– ನನ್ನ ತಾಯಿ ಮೇಲಿನ ಆಣೆಗೂ ದೇಶದ್ರೋಹಿ ಘೋಷಣೆ ಕೂಗಿಲ್ಲ ಎಂದ ಶಫಿ
ಹಾವೇರಿ: ವಿಧಾನಸೌಧದಲ್ಲಿ ಸಂಭ್ರಮಾಚರಣೆ ವೇಳೆ ‘ಪಾಕಿಸ್ತಾನ ಜಿಂದಾಬಾದ್’ (Pakistan Zindabad) ಘೋಷಣೆ ಕೂಗಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್ ಬೆಂಬಲಿಗನನ್ನು ಪೊಲೀಸರು ವಿಚಾರಣೆಗೆ ಕರೆದೊಯ್ದಿದ್ದಾರೆ.
ಪ್ರಕರಣ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ವಿಧಾನಸೌಧ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ. ನಿನ್ನೆ ತಡರಾತ್ರಿ ಮಹಮ್ಮದ್ ಶಫಿ ನಾಶಿಪುಡಿ ಎಂಬ ವ್ಯಕ್ತಿಯನ್ನು ಧ್ವನಿ ಪರೀಕ್ಷೆಗಾಗಿ ಪೊಲೀಸರು ಕರೆದೊಯ್ದಿದ್ದಾರೆ. ಇದನ್ನೂ ಓದಿ: ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಆರೋಪ – ಬಿಜೆಪಿ ನಾಯಕರ ವಿರುದ್ಧ ನಲಪಾಡ್ ದೂರು
ಮಹಮ್ಮದ್ ಶಫಿ ನಾಶಿಪುಡಿ ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್ ಅವರ ಬೆಂಬಲಿಗ. ಬ್ಯಾಡಗಿ ಮೆಣಸಿಕಾಯಿ ವರ್ತಕರಾಗಿದ್ದಾರೆ. ಬ್ಯಾಡಗಿ ತಾಲೂಕು ಮೋಟೆಬೆನ್ನೂರ ಬಳಿಯಿರುವ ತಮ್ಮ SAN ಕೋಲ್ಡ್ ಸ್ಟೋರೇಜ್‌ನಲ್ಲಿದ್ದರು. ಅಲ್ಲಿಂದ ಪೊಲೀಸರು ವಿಚಾರಣೆಗೆ ಕರೆತಂದಿದ್ದಾರೆ.
ಧ್ವನಿ ಹೋಲಿಕೆ ವಿಚಾರಣೆ ಹಿನ್ನೆಲೆಯಲ್ಲಿ ವಿಚಾರಣೆ ನಡೆಸಲಾಗುತ್ತಿದೆ. ಪಾಕಿಸ್ತಾನದ ಪರ ಫೋಷಣೆ ಕೂಗಿದ್ದಾರೆಂದು ಮಹಮ್ಮದ್ ಶಫಿ ವಿರುದ್ಧ ಬ್ಯಾಡಗಿ ಬಿಜೆಪಿ ಮುಖಂಡರು ಆರೋಪ ಮಾಡಿದ್ದರು. ಇದನ್ನೂ ಓದಿ:
ಪ್ರಕರಣ ಸಂಬಂಧ ಸ್ಪಷ್ಟನೆ ನೀಡಿರುವ ಮಹಮ್ಮದ್ ಶಫಿ, ನಾನು ನಾಸೀರ್ ಸಾಬ್ ಜಿಂದಾಬಾದ್ ಎಂದು ಕೂಗಿದ್ದೇನೆ. ನನ್ನ ತಾಯಾಣೆಗೂ ಆ ರೀತಿ ದೇಶದ್ರೋಹಿ ಘೋಷಣೆ ಕೂಗಿಲ್ಲ. ಯಾವ ತನಿಖೆಗೂ ಸಿದ್ಧನಿದ್ದೇನೆ ಎಂದು ತಿಳಿಸಿದ್ದರು.