ಮಹಿಳೆಗೆ ಚಪಲಿ ಹಾರ ಹಾಕಿ ಮೆರವಣಿಗೆ ಪ್ರಕರಣ- 13 ಜನರ ಬಂಧನ

Public TV
1 Min Read
CRIME

ಬೆಳಗಾವಿ: ಮಹಿಳೆಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡುವ ಮೂಲಕ ವಿಕೃತಿ ಮೆರೆದಿರುವ ಘಟನೆ ಬೆಳಗಾವಿ (Belagavi) ಜಿಲ್ಲೆಯ ಘಟಪ್ರಭಾದಲ್ಲಿ (Ghataprabha) ನಡೆದಿದ್ದು, ಇದೀಗ ಪೊಲೀಸರು 13 ಮಂದಿಯನ್ನು ಬಂಧಿಸಿರುವುದಾಗಿ ತಿಳಿಸಿದ್ದಾರೆ.

ಕೆಲ ಜನರು ಮಹಿಳೆಯೊಬ್ಬರ ಮೇಲೆ ಹಲ್ಲೆ ಮಾಡಿ, ಅಮಾನವೀಯವಾಗಿ ನಡೆದುಕೊಂಡಿದ್ದಾರೆ. ನಂತರ ಆಕೆಗೆ ಚಪ್ಪಲಿ ಹಾರವನ್ನು ಹಾಕಿ ಮೆರವಣಿಗೆ ಮಾಡಿದ್ದಾರೆ. ಈ ವೇಳೆ ನಮ್ಮ ಪೊಲೀಸರು ಮಹಿಳೆಯನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿರುವುದಾಗಿ ಬೆಳಗಾವಿಯಲ್ಲಿ ಎಸ್‌ಪಿ ಡಾ. ಭೀಮಾಶಂಕರ್ ಗುಳೇದ ತಿಳಿಸಿದ್ದಾರೆ.

POLICE JEEP 1

ಘಟನೆಯೇನು?
ಹನಿಟ್ರ್ಯಾಪ್ ಹಾಗೂ ಬ್ಲಾಕ್‌ಮೇಲ್ ಆರೋಪ ಹೊರಿಸಿ ಮಹಿಳೆಯೊಬ್ಬರಿಗೆ ಸ್ಥಳೀಯರೇ ಥಳಿಸಿ, ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿದ್ದರು. ಊರಿನವರು ಹಾಗೂ ಮಹಿಳೆ ನಡುವೆ ಆಗಾಗ ಗಲಾಟೆ ನಡೆಯುತ್ತಿತ್ತು. ಇದೇ ಕಾರಣಕ್ಕೆ ಮೃತ್ಯುಂಜಯ ಸರ್ಕಲ್‌ನಲ್ಲಿ ಮಹಿಳೆ ಮೇಲೆ ಸ್ಥಳೀಯರು ಅಮಾನವೀಯವಾಗಿ ವರ್ತಿಸಿದ್ದಾರೆ. ಇದನ್ನೂ ಓದಿ: ಪಾಕ್ ಕ್ರಿಕೆಟಿಗರಿಗೆ ಜೈ ಶ್ರೀರಾಮ್‌ ಘೋಷಣೆ: ಉದಯನಿಧಿ ಆಕ್ಷೇಪ

ಇದೀಗ ಮಹಿಳೆಯ ದೂರಿನ ಆಧಾರದ ಮೇರೆಗೆ ಪ್ರಕರಣ ದಾಖಲಿಸಿ 13 ಜನ ಆರೋಪಿಗಳನ್ನು ಬಂಧಿಸಲಾಗಿದೆ. ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಭೀಮಾಶಂಕರ್ ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: ಹೃದಯಾಘಾತದಿಂದ ಅರಭಾವಿಮಠದ ಸ್ವಾಮೀಜಿ ಲಿಂಗೈಕ್ಯ

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

Share This Article