ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪಿಗಳು ಮೂರು ದಿನ ಪೊಲೀಸ್ ಕಸ್ಟಡಿಗೆ

Public TV
1 Min Read
PAKISTAN SLOGAN ARREST 1

ಬೆಂಗಳೂರು: ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪದ ಮೇಲೆ ಬಂಧಿತರಾಗಿರುವ ಮೂವರು ಆರೋಪಿಗಳನ್ನು ಮೂರು ದಿನ  ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ಹೊರಡಿಸಲಾಗಿದೆ.

ಇಂದು ಸಂಜೆ ಅಶೋಕನಗರ ಪೊಲೀಸರು ದೆಹಲಿ ಮೂಲದ ಇಲ್ತಾಜ್, ಆರ್‌ ಟಿ ನಗರದ ಮುನಾವರ್ ಹಾಗೂ ಬ್ಯಾಡಗಿಯ ಮೊಹಮದ್ ಶಫಿ ನಾಶಿಪುಡಿ ಬಂಧಿಸಿದ್ದರು. ಬಳಿಕ ಆರೋಪಿಗಳನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ಬಳಿಕ ಪೊಲೀಸರು ಕೋರಮಂಗಲದ 39ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದರು.

Syed Naseer Hussain Congress

ಘಟನೆ ಏನು..?: 2024ರ ಫೆಬ್ರವರಿ 27ರಂದು ರಾಜ್ಯಸಭೆ ಚುನಾವಣೆಯ (Rajya Sabha Election) ಫಲಿತಾಂಶ ಹೊರಬಿದ್ದ ನಂತರ ಕಾಂಗ್ರೆಸ್ ಅಭ್ಯರ್ಥಿ ನಾಸೀರ್ ಹುಸೇನ್ (Nasser Hussain) ಅವರು ಬೆಂಬಲಿಗರೊಂದಿಗೆ ವಿಧಾನಸೌಧದಲ್ಲಿ ವಿಜಯೋತ್ಸವ ಆಚರಿಸುತ್ತಿದ್ದರು. ಈ ಸಂದರ್ಭದಲ್ಲಿ ನಾಸೀರ್ ಹುಸೇನ್ ಅವರ ಕಿರು ಸಂದರ್ಶನ ಮಾಡಲು ಮುಂದಾದಾಗ ಅವರ ಬೆಂಬಲಿಗರಿದ್ದ ಗುಂಪಿನಿಂದ ʼಜಿಂದಾಬಾದ್ ಜಿಂದಾಬಾದ್ ಪಾಕಿಸ್ತಾನ್ ಜಿಂದಾಬಾದ್ʼ ಎಂಬ ಘೋಷಣೆ ಕೇಳಿಬಂದಿತ್ತು. ಈ ಸುದ್ದಿಯನ್ನು ಪಬ್ಲಿಕ್‌ ಟಿವಿ ಬ್ರೇಕ್‌ ಮಾಡಿತ್ತು. ಆದರೆ ಕಾಂಗ್ರೆಸ್‌ ನಾಯಕರು ಮಾಧ್ಯಮ ವರದಿ ಸುಳ್ಳೆಂದು ಹೇಳುತ್ತಲೇ ಬಂದರು.

ಈ ನಡುವೆ ಪೊಲೀಸರು ಘೋಷಣೆ ಕೂಗಿರುವುದಕ್ಕೆ ಸಂಬಂಧಪಟ್ಟ ವೀಡಿಯೋಗಳನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ (FSL) ಕಳುಹಿಸಿದ್ದರು. ಇದೀಗ FSL ವರದಿಯಲ್ಲಿ ಪಾಕ್‌ ಪರ ಘೋಷಣೆ ಕೂಗಿರುವುದು ದೃಢಪಟ್ಟ ನಂತರ ಮೂವರ ಬಂಧನ ಮಾಡಲಾಗಿದೆ. ಇದನ್ನೂ ಓದಿ: ವಿಧಾನಸೌಧದಲ್ಲಿ ಪಾಕ್ ಪರ ಘೊಷಣೆ ಆರೋಪ- ಮೂವರ ಬಂಧನ

PAKISTAN SLOGAN ARREST

ಈ ಸಂಬಂಧ ಸೆಂಟ್ರಲ್‌ ಡಿಸಿಪಿ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ವಿಧಾನಸೌಧದಲ್ಲಿ ನಡೆದ ರಾಜ್ಯಸಭಾ ಚುನಾವಣೆಯ ಫಲಿತಾಂಶದ ಸಂದರ್ಭದಲ್ಲಿʼಪಾಕಿಸ್ತಾನ ಜಿಂದಾಬಾದ್‌ʼ ಎಂಬ ಘೋಷಣೆ ಕೂಗಿದ ಸಂಬಂಧ ವಿಧಾನಸೌಧ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಈ ಹಿನ್ನೆಲೆಯಲ್ಲಿ FSL ವರದಿ, ಸಾಂದರ್ಭಿಕ ಸಾಕ್ಷ್ಯಾಧಾರಗಳು, ಸಾಕ್ಷಿಗಳ ಹೇಳಿಕೆ ಮತ್ತು ಲಭ್ಯ ಸಾಕ್ಷಾಧಾರಗಳ ಮೇರೆಗೆ ಮೂವರನ್ನು ಬಂಧಿಸಿದ್ದು, ಇವರ ವಿರುದ್ಧ ಕಾನೂನು ಕ್ರಮ ಜರಗಿಸಲಾಗಿರುತ್ತದೆ ಎಂದು ಸ್ಪಷ್ಟನೆ ನೀಡಿದ್ದಾರೆ.

Share This Article