ಚಿಕ್ಕೋಡಿ: ಚಿಕ್ಕೋಡಿ (Chikkodi) ಕ್ಷೇತ್ರದಲ್ಲಿ ಕಾಂಗ್ರೆಸ್ (Congress) ಗೆದ್ದ ಹಿನ್ನೆಲೆ ಸಂಭ್ರಮಾಚರಣೆಯಲ್ಲಿ ಯುವಕನೋರ್ವ ಪಾಕಿಸ್ತಾನದ ಪರ ಘೋಷಣೆ ಕೂಗಿದ್ದು, ಪಾಕಿಸ್ತಾನ ಪರ ಜೈಕಾರ ಹಾಕಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಜಮೀರ್ ನಾಯಿಕವಾಡಿ (25) ಬಂಧಿತ ಆರೋಪಿ. ಮಂಗಳವಾರ ಲೋಕಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಚಿಕ್ಕೋಡಿಯಲ್ಲಿ ಕಾಂಗ್ರೆಸ್ ಭರ್ಜರಿ ಜಯ ಗಳಿಸಿತ್ತು. ಈ ಹಿನ್ನೆಲೆ ಮತ ಎಣಿಕೆ ಕೇಂದ್ರದ ಹಿನ್ನೆಲೆ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದ್ದಾರೆ. ಇದನ್ನೂ ಓದಿ: ವಾಲ್ಮೀಕಿ ನಿಗಮದಲ್ಲಿ ಕೋಟ್ಯಂತರ ರೂ. ಹಗರಣ – ಸಿಬಿಐನಿಂದ ಎಫ್‌ಐಆರ್ ದಾಖಲು
ಈ ವೇಳೆ ಆರೋಪಿ ಜಮೀರ್ ಪಾಕಿಸ್ತಾನ್ ಕೀ ಜೈ ಎಂದು ಘೋಷಣೆ ಕೂಗಿದ್ದಾನೆ. ಈ ಹಿನ್ನೆಲೆ ಆರೋಪಿಯನ್ನು ದಸ್ತಗಿರಿ ಮಾಡಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಇದನ್ನೂ ಓದಿ: ಮುಂದಿನ 5 ದಿನ ಭರ್ಜರಿ ಮಳೆ ಮುನ್ಸೂಚನೆ – 17 ಜಿಲ್ಲೆಗಳಿಗೆ ಯಲ್ಲೋ ಅಲರ್ಟ್