Connect with us

Bengaluru City

ಪ್ರಿಯಾಂಕ ಉಪೇಂದ್ರ ಡಬಲ್ ಆಕ್ಟಿಂಗ್!

Published

on

ಬೆಂಗಳೂರು: ಮಮ್ಮಿ ಚಿತ್ರದ ಯಶಸ್ಸಿನ ನಂತರ ಹೌರಾ ಬ್ರಿಡ್ಜ್ ಚಿತ್ರದಲ್ಲಿ ನಟಿಸುತ್ತಿರೋ ಪ್ರಿಯಾಂಕ ಉಪೇಂದ್ರ ಮತ್ತೊಂದು ಚಿತ್ರವನ್ನು ಒಪ್ಪಿಕೊಂಡಿದ್ದಾರೆ. ಇದು ಸೈಕಾಲಾಜಿಕಲ್ ಥ್ರಿಲ್ಲರ್ ಕಥಾನಕ ಹೊಂದಿರೋ ಚಿತ್ರ. ವಿಶೇಷವೆಂದರೆ ಈ ಚಿತ್ರದಲ್ಲಿ ಮತ್ತಿಬ್ಬರು ಸ್ಯಾಂಡಲ್ ವುಡ್ ನಟಿಯರು ಪ್ರಿಯಾಂಕಗೆ ಜೊತೆಯಾಗಲಿದ್ದಾರೆ.

ಭುವನ್ ನಿರ್ದೇಶನದ ಈ ಚಿತ್ರಕ್ಕೆ ಇನ್ನೂ ಹೆಸರಿಟ್ಟಿಲ್ಲ. ತಾಂತ್ರಿಕ ವರ್ಗ ಮತ್ತು ತಾರಾಗಣದ ಆಯ್ಕೆ ಕಾರ್ಯ ಚಾಲ್ತಿಯಲ್ಲಿದೆ. ಆದರೆ ಪ್ರಿಯಾಂಕ ಉಪೇಂದ್ರ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳೋದು ಪಕ್ಕಾ ಆಗಿದೆ. ಇದರ ಜೊತೆಗೇ ಮತ್ತೆರಡು ಮುಖ್ಯ ಪಾತ್ರಗಳಿಗೂ ಇಬ್ಬರು ಆಯ್ಕೆಯಾಗಿದ್ದಾರೆ. ಭಾವನಾ ರಾವ್ ಮತ್ತು ಶರ್ಮಿಳಾ ಮಾಂಡ್ರೆ ಈ ಚಿತ್ರದಲ್ಲಿ ಪ್ರಿಯಾಂಕ ಸ್ನೇಹಿತೆಯರಾಗಿ ಕಾಣಿಸಿಕೊಳ್ಳಲಿದ್ದಾರೆ.

ಭುವನ್ ಇದೀಗ ಗಮ್ಯ ಎಂಬ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಆ ಚಿತ್ರದ ಚಿತ್ರೀಕರಣ ನಡೆಯುತ್ತಿದೆ. ಈ ಚಿತ್ರ ಮುಗಿಯುತ್ತಿದ್ದಂತೆಯೇ ಹೊಸಾ ಥ್ರಿಲ್ಲರ್ ಕಥೆ ಶುರುವಾಗಲಿದೆ. ಸೈಕಾಲಾಜಿಕಲ್ ಥ್ರಿಲ್ಲರ್ ಕಥಾ ಹಂದರ ಹೊಂದಿರೋ ಈ ಚಿತ್ರವನ್ನು ಪ್ರಿಯಾಂಕಾ ಕೂಡಾ ಖುಷಿಯಿಂದಲೇ ಒಪ್ಪಿಕೊಂಡಿದ್ದಾರೆ. ಒಂದಷ್ಟು ಕಾಲದಿಂದ ಮರೆಯಾದಂತಿದ್ದ ಶರ್ಮಿಳಾ ಮಾಂಡ್ರೆ ಮತ್ತು ಭಾವನಾ ರಾವ್ ಈ ಚಿತ್ರದ ಮುಖ್ಯ ಪಾತ್ರಗಳ ಮೂಲಕ ವಾಪಾಸಾಗಲಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv