ಬೆಳಗಾವಿ: ಕುಂದಾನಗರಿ ಬೆಳಗಾವಿಯಲ್ಲಿ (Belagavi) ಚುನಾವಣಾ ಫಲಿತಾಂಶದ ದಿನ ಪಾಕ್ ಪರ ಘೋಷಣೆ (Pro Pakistan Slogans) ಕೂಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿಳಕವಾಡಿ ಪೊಲೀಸ್ ಠಾಣೆಯಲ್ಲಿ (Tilakwadi Police Station) ಸ್ವಯಂಪ್ರೇರಿತ ದೂರು ದಾಖಲಾಗಿದೆ.
ಬೆಳಗಾವಿ ನಗರದ ಟಿಳಕವಾಡಿ ಠಾಣೆ ಸಿಪಿಐ ದಯಾನಂದ ಶೇಗುಣಸಿಯಿಂದ ಸ್ವಯಂಪ್ರೇರಿತ ದೂರು ದಾಖಲಿಸಲಾಗಿದೆ. ಕಾಂಗ್ರೆಸ್ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದಾಗ ಮುಸ್ಲಿಂ ಹುಡುಗರಿಂದ ಪಾಕಿಸ್ತಾನ ಪರವಾಗಿ ಘೋಷಣೆ ಆರೋಪ ಕೇಳಿಬಂದಿತ್ತು. ಕಾಂಗ್ರೆಸ್ ಪಕ್ಷದ ಸುಮಾರು ಮುಸ್ಲಿಂ ಬೆಂಬಲಿಗರಿಂದ ಘೋಷಣೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಪಾಕ್ ಪರ ಘೋಷಣೆ ಕೂಗಿದ ಆರೋಪದಡಿ ಐಪಿಸಿ ಕಲಂ 153, 153(ಬಿ)ರ ಅಡಿ ಪ್ರಕರಣ ದಾಖಲಾಗಿದೆ.
Advertisement
Advertisement
ಮೇ 13ರ ಮಧ್ಯಾಹ್ನ 2:30ರ ಸುಮಾರಿಗೆ ಆರ್‌ಪಿಡಿ ವೃತ್ತದಲ್ಲಿ ಘಟನೆ ನಡೆದಿತ್ತು. ಬೆಳಗಾವಿ ನಗರದ ಆರ್‌ಪಿಡಿ ಕಾಲೇಜಿನಲ್ಲಿ ಮತಎಣಿಕೆ ಪ್ರಕ್ರಿಯೆ ನಡೆದಿತ್ತು. ಜಿಲ್ಲೆಯ ವಿವಿಧ ಕ್ಷೇತ್ರಗಳ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ ವೇಳೆ ಸಂಭ್ರಮಾಚರಣೆಯಲ್ಲಿ ಬೆಂಬಲಿಗರು ತೊಡಗಿದ್ದರು. ಕಾಂಗ್ರೆಸ್ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದಾಗ ಪಾಕ್ ಪರ ಘೋಷಣೆ ಕೂಗಿರುವುದಾಗಿ ಆರೋಪಿಸಲಾಗಿದೆ. ಇದನ್ನೂ ಓದಿ: ಸರ್ಕಾರ ರಚಿಸುವ ಮೊದಲೇ ಕಾಂಗ್ರೆಸ್ಸಿನಿಂದ ಹತ್ಯೆಯ ಗ್ಯಾರಂಟಿ – ಬಿಜೆಪಿ ಕಾರ್ಯಕರ್ತನ ಕೊಲೆಗೆ ಅಶ್ವಥ್ ನಾರಾಯಣ ಆಕ್ರೋಶ
Advertisement
Advertisement
ಪಾಕ್ ಪರ ಘೋಷಣೆ ಕೂಗಿದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ವೈರಲ್ ಆದ ವೀಡಿಯೋ ಫೇಕ್ ಎಂದು ಕಾಂಗ್ರೆಸ್ ಶಾಸಕ ಆಸೀಫ್ ಸೇಠ್ ವೀಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದರು. ಮಾತ್ರವಲ್ಲದೇ ಬಿಜೆಪಿಯವರು ಈ ರೀತಿ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿ, ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಕೇಸ್ ಹಾಕುವುದಾಗಿ ತಿಳಿಸಿದ್ದರು. ಇದನ್ನೂ ಓದಿ: ನನ್ನ ಶ್ರಮಕ್ಕೆ ಫಲ ಕೇಳುತ್ತಿದ್ದೇನೆ ಅಷ್ಟೇ: ಸಿಎಂ ಹುದ್ದೆಗೆ ಡಿಕೆಶಿ ಪಟ್ಟು