‘ಪಠಾಣ್ 2’ಗೆ ನಿರ್ಮಾಪಕ ಆದಿತ್ಯ ಚೋಪ್ರಾ ಚಿಂತನೆ

Public TV
2 Min Read
Pathan

ಶಾರುಖ್ ಖಾನ್ (Shah Rukh Khan) ನಟನೆಯ ಪಠಾಣ್ ಸಿನಿಮಾ ಏನೆಲ್ಲ ಗೊಂದಲಗಳ ನಡುವೆಯೂ ಸೂಪರ್ ಹಿಟ್ ಆಗಿತ್ತು. ಕೇಸರಿ ಬಿಕಿನಿ ವಿಚಾರವಾಗಿ ಹೊತ್ತಿಕೊಂಡಿದ್ದ ವಿವಾದದ ಬೆಂಕಿ, ಸಿನಿಮಾವನ್ನೂ ಮುಗಿಸಲಿದೆ ಎಂದು ಭವಿಷ್ಯ ನುಡಿಯಲಾಗಿತ್ತು. ಆದರೆ, ಅದೆಲ್ಲವನ್ನೂ ಮೀರಿ ಸಿನಿಮಾ ಗೆದ್ದಿತ್ತು. ಇದೀಗ ಪಠಾಣ್ ಸಿನಿಮಾ ಸೀಕ್ವೆಲ್ (Pathan 2)ಮಾಡಲು ನಿರ್ಮಾಪಕ ಆದಿತ್ಯ ಚೋಪ್ರಾ (Aditya Chopra) ಚಿಂತನೆ ನಡೆಸಿದ್ದಾರೆ. ಈ ಕುರಿತಂತೆ ಶಾರುಖ್ ಖಾನ್ ಜೊತೆ ಅವರು ಚರ್ಚೆ ಕೂಡ ಮಾಡಿದ್ದಾರಂತೆ.

vivek with pathan

ಪಠಾಣ್  ಸಿನಿಮಾ ಬಾಕ್ಸ್ ಆಫೀಸಿನಲ್ಲಿ ದಾಖಲೆ ಬರೆದಿತ್ತು. ಸಿನಿಮಾ ರಿಲೀಸ್ ಆಗಿ 27ನೇ ದಿನಕ್ಕೆ ಸಾವಿರ ಕೋಟಿ (Thousand Crore) ಕ್ಲಬ್ (Club) ಸೇರಿತ್ತು. ಆ ವರ್ಷದಲ್ಲಿ ರಿಲೀಸ್ ಆದ ಬಾಲಿವುಡ್ ಸಿನಿಮಾಗಳಲ್ಲಿ ಅತೀ ಹೆಚ್ಚು ಹಣ ಮಾಡಿದ ಚಿತ್ರ ಎನ್ನುವ ಹೆಗ್ಗಳಿಕೆಗೂ ಈ ಸಿನಿಮಾ ಪಾತ್ರವಾಗಿತ್ತು. ಶಾರುಖ್ ಖಾನ್ ಮತ್ತು ದೀಪಿಕಾ ಪಡುಕೋಣೆ (Deepika Padukone) ಕಾಂಬಿನೇಷನ್ ಗೆ ಅಭಿಮಾನಿಗಳು ಫಿದಾ ಆಗಿದ್ದರು.

pathan 2

ಪಠಾಣ್ ಸಿನಿಮಾದ ಹಾಡೊಂದು ವಿವಾದಕ್ಕೀಡಾದಾಗ ಈ ಸಿನಿಮಾವನ್ನು ಗೆಲ್ಲಿಸಲೇಬಾರದು ಎಂದು ಹಲವರು ಕರೆ ನೀಡಿದರು. ಪ್ರತಿಭಟನೆಗಳು ನಡೆದವು, ಬಾಯ್ಕಾಟ್ ಪಠಾಣ್ ಅಭಿಯಾನ ಶುರುವಾಯಿತು. ಚಿತ್ರಮಂದಿರಗಳ ಮೇಲೆ ದಾಳಿ ನಡೆದವು. ಸಿನಿಮಾದ ಪೋಸ್ಟರ್ ಹರಿದು ಹಾಕಲಾಯಿತು. ಪೋಸ್ಟರ್ ಸುಡಲಾಯಿತು. ಏನೆಲ್ಲ ಸಂಕಷ್ಟಗಳು ಎದುರಾದರೂ, ಪಠಾಣ್ ಮಾತ್ರ ಗೆಲುವು ಸಾಧಿಸಿತ್ತು.

pathan 1

ಪಠಾಣ್ ಒಂದೊಳ್ಳೆ ಸಿನಿಮಾ. ಎಲ್ಲರ ಮೆಚ್ಚುಗೆಗೂ ಅದು ಪಾತ್ರವಾಗಲಿದೆ. ದೇಶಭಕ್ತಿ ಸಾರುವಂತಹ ಕಥೆಯನ್ನು ಇದು ಒಳಗೊಂಡಿದೆ ಎಂದು ಶಾರುಖ್ ಹೇಳಿದರೂ, ವಿರೋಧಿಗಳು ಮಾತ್ರ ಕೇಳಲಿಲ್ಲ. ಕೆಲವು ರಾಜ್ಯಗಳಲ್ಲಿ ಸಿನಿಮಾವನ್ನು ನಿಷೇಧ ಮಾಡುವಂತೆ ಒತ್ತಡ ತರಲಾಯಿತು. ಕೊನೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯ ಪ್ರವೇಶ ಮಾಡಿದರು. ಆದರೂ, ಪ್ರತಿಭಟನೆ ಮಾತ್ರ ನಿಲ್ಲಲಿಲ್ಲ.

 

ಪಠಾಣ್ ಸಿನಿಮಾಗಾಗಿ ಇಡೀ ಬಾಲಿವುಡ್ ಒಂದಾಯಿತು. ಈ ಸಿನಿಮಾವನ್ನು ಗೆಲ್ಲಿಸುವ ಮೂಲಕ ಬಾಲಿವುಡ್ ಗೆಲ್ಲಿಸೋಣ ಎನ್ನುವ ಮಾತು ಕೇಳಿ ಬಂತು. ಹಾಗಾಗಿ ಶಾರುಖ್ ವಿರೋಧಿಗಳು ಕೂಡ ಈ ಸಿನಿಮಾವನ್ನು ಮೆಚ್ಚಿ ಮಾತನಾಡಿದರು. ಮೊದ ಮೊದಲು ತೆಗಳುತ್ತಿದ್ದವರು, ಆ ಮೇಲೆ ಸಿನಿಮಾ ಬಗ್ಗೆ ಹೊಗಳಿಕೆಯ ಮಾತುಗಳನ್ನು ಆಡಿದರು. ಇದೇ ಸಿನಿಮಾದ ಮುಂದುವರೆದ ಭಾಗವನ್ನು ಮಾಡಲು ಚಿತ್ರತಂಡ ಸಜ್ಜಾಗಿದೆ.

Share This Article