ನವದೆಹಲಿ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ವಾದ್ರಾ (Priyanka Vadra) ಕೇರಳದ ವಯನಾಡು (Wayanad) ಲೋಕಸಭಾ ಕ್ಷೇತ್ರಕ್ಕೆ ನಡೆಯುವ ಉಪಚುನಾವಣೆಯಲ್ಲಿ ಕಣಕ್ಕೆ ಇಳಿಯುತ್ತಾರಾ ಎಂಬ ಪ್ರಶ್ನೆ ಎದ್ದಿದೆ.
ಹೌದು. ರಾಹುಲ್ ಗಾಂಧಿ (Rahul Gandhi) ಈ ಬಾರಿ ಉತ್ತರ ಪ್ರದೇಶದ ಅಮೇಠಿ ಮತ್ತು ಕೇರಳದ ವಯನಾಡಿನಲ್ಲಿ ಸ್ಪರ್ಧಿಸಿದ್ದರು. ಎರಡು ಕ್ಷೇತ್ರಗಳಲ್ಲಿ ರಾಹುಲ್ ಗಾಂಧಿ ಜಯಗಳಿಸಿದ ಹಿನ್ನೆಲೆಯಲ್ಲಿ ಒಂದು ಕ್ಷೇತ್ರವನ್ನು ಬಿಟ್ಟುಕೊಡಬೇಕಾಗುತ್ತದೆ. ಹೀಗಾಗಿ ವಯನಾಡು ಕ್ಷೇತ್ರಕ್ಕೆ ರಾಜೀನಾಮೆ ನೀಡಬಹುದು ಎಂಬ ಮಾತುಗಳು ಕೇಳಿ ಬರುತ್ತಿದೆ.
Advertisement
ಇದಕ್ಕೆ ಪೂರಕ ಎಂಬಂತೆ ವಯನಾಡಿನ ಕಲ್ಪೆಟ್ಟಾದಲ್ಲಿ ರಾಹುಲ್ ಗಾಂಧಿ ಬೆಂಬಲಿಗರಿಗೆ ಧನ್ಯವಾದ ಅರ್ಪಿಸಲು ಆಯೋಜಿಸಲಾಗಿದ್ದ ಸಾರ್ವಜನಿಕ ಸಮಾರಂಭದಲ್ಲಿ ಮಾತನಾಡಿದ ಕೇರಳ ಕಾಂಗ್ರೆಸ್ ಅಧ್ಯಕ್ಷ ಸುಧಾಕರನ್, ರಾಷ್ಟ್ರವನ್ನು ಮುನ್ನಡೆಸಬೇಕಾದ ರಾಹುಲ್ ಗಾಂಧಿ ಅವರು ವಯನಾಡಿನಲ್ಲಿ ಉಳಿಯುತ್ತಾರೆ ಎಂದು ನಿರೀಕ್ಷಿಸಲು ಸಾಧ್ಯವಿಲ್ಲ. ಆದ್ದರಿಂದ, ನಾವು ದುಃಖಿಸಬಾರದು. ಪ್ರತಿಯೊಬ್ಬರೂ ಅರ್ಥಮಾಡಿಕೊಳ್ಳಬೇಕು. ಅವರಿಗೆ ತಮ್ಮ ಎಲ್ಲಾ ಶುಭಾಶಯಗಳನ್ನು ಮತ್ತು ಬೆಂಬಲವನ್ನು ನೀಡಬೇಕು ಎಂದು ಹೇಳಿದ್ದರು. ಇದನ್ನೂ ಓದಿ: ದರ್ಶನ್ ಇರೋ ಠಾಣೆಗೆ ಶಾಮಿಯಾನ ಹಾಕಿದ್ದರ ಹಿಂದಿನ ಸೀಕ್ರೆಟ್ ರಿವೀಲ್
Advertisement
Advertisement
ವಯನಾಡು ಕ್ಷೇತ್ರಕ್ಕೆ ಕಾಂಗ್ರೆಸ್‌ನ (Congress) ಬೇರೆ ಅಭ್ಯರ್ಥಿಯನ್ನು ನಿಲ್ಲಿಸುವುದಕ್ಕಿಂತ ಪ್ರಿಯಾಂಕಾ ವಾದ್ರಾ ಅವರನ್ನು ನಿಲ್ಲಿಸುವುದು ಸೂಕ್ತ ಎಂಬ ಅಭಿಪ್ರಾಯ ವ್ಯಕ್ತವಾದ ಹಿನ್ನೆಲೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ ಎನ್ನಲಾಗುತ್ತಿದೆ. ಇಲ್ಲಿಯವರೆಗೆ ಪ್ರಿಯಾಂಕಾ ವಾದ್ರಾ ಚುನಾವಣಾ ರಾಜಕಾರಣಕ್ಕೆ ಇಳಿದಿರಲಿಲ್ಲ. ಇದನ್ನೂ ಓದಿ: ದೇಶದ ಪ್ರತಿ ಜಿಲ್ಲೆಯಲ್ಲೂ ಉಗ್ರರ ಜಾಲ ರೂಪಿಸಲು ಬಳ್ಳಾರಿಯಲ್ಲಿ ಸಂಚು – NIA ಚಾರ್ಜ್‌ಶೀಟ್‌ನಲ್ಲಿ ಬೆಚ್ಚಿ ಬೀಳಿಸುವ ಮಾಹಿತಿ ಸ್ಫೋಟ!
Advertisement
ಹಾಗೆ ನೋಡಿದರೆ ಈ ಬಾರಿಯ ಚುನಾವಣೆಯಲ್ಲಿ ಪ್ರಿಯಾಂಕಾ ವಾದ್ರಾ ಕಣಕ್ಕೆ ಇಳಿಯುತ್ತಾರೆ ಎನ್ನಲಾಗುತ್ತಿತ್ತು. ಆದರೆ ಕಣಕ್ಕೆ ಇಳಿದರೆ ಆ ಕ್ಷೇತ್ರದಲ್ಲಿ ಜಾಸ್ತಿ ಪ್ರಚಾರ ನಡೆಸಬೇಕಾಗುತ್ತದೆ. ದೇಶವ್ಯಾಪಿ ಪ್ರಚಾರ ನಡೆಸಲು ಸಾಧ್ಯವಾಗುವುದಿಲ್ಲ. ಒಂದು ವೇಳೆ ಆಯ್ಕೆಯಾದರೆ ಬಿಜೆಪಿಗೆ ಕುಟುಂಬ ರಾಜಕಾರಣದ ಅಸ್ತ್ರ ಸಿಗುತ್ತದೆ ಎಂಬ ಕಾರಣಕ್ಕೆ ಪ್ರಿಯಾಂಕಾ ಹಿಂದೇಟು ಹಾಕಿದ್ದರು ಎಂದು ವರದಿಯಾಗಿತ್ತು.
ಈಗ ಕೆಲ ಕೈ ನಾಯಕರು ವಯನಾಡಿನಿಂದ ಸ್ಪರ್ಧಿಸುವಂತೆ ಒತ್ತಡ ಹೇರುತ್ತಿರುವ ಹಿನ್ನೆಲೆಯಲ್ಲಿ ಪ್ರಿಯಾಂಕಾ ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂಬ ಕುತೂಹಲ ಮನೆ ಮಾಡಿದೆ.
ರಾಯ್‌ಬರೇಲಿಯಲ್ಲಿ ನಡೆದ ಕೃತಜ್ಞತಾ ಸಮಾರಂಭದಲ್ಲಿ ಮಾತನಾಡಿದ್ದ ರಾಹುಲ್ ಗಾಂಧಿ, ಒಂದು ವೇಳೆ ವಾರಣಾಸಿಯಿಂದ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಿದರೆ ಮೋದಿ 2-3 ಲಕ್ಷ ಮತಗಳ ಅಂತರದಿಂದ ಸೋಲುತ್ತಿದ್ದರು ಎಂದು ಹೇಳಿದ್ದರು. ಈ ಹೇಳಿಕೆ ನೀಡುವ ಮೂಲಕ ಪ್ರಿಯಾಂಕಾ ಅವರನ್ನು ಚುನಾವಣಾ ರಾಜಕೀಯಕ್ಕೆ ರಾಹುಲ್ ಎಳೆ ತಂದಿದ್ದರು.
ಇಲ್ಲಿಯವರೆಗೆ ರಾಹುಲ್ ಗಾಂಧಿ ಯಾವ ಕ್ಷೇತ್ರವನ್ನು ತೊರೆಯುತ್ತಾರೆ? ಆ ಕ್ಷೇತ್ರದಲ್ಲಿ ಯಾರು ಸ್ಪರ್ಧೆ ಮಾಡುತ್ತಾರೆ ಎನ್ನುವುದು ಅಧಿಕೃತವಾಗಿ ಪ್ರಕಟವಾಗಿಲ್ಲ.
ವಯನಾಡ್‌ನಲ್ಲಿ ರಾಹುಲ್ ಗಾಂಧಿ 3,64,422 ಮತಗಳ ಅಂತರದಿಂದ ಜಯಗಳಿಸಿದ್ದಾರೆ. ರಾಹುಲ್ ಗಾಂಧಿ 6,47,445 ಮತಗಳನ್ನು ಪಡೆದರೆ ಸಿಪಿಐನಿಂದ ಸ್ಪರ್ಧಿಸಿದ್ದ ಅನ್ನಿ ರಾಜ 2,83,023 ಮತಗಳನ್ನು ಪಡೆದಿದ್ದರು. ಬಿಜೆಪಿಯಿಂದ ಸ್ಪರ್ಧಿಸಿದ್ದ ಕೆ ಸುರೇಂದ್ರನ್ 1,41,045 ಮತ ಪಡೆದು ಮೂರನೇ ಸ್ಥಾನ ಪಡೆದಿದ್ದಾರೆ.