು ಹೇಳಿದ್ದಾರೆ. ಆದರೆ ಇದೀಗ ಪ್ರೀಯಾಂಕಾ ಗಾಂಧಿ ಟ್ವೀಟ್ ಮಾಡುವ ಮೂಲಕವಾಗಿ ಕೇಂದ್ರ ಸರ್ಕಾರವನ್ನುತರಾಟೆಗೆ ತೆಗೆದುಕೊಂಡಿದ್ದಾರೆ. ಇದನ್ನೂ ಓದಿ: ಹತ್ಯಾಕಾಂಡದ ನಂತರವೂ ಮೌನವಾಗಿರುವವರು ಈಗಾಗಲೇ ಸತ್ತಿದ್ದಾರೆ: ರಾಹುಲ್ ಗಾಂಧಿ