Connect with us

Latest

ಯೋಗಿ ಜೀ, ನಿಮ್ಮ ರಾಜ್ಯದಲ್ಲಿ ಮಹಿಳಾ ಪೊಲೀಸರಿಲ್ವಾ?- ಶಿವಸೇನೆ

Published

on

-ವೈರಲ್ ಆಯ್ತು ಎರಡು ಫೋಟೋ

ಮುಂಬೈ: ಸಿಎಂ ಯೋಗಿ ಆದಿತ್ಯನಾಥ್ ಅವರೇ ನಿಮ್ಮ ಬಳಿ ಮಹಿಳೆ ಪೊಲೀಸರು ಇಲ್ವಾ ಎಂದು ಶಿವಸೇನೆ ಸಂಸದ ಸಂಜಯ್ ರಾವತ್ ಟ್ವೀಟ್ ಮಾಡಿದ್ದಾರೆ. ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಕುರ್ತಾವನ್ನು ಪೊಲೀಸ್ ಅಧಿಕಾರಿ ಹಿಡಿದಿರುವ ಫೋಟೋವನ್ನು ಹಾಕಿ ಟ್ವೀಟ್ ಮಾಡಿರೋ ಸಂಜಯ್ ರಾವತ್, ಉತ್ತರ ಪ್ರದೇಶ ಸರ್ಕಾರವನ್ನ ಪ್ರಶ್ನೆ ಮಾಡಿದ್ದಾರೆ.

ಇಂದು ಎರಡನೇ ಬಾರಿ ಸೋದರ ರಾಹುಲ್ ಗಾಂಧಿ ಜೊತೆ ಪ್ರಿಯಾಂಕಾ ಗಾಂಧಿ ವಾದ್ರಾ ಹತ್ರಾಸ್ ನತ್ತ ಪ್ರಯಾಣ ಬೆಳೆಸಿದ್ದರು. ಮಾರ್ಗ ಮಧ್ಯೆ ಪೊಲೀಸ್ ಸಿಬ್ಬಂದಿ ಕಾಂಗ್ರೆಸ್ ನಾಯಕರನ್ನ ತಡೆಯಲು ಮುಂದಾಗಿದ್ದರು. ಈ ವೇಳೆ ಓರ್ವ ಪೊಲೀಸ್ ಸಿಬ್ಬಂದಿ ಪ್ರಿಯಾಂಕಾ ಗಾಂಧಿಯವರನ್ನ ತಡೆಯಲು ಮುಂದಾದ ವೇಳೆ ಅವರ ಕುರ್ತಾ ಹಿಡಿದಿದ್ದಾರೆ. ಈ ಫೋಟೋಗೆ ಸೋಶಿಯಲ್ ಮೀಡಿಯಾದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಇದೇ ಫೋಟೋಗೆ ಶಿವಸೇನೆ ಸಂಸದ ಸಂಜಯ್ ರಾವತ್ ಸಹ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹತ್ರಾಸ್ ಗೆ ತೆರಳಿದ್ದ ವೇಳೆ ಪ್ರಿಯಾಂಕಾ ಗಾಂಧಿ ಸಂತ್ರಸ್ತೆಯ ತಾಯಿಯನ್ನು ಅಪ್ಪಿಕೊಂಡು ಸಾಂತ್ವನ ಹೇಳಿರುವ ಫೋಟೋವನ್ನು ನೆಟ್ಟಿಗರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿದ್ದಾರೆ. ರಾಜ್ಯ ಕಾಂಗ್ರೆಸ್ ನಾಯಕರು ಸಹ ಹತ್ರಾಸ್ ಸಂತ್ರಸ್ತೆಯ ಕುಟುಂಬಸ್ಥರಿಗೆ ಭೇಟಿ ನೀಡಿರುವ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿಯವರ ಫೋಟೋ ಶೇರ್ ಮಾಡಿಕೊಳ್ಳುತ್ತಿದ್ದಾರೆ.

ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಆಗಮನ ಹಿನ್ನೆಲೆ ಸಂತ್ರಸ್ತೆ ಮನೆಯ ಬಳಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರಿದ್ದರು. ಮುಂಜಾಗ್ರತ ಕ್ರಮವಾಗಿ ಪೊಲೀಸರು ನಾಯಕರ ಆಗಮನ ಮತ್ತು ನಿರ್ಗಮನಕ್ಕಾಗಿ ತಾತ್ಕಾಲಿಕ ಮಾರ್ಗ ನಿರ್ಮಿಸಿದ್ದರು ಇನ್ನು ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸರೇ ಕೊಠಡಿಯಲ್ಲಿ ನಾಯಕರ ಭೇಟಿಗೆ ಅವಕಾಶ ಕಲ್ಪಿಸಿದ್ದರು. ಕೊಠಡಿಯಲ್ಲಿ ಸುಮಾರು 40 ನಿಮಿಷ ಕುಟುಂಬಸ್ಥರ ಜೊತೆ ಕಾಂಗ್ರೆಸ್ ನಾಯಕರು ಮಾತುಕತೆ ನಡೆಸಿದರು.

ಇತ್ತ ಕಾಂಗ್ರೆಸ್ ನಾಯಕರ ಭೇಟಿ ಬೆನ್ನಲ್ಲೇ ಸಿಎಂ ಯೋಗಿ ಆದಿತ್ಯನಾಥ್ ಪ್ರಕರಣದ ತನಿಖೆಯನ್ನು ಸಿಬಿಐಗೆ ವರ್ಗಾಯಿಸಲಾಗುವುದು ಎಂದು ತಿಳಿಸಿದ್ದಾರೆ. ವಿಪಕ್ಷಗಳು ಸೇರಿದಂತೆ ದೇಶದ ಜನತೆ ಪ್ರಕರಣದ ತನಿಖೆಯನ್ನು ಸಿಬಿಐನಿಂದ ನಡೆಯಬೇಕೆಂದು ಆಗ್ರಹಿಸಿದ್ದವು. ಆದ್ರೆ ಸಂತ್ರಸ್ತೆಯ ಕುಟುಂಬಸ್ಥರು ಸಿಬಿಐ ತನಿಖೆಯ ಬದಲಾಗಿ, ಸುಪ್ರೀಂಕೋರ್ಟ್ ನ್ಯಾಯಾಧೀಶರ ಕಣ್ಗಾವಲಿನಲ್ಲಿ ತನಿಖೆ ನಡೆಯಬೆಕೆಂದು ಒತ್ತಾಯಿಸಿದ್ದರು ಎಂದು ವರದಿಯಾಗಿದೆ.

Click to comment

Leave a Reply

Your email address will not be published. Required fields are marked *