ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಆರಂಭವಾಗಿದ್ದು, ಹೈಕಮಾಂಡ್ (BJP High Command) 30ಕ್ಕೂ ಹೆಚ್ಚು ರಾಜ್ಯ ನಾಯಕರಿಂದ ಅಭಿಪ್ರಾಯ ಸಂಗ್ರಹಿಸಿದೆ.
ರಾಷ್ಟ್ರೀಯ ಬಿಜೆಪಿ ಸಂಘಟನಾ ಜಂಟಿ ಕಾರ್ಯದರ್ಶಿ ಶಿವಪ್ರಕಾಶ್, ರಾಷ್ಟ್ರೀಯ ಬಿಜೆಪಿ ಉಪಾಧ್ಯಕ್ಷ ಬೈಜಯಂತ್ ಪಾಂಡಾ, ರಾಜ್ಯ ಉಸ್ತುವಾರಿ ರಾಧಾ ಮೋಹನ್ ಅಗರವಾಲ್ ನೇತೃತ್ವದಲ್ಲಿ ಪಟ್ಟಿ ತಯಾರಿಸಿ 30ಕ್ಕೂ ಹೆಚ್ಚು ರಾಜ್ಯ ನಾಯಕರಿಂದ ಅಭಿಪ್ರಾಯ ಸಂಗ್ರಹಿಸಿದ್ದಾರೆ. ಅಭಿಪ್ರಾಯ ಸಂಗ್ರಹದ ವೇಳೆ ಮೂರು ಪ್ರಶ್ನೆ ಕೇಳಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ದೇಶದಲ್ಲಿ ಪೆಟ್ರೋಲ್, ಡೀಸೆಲ್ ಖರೀದಿಗೆ ಯಾವುದೇ ಮಿತಿ ಇಲ್ಲ – ಕೇಂದ್ರ ಸ್ಪಷ್ಟನೆ
ರಾಜ್ಯಾಧ್ಯಕ್ಷರು ಮುಂದುವರಿಬೇಕಾ? ಏಕೆ? ರಾಜ್ಯಾಧ್ಯಕ್ಷರು ಬದಲಾಗಬೇಕಾ? ಏಕೆ? ಬದಲಾಗಬೇಕಾದರೆ ಹೊಸ ರಾಜ್ಯಾಧ್ಯಕ್ಷರು ಯಾರಾಗಬೇಕು? ಯಾವ ಮಾನದಂಡಲ್ಲಿ ಹೆಸರು ಹೇಳ್ತಿದ್ದೀರಾ? ಎಂದು ಪ್ರಶ್ನೆಗಳನ್ನ ಕೇಳಿ ಬಿಜೆಪಿ ಹೈಕಮಾಂಡ್ ನಾಯಕರು ಅಭಿಪ್ರಾಯ ಸಂಗ್ರಹಿಸಿದ್ದಾರೆ. ಬಹಳ ದಿನಗಳ ಬಳಿಕ ಬಿಜೆಪಿ ಕಚೇರಿಯಲ್ಲಿ ಪ್ರತ್ಯಕ್ಷವಾದ ರಮೇಶ್ ಜಾರಕಿಹೊಳಿ ಅಧ್ಯಕ್ಷರ ಆಯ್ಕೆ ಬಗ್ಗೆ ಅಭಿಪ್ರಾಯ ಹೇಳಿದ್ದಾರೆ.
ಇನ್ನು ವಿಜಯೇಂದ್ರ ಮುಂದುವರಿಕೆ ಬಗ್ಗೆ ರಾಧಾ ಮೋಹನ್‌ದಾಸ್ ಅಗರವಾಲ್ ಸುಳಿವು ನೀಡಿದ್ದಾರೆ ಎನ್ನಲಾಗಿದೆ. ಇದೇ ವೇಳೆ, ರಾಜ್ಯಸಭೆಗೆ ಡಿವಿ ಸದಾನಂದಗೌಡ ಹೆಸರನ್ನು ಕೆಲವರು ಪ್ರಸ್ತಾಪಿಸಿದ್ದಾರೆ.ಇದನ್ನೂ ಓದಿ: ಕೇರಳ ವಿಧಾನಸಭೆಯಲ್ಲಿ ಕನ್ನಡ ಡಿಂಡಿಮ – ಎಕೆಎಂ ಅಶ್ರಫ್ ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕಾರ!

