ಬೆಂಗಳೂರು: ನಗರದಲ್ಲಿ ನಡೆಯುತ್ತಿರುವ ಪ್ರೊ ಕಬಡ್ಡಿ ಪಂದ್ಯಾಟಕ್ಕೆ ಕೊರೊನಾ ಅಡ್ಡಿಯಾಗಿದೆ. 2 ತಂಡದ ಕೆಲ ಆಟಗಾರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ.
Advertisement
ಮಶಾಲ್ ಸ್ಪೋರ್ಟ್ಸ್ ಆಯೋಜಕತ್ವದಲ್ಲಿ ವಿವೋ ಪ್ರೊ ಕಬಡ್ಡಿ 8ನೇ ಆವೃತ್ತಿ ಬೆಂಗಳೂರಿನ ವೈಟ್‍ಫೀಲ್ಡ್‌ನಲ್ಲಿರುವ ಶೆರಟಾನ್ ಗ್ರ್ಯಾಂಡ್ ಹೋಟೆಲ್ ಹಾಗೂ ಕನ್ವೆನ್ಷನ್ ಸೆಂಟರ್‌ನಲ್ಲಿ ಕಠಿಣ ಬಯೋ ಬಬಲ್ ಮೂಲಕ ಟೂರ್ನಿ ನಡೆಯುತ್ತಿದೆ. ಆದರೆ ಇದೀಗ ಪಾಟ್ನಾ ಪೈರೇಟ್ಸ್ ಮತ್ತು ಗುಜರಾತ್ ಜೈಂಟ್ಸ್ ತಂಡದ ಕೆಲ ಆಟಗಾರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಹಾಗಾಗಿ 2 ತಂಡಗಳ ಕೆಲ ಪಂದ್ಯಗಳನ್ನು ಮುಂದೂಡಲಾಗಿದೆ. ಅಲ್ಲದೆ ಟೂರ್ನಿಯ ವೇಳಾಪಟ್ಟಿಯಲ್ಲಿ ಅಲ್ಪ ಬದಲಾವಣೆಯಾಗಿದೆ. ಇದನ್ನೂ ಓದಿ: ಅಮೆರಿಕದ ನ್ಯಾಷನಲ್ ಕ್ರಿಕೆಟ್ ಟೀಂನಲ್ಲಿ ಕಾಫಿನಾಡ ಪ್ರತಿಭೆ ನಾಸ್ತೋಶ್ ಕೆಂಜಿಗೆ
Advertisement
— ProKabaddi (@ProKabaddi) January 25, 2022
Advertisement
ಈ ಹಿಂದೆ ದಿನದಲ್ಲಿ ಒಟ್ಟು 2 ಪಂದ್ಯಗಳು ನಡೆಯುತ್ತಿತ್ತು. ಶನಿವಾರ ಮತ್ತು ಭಾನುವಾರ 3 ಪಂದ್ಯಗಳು ನಡೆಯುತ್ತಿತ್ತು. ಇಂದಿನಿಂದ ಮುಂದಿನ ಶುಕ್ರವಾರದ ವರೆಗೆ ಪ್ರತಿದಿನ ಕೇವಲ 1 ಪಂದ್ಯ ನಡೆಯಲಿದೆ. ಜೊತೆಗೆ ಶನಿವಾರ ಮತ್ತು ಭಾನುವಾರ 3 ಪಂದ್ಯಗಳ ಬದಲಾಗಿ 2 ಪಂದ್ಯಗಳು ನಡೆಯಲಿದೆ ಎಂದು ವರದಿಯಾಗಿದೆ. ಇದನ್ನೂ ಓದಿ: ಸ್ಮೃತಿ ಮಂಧಾನಗೆ ಐಸಿಸಿ ವಾರ್ಷಿಕ ಅತ್ಯುತ್ತಮ ಮಹಿಳಾ ಕ್ರಿಕೆಟರ್ ಪ್ರಶಸ್ತಿ
Advertisement
Every team right now: Kadam kadam badhaye jaa, #SuperHitPanga mein top-6 ki taraf jaaye jaa!????
Which teams do you think will make the cut? ????#VIVOProKabaddi #BENvJPP #PUNvDEL pic.twitter.com/knPsEfrwyV
— ProKabaddi (@ProKabaddi) January 24, 2022
ಈವರೆಗೆ ಒಟ್ಟು 152 ಪಂದ್ಯಗಳು ನಡೆದಿದ್ದು, ಪಾಯಿಂಟ್ ಪಟ್ಟಿಯಲ್ಲಿ ಬೆಂಗಳೂರು ಬುಲ್ಸ್ 14 ಪಂದ್ಯಗಳಿಂದ 8 ಜಯ, 5 ಸೋಲು, 1 ಟೈ ಸೇರಿ ಒಟ್ಟು 46 ಅಂಕ ಪಡೆದು ಮೊದಲ ಸ್ಥಾನದಲ್ಲಿದೆ. ಎರಡನೇ ಸ್ಥಾನದಲ್ಲಿ ದಬಾಂಗ್ ಡೆಲ್ಲಿ, ಮೂರನೇ ಸ್ಥಾನದಲ್ಲಿ ಬೆಂಗಾಲ್ ವಾರಿಯರ್ಸ್ ಇದೆ.