ಮೈಸೂರು: ಭಯೋತ್ಪಾಕ ಕೃತ್ಯಕ್ಕೆ ಸಹಕಾರ ನೀಡುತ್ತಿದ್ದ ಆರೋಪದ ಅಡಿ ಮೈಸೂರಿನಲ್ಲಿ (Mysuru) ವ್ಯಕ್ತಿಯೊಬ್ಬನನ್ನು ರಾಷ್ಟ್ರೀಯ ತನಿಖಾ ದಳ (NIA) ಬಂಧಿಸಿದೆ.
ಮೈಸೂರಿನ ರಾಜೀವ್ ನಗರದಲ್ಲಿ ನೆಲೆಸಿದ್ದ ನೂರುದ್ದೀನ್ ಅಲಿಯಾಸ್ ರಫಿ ಬಂಧಿತ ಆರೋಪಿ. ದಾಳಿ ವೇಳೆ ಮನೆಯಲ್ಲಿದ್ದ ಆತನ ಮೊಬೈಲ್ ಫೋನ್, ಪೆನ್‌ಡ್ರೈವ್ ಸೇರಿದಂತೆ ಮೊದಲಾದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
2014ರಲ್ಲಿ ಬೆಂಗಳೂರಿನ ಇಸ್ರೇಲ್ (Israel) ಹಾಗೂ ಚೆನ್ನೈನಲ್ಲಿರುವ ಅಮೆರಿಕ ಕಾನ್ಸುಲೇಟ್ ಕಚೇರಿಗಳ ಮೇಲೆ ಸ್ಫೋಟಕ್ಕೆ ಸಂಚು ರೂಪಿಸಿದ ಆರೋಪ ಈತನ ಮೇಲಿದೆ. ಇದನ್ನೂ ಓದಿ: ಕೇಜ್ರಿವಾಲ್‌ಗೆ ʼವಿಶೇಷ ಸೌಲಭ್ಯʼನೀಡಲಾಗಿದೆ ಅಂತ ಜನ ಮಾತನಾಡ್ತಿದ್ದಾರೆ: ಜಾಮೀನು ಬಗ್ಗೆ ಅಮಿತ್ ಶಾ ಮಾತು
ಶ್ರೀಲಂಕಾ ಪ್ರಜೆ ಮೊಹಮ್ಮದ್ ಸಕೀರ್ ಹುಸೇನ್ ಹಾಗೂ ಕೊಲಂಬೋದಲ್ಲಿರುವ ಪಾಕಿಸ್ತಾನದ ರಾಜತಾಂತ್ರಿಕ ಕಚೇರಿ ನೌಕರ ಪಾಕಿಸ್ತಾನದ ಪ್ರಜೆ ಅಮೀರ್ ಜುಬೇರ್ ಸಿದ್ದಿಕಿಯನ್ನು ಎನ್ಐಎ ಅಧಿಕಾರಿಗಳು 2014ರಲ್ಲಿ ಬಂಧಿಸಿದ್ದರು. ಇವರಿಗೆ ಭಾರತದ ನಕಲಿ ನೋಟು ಪೂರೈಸುವ ಮೂಲಕ ಭಯೋತ್ಪಾದಕ ಕೃತ್ಯಕ್ಕೆ ಸಹಕರಿಸಿದ ಆರೋಪದಲ್ಲಿ ನೂರುದ್ದೀನ್ ವಿರುದ್ಧ ಪ್ರಕರಣ ದಾಖಲಾಗಿತ್ತು.
2023ರ ಆಗಸ್ಟ್‌ನಲ್ಲಿ ಜಾಮೀನಿನ (Bail) ಮೇಲೆ ಹೊರಬಂದಿದ್ದ ನೂರುದ್ದೀನ್ ಚೆನ್ನೈನ ಎನ್‌ಐಎ ವಿಶೇಷ ನ್ಯಾಯಾಲಯದ ಮುಂದೆ ಹಾಜರಾಗದೇ ತಲೆಮರೆಸಿಕೊಂಡಿದ್ದ. ಈ ಕಾರಣಕ್ಕೆ ನೂರುದ್ದೀನ್ ವಿರುದ್ಧ ನ್ಯಾಯಾಲಯ ಜಾಮೀನು ರಹಿತ ವಾರಂಟ್ ಹೊರಡಿಸಿತ್ತು. ಅಷ್ಟೇ ಅಲ್ಲದೇ ಆತನ ಸುಳಿವು ನೀಡಿದವರಿಗೆ 5 ಲಕ್ಷ ರೂ. ಬಹುಮಾನ ನೀಡುವುದಾಗಿ ಎನ್‌ಐಎ ಘೋಷಿಸಿತ್ತು. ಖಚಿತ ಮಾಹಿತಿ ಆಧಾರಿಸಿ ಬುಧವಾರ ದಾಳಿ ನಡೆಸಿ ಆರೋಪಿಯನ್ನು ಬಂಧಿಸುವಲ್ಲಿ ಎನ್‌ಐಎ ಯಶಸ್ವಿಯಾಗಿದೆ. ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ಕಣ್ಣಾಮುಚ್ಚಾಲೆ ಆಟ – ವಿಮಾನ ನಿಲ್ದಾಣದಿಂದ ಬರಿಗೈಯಲ್ಲಿ ಪೊಲೀಸರು ವಾಪಸ್