ಬೆಂಗಳೂರು: ಎಐಸಿಸಿ (AICC) ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ (Priyanka Gandhi) ಅವರು ಸೋಮವಾರ ಬೆಂಗಳೂರಿಗೆ (Bengaluru) ಆಗಮಿಸಿದ್ದಾರೆ.
ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಮಹಿಳಾ ಕಾಂಗ್ರೆಸ್ನ ‘ನಾ ನಾಯಕಿ’ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವ ಪ್ರಿಯಾಂಕಾ ಗಾಂಧಿ ಮಧ್ಯಾಹ್ನ 1:30 ರಿಂದ 3:30 ರವರೆಗೆ ಅರಮನೆ ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ.
ಪ್ರಿಯಾಂಕಾ ಗಾಂಧಿ ನಾ ನಾಯಕಿ ಕಾರ್ಯಕ್ರಮದಲ್ಲಿ ರಾಜ್ಯ ಕಾಂಗ್ರೆಸ್ನ ಮಹಿಳಾ ಪ್ರಣಾಳಿಕೆಯ ಕೆಲವು ಪ್ರಮುಖ ವಿಚಾರಗಳ ಘೋಷಣೆ ಮಾಡಲಿದ್ದಾರೆ. 2023ರ ಚುನಾವಣೆಗೆ ಸಿದ್ಧವಾಗುತ್ತಿರುವ ಮಹಿಳೆಯರಿಗಾಗಿಯೇ ಪ್ರತ್ಯೇಕ ಪ್ರಣಾಳಿಕೆ ಘೋಷಣೆಯಾಗುತ್ತಿದೆ.
ಮಹಿಳಾ ಪ್ರಣಾಳಿಕೆಯ ಕೆಲವು ಪ್ರಮುಖ ಅಂಶಗಳನ್ನು ಪ್ರಿಯಾಂಕಾ ಗಾಂಧಿ ಮೂಲಕ ಪಕ್ಷ ಘೋಷಣೆ ಮಾಡಿಸುವ ಸಾಧ್ಯತೆ ಇದೆ. ಈಗಾಗಲೇ ರಾಹುಲ್ ಗಾಂಧಿ 500 ರೂ.ಗೆ ಸಿಲಿಂಡರ್ ನೀಡುವ ಭರವಸೆ ನೀಡಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಕಡಿಮೆ ದರದಲ್ಲಿ ಸಿಲಿಂಡರ್ ನೀಡುವ ಭರವಸೆ ಘೋಷಿಸುವ ಸಾಧ್ಯತೆ ಇದೆ.
ಕಾರ್ಯಕ್ರಮದಲ್ಲಿ 18 ವರ್ಷ ಮೇಲ್ಪಟ್ಟ ನಿರುದ್ಯೋಗಿ ಯುವತಿಯರಿಗೆ 2 ಸಾವಿರ ಸ್ಟೈ ಫಂಡ್ ಘೋಷಣೆ ಮಾಡುವ ಸಾಧ್ಯತೆ ಇದೆ. 2023ರ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಧಿಕಾರಕ್ಕೆ ಬಂದರೆ 18 ವರ್ಷ ಮೇಲ್ಪಟ್ಟ ನಿರುದ್ಯೋಗಿ ಯುವತಿಯರಿಗೆ ಮಾಸಿಕ 2 ಸಾವಿರ ಸ್ಟೈ ಫಂಟ್ ಕೊಡುವ ಬಗ್ಗೆ ಪ್ರಿಯಾಂಕಾ ಗಾಂಧಿ ಅಧಿಕೃತ ಘೋಷಣೆ ಮಾಡುವ ಸಾಧ್ಯತೆಯೂ ಇದೆ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k