– ಸ್ಮೃತಿ ಇರಾನಿ v/s ರಾಹುಲ್ ಗಾಂಧಿ ಫೈಟ್‌ಗೆ ಸಜ್ಜಾಗುತ್ತಾ ಕಣ?
– ತಾಯಿ, ಅಜ್ಜಿಯ ಭದ್ರಕೋಟೆಯಿಂದ ಪ್ರಿಯಾಂಕಾ ಚುನಾವಣೆಗೆ ಎಂಟ್ರಿ?
ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆಗೆ ಉತ್ತರ ಪ್ರದೇಶದ ಕಾಂಗ್ರೆಸ್ ಭದ್ರಕೋಟೆ ರಾಯ್‌ಬರೇಲಿಯಿಂದ ಪ್ರಿಯಾಂಕಾ ಗಾಂಧಿ ವಾದ್ರಾ (Priyanka Gandhi Vadra) ಹಾಗೂ ಅಮೇಥಿ ಕ್ಷೇತ್ರದಿಂದ ಮತ್ತೆ ರಾಹುಲ್ ಗಾಂಧಿ (Rahul Gandhi) ಕಣಕ್ಕಿಳಿಯಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
Advertisement
ರಾಯ್‌ಬರೇಲಿಯಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ಮೂರು ಬಾರಿ ಸ್ಪರ್ಧಿಸಿ ಗೆದ್ದಿದ್ದರು. ರಾಹುಲ್ ಗಾಂಧಿ ಅವರು 2019 ರಲ್ಲಿ ಬಿಜೆಪಿಯ ಸ್ಮೃತಿ ಇರಾನಿ ವಿರುದ್ಧ ಹೀನಾಯ ಸೋಲನುಭವಿಸಿದ್ದರು. ಈಗ ಮತ್ತೆ ಅದೇ ಕ್ಷೇತ್ರದಿಂದ ಕಣಕ್ಕಿಳಿಯಬಹುದು ಎಂದು ಮೂಲಗಳು ಹೇಳಿವೆ. ಇದನ್ನೂ ಓದಿ: ಮೋದಿ ರ‍್ಯಾಲಿಯಲ್ಲಿ ಪಾಲ್ಗೊಳ್ಳಲು ಹೊರಟಿದ್ದ ಸಂದೇಶ್‌ಖಾಲಿ ಮಹಿಳೆಯರಿದ್ದ ಬಸ್‌ಗಳಿಗೆ ತಡೆ
Advertisement
Advertisement
ಈ ಬಾರಿ ಅಮೇಥಿಯಿಂದ ರಾಹುಲ್ ಗಾಂಧಿ ಕಣಕ್ಕಿಳಿದರೆ ಬಿಜೆಪಿ ನಾಯಕಿ ಸ್ಮೃತಿ ಇರಾನಿ ವಿರುದ್ಧ ಪೈಪೋಟಿ ನಡೆಸಲಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಈ ಕಣ ಮತ್ತೆ ಗಮನ ಸೆಳೆಯಲಿದೆ. ಬಿಜೆಪಿ ಈಚೆಗೆ ಬಿಡುಗಡೆ ಮಾಡಿದ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಅಮೇಥಿಯಿಂದ ಸ್ಮೃತಿ ಇರಾನಿ ಸ್ಪರ್ಧಿಸಲಿದ್ದಾರೆ ಎಂದು ಘೋಷಿಸಿದೆ.
Advertisement
ಅಮೇಥಿ ಜೊತೆಗೆ ರಾಹುಲ್ ಗಾಂಧಿ ಕೇರಳದ ವಯನಾಡಿನಿಂದಲೂ ಮತ್ತೆ ಸ್ಪರ್ಧಿಸಲಿದ್ದಾರೆ ಎನ್ನಲಾಗಿದೆ. ಕಳೆದ ಸಾರ್ವತ್ರಿಕ ಚುನಾವಣೆಯಲ್ಲಿ ಲೋಕಸಭೆ ಸ್ಥಾನಮಾನ ಉಳಿಸಿಕೊಳ್ಳಲು ರಾಹುಲ್ ಗಾಂಧಿಗೆ ವಯನಾಡು ಅವಕಾಶ ಮಾಡಿಕೊಟ್ಟಿತ್ತು. ಇದನ್ನೂ ಓದಿ: ಮಮತಾ ಸವಾಲು ಸ್ವೀಕಾರ – ಕೋಲ್ಕತ್ತಾ ಹೈಕೋರ್ಟ್ ಜಡ್ಜ್ ರಾಜೀನಾಮೆ, ಮಾ.7 ರಂದು ಬಿಜೆಪಿ ಸೇರ್ಪಡೆ
ಚುನಾವಣಾ ರಾಜಕೀಯಕ್ಕೆ ಪ್ರಿಯಾಂಕಾ ಗಾಂಧಿಯವರ ಪ್ರವೇಶ ಬಹುನಿರೀಕ್ಷಿತ. ಅವರ ತಾಯಿ ಹಾಗೂ ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು 2019 ಸೇರಿದಂತೆ ಈ ಹಿಂದೆ ಐದು ಬಾರಿ ಗೆದ್ದಿರುವ ರಾಯ್‌ಬರೇಲಿಯಿಂದ ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಅಲ್ಲದೇ ರಾಜಸ್ಥಾನದಿಂದ ರಾಜ್ಯಸಭೆಗೆ ಪ್ರವೇಶಿಸಿದ್ದಾರೆ.