Bengaluru City
ಹಿರಿಯ ನಿರ್ಮಾಪಕಿ ಪಾರ್ವತಮ್ಮ ರಾಜ್‍ಕುಮಾರ್ ವಿಧಿವಶ

ಬೆಂಗಳೂರು: ಹಿರಿಯ ನಿರ್ಮಾಪಕಿ ಡಾ. ಪಾರ್ವತಮ್ಮ ರಾಜ್‍ಕುಮಾರ್(78) ವಿಧಿವಶರಾಗಿದ್ದಾರೆ.
ಬೆಳಗ್ಗೆ 9 ಗಂಟೆಯಿಂದ ಸದಾಶಿವನಗರದ ಪೂರ್ಣಪ್ರಜ್ಞಾ ಆಟದ ಮೈದಾನದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಪೂರ್ಣಪ್ರಜ್ಞ ಮೈದಾನಕ್ಕೆ ಆಗಮಿಸಿ ನಟ ಅಂಬರೀಶ್, ಮುನಿರತ್ನ, ರಾಕ್‍ಲೈನ್ ವೆಂಕಟೇಶ್ ಅಲ್ಲದೇ ಬೆಂಗಳುರು ನಗರ ಪೊಲೀಸ್ ಆಯುಕ್ತ ಪ್ರವೀಣ್ ಸೂದ್ ವ್ಯವಸ್ಥೆ ಪರಿಶೀಲಿಸಿದ್ದಾರೆ.
ರಕ್ತದೊತ್ತಡ ಹಾಗೂ ಸಕ್ಕರೆ ಕಾಯಿಲೆಯಿಂದ ಬಳುತ್ತಿದ್ದ ಪಾರ್ವತಮ್ಮ ಅವರು ನಗರದ ರಾಮಯ್ಯ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಇದೀಗ ನಿಧನರಾಗಿದ್ದಾರೆ.
