ವೈಕುಂಠ ಏಕಾದಶಿ- ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್‌ಕುಮಾರ್

Public TV
1 Min Read
ashwini puneeth rajkumar

ವೈಕುಂಠ ಏಕಾದಶಿ ಹಿನ್ನೆಲೆ ಮಲ್ಲೇಶ್ವರಂ ಟಿಟಿಡಿ ದೇವಸ್ಥಾನಕ್ಕೆ ಅಶ್ವಿನಿ ಪುನೀತ್‌ರಾಜ್‌ಕುಮಾರ್ (Ashwini Puneeth Rajkumar) ಭೇಟಿ ನೀಡಿದ್ದಾರೆ. ತಿಮ್ಮಪ್ಪನಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇದನ್ನೂ ಓದಿ:‘ಪುಷ್ಪ ಕಾ ಬಾಪ್’ ಎಂದು ಕೇಕ್ ಮೇಲೆ ಬರೆದು ತಂದೆಗೆ ವಿಶ್ ಮಾಡಿದ ಅಲ್ಲು ಅರ್ಜುನ್

ashwini puneeth rajkumar 1

ಇಂದು (ಜ.10) ಎಲ್ಲಾ ಕಡೆ ವೈಕುಂಠ ಏಕಾದಶಿ ಆಚರಿಸಲಾಗುತ್ತಿದೆ. ಈ ಪ್ರಯುಕ್ತ ಮಲ್ಲೇಶ್ವರಂನಲ್ಲಿರುವ ಟಿಟಿಡಿ ದೇವಸ್ಥಾನಕ್ಕೆ ಭೇಟಿ ನೀಡಿ ಪುನೀತ್ ರಾಜ್‌ಕುಮಾರ್ ಪತ್ನಿ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ.

ashwini puneeth rajkumar 2

ಅಂದಹಾಗೆ, ಯುವರಾಜ್‌ಕುಮಾರ್ ನಟನೆಯ 2ನೇ ಚಿತ್ರಕ್ಕೆ ಅಶ್ವಿನಿ ಪುನೀತ್ ರಾಜ್‌ಕುಮಾರ್ ನಿರ್ಮಾಣಕ್ಕೆ ಸಾಥ್ ನೀಡಿದ್ದಾರೆ. ಪಿಆರ್‌ಕೆ ಸಂಸ್ಥೆ ಮೂಲಕ ಹೊಸಬರಿಗೆ ಪುನೀತ್‌ ಪತ್ನಿ ಅವಕಾಶ ನೀಡುತ್ತಿದ್ದಾರೆ.

Share This Article