ರಾಮ್ ಚರಣ್ ಜೊತೆ ಕೈ ಜೋಡಿಸಿದ ‘ದಿ ಕಾಶ್ಮೀರಿ ಫೈಲ್ಸ್’ ನಿರ್ಮಾಪಕ

Public TV
1 Min Read
Ram Charan

ತ್ರಿಬಲ್ ಆರ್ ಸಿನಿಮಾ ಮೂಲಕ ಗ್ಲೋಬಲ್ ಸ್ಟಾರ್ ಪಟ್ಟಕ್ಕೇರಿರುವ ಮೆಗಾಪವರ್ ಸ್ಟಾರ್ ರಾಮ್ ಚರಣ್ (Ram Charan) ಯುವ ಪ್ರತಿಭೆಗಳ ಕನಸನ್ನು ಬೆಂಬಲಿಸಿ ಪ್ರೋತ್ಸಾಹಿಸೋದಿಕ್ಕೆ ಹೊಸ ಹೆಜ್ಜೆ ಇಟ್ಟಿದ್ದಾರೆ. ವಿ ಮೆಗಾ ಪಿಕ್ಚರ್ಸ್ (Mega Pictures) ಮೂಲಕ ನಿರ್ಮಾಣಕ್ಕಿಳಿದಿರುವ ರಾಮ್ ಗೆ ಸ್ನೇಹಿತ ಯುವಿ ಕ್ರಿಯೇಷನ್ ನ ವಿಕ್ರನ್ ರೆಡ್ಡಿ ಸಾಥ್ ಕೊಟ್ಟಿದ್ದಾರೆ.

ram charan

ದಿ ಕಾಶ್ಮೀರಿ ಫೈಲ್ಸ್ ಹಾಗೂ ಕಾರ್ತಿಕೇಯ-2 ನಂತಹ ಬ್ಲಾಕ್ ಬಸ್ಟರ್ ಹಿಟ್ ಕೊಟ್ಟಿರುವ ಅಭಿಷೇಕ್ ಅಗರ್ವಾಲ್(Abhishek Agarwal)  ಆರ್ಟ್ ಬ್ಯಾನರ್ ಹಾಗೂ ವಿ ಮೆಗಾ ಪಿಕ್ಚರ್ಸ್ ಜಂಟಿಯಾಗಿ ನಿರ್ಮಾಣಕ್ಕಿಳಿದಿದ್ದಾರೆ. ಈ ಎರಡು ಸಂಸ್ಥೆಗಳ ಮೂಲಕ ಪ್ಯಾನ್ ಇಂಡಿಯಾ ಚಿತ್ರ ನಿರ್ಮಾಣ ತಯಾರಿ ನಡೆಯುತ್ತಿದೆ. ಇದನ್ನೂ ಓದಿ:ಹುಟ್ಟುಹಬ್ಬದ ಸಂಭ್ರಮದಲ್ಲಿ ‘ಹೊಯ್ಸಳ’ ಬಲಿ- ಫ್ಯಾನ್ಸ್‌ಗೆ ಸಿಕ್ತು ಸಿಹಿಸುದ್ದಿ

RAM CHARAN 1 1

ಅಭಿಷೇಕ್ ಅಗರ್ವಾಲ್ ಆರ್ಟ್ ಬ್ಯಾನರ್ ಹಾಗೂ ವಿ ಮೆಗಾ ಪಿಕ್ಚರ್ಸ್ ಜಂಟಿಯಾಗಿ ಮೂಡಿ ಬರ್ತಿರುವ ಚೊಚ್ಚಲ ಸಿನಿಮಾಗೆ ಯುವ ನಾಯಕ ಹಾಗೂ ಹೊಸ ನಿರ್ದೇಶಕರಿಗೆ ಅವಕಾಶ ಕಲ್ಪಿಸಿಕೊಡಲಾಗಿದೆ. ಶೀಘ್ರದಲ್ಲಿ ಈ ಪ್ರಾಜೆಕ್ಟ್ ಅನೌನ್ಸ್ ಆಗಲಿದೆ. ವಿಭಿನ್ನ ಕಂಟೆಂಟ್ ನ್ನು ಪ್ರೇಕ್ಷಕರಿಗೆ ಅರ್ಪಿಸಲು ಈ ಎರಡು ಸಂಸ್ಥೆಗಳು ಕೈ ಜೋಡಿಸಿವೆ.

Share This Article