ಧಾರವಾಡ: ಇಬ್ಬರು ಮಹಿಳೆಯರಿಗೆ ಭದ್ರತೆ ನೀಡಿ ಶಬರಿಮಲೆ ಅಯ್ಯಪ್ಪ ದೇವಸ್ಥಾನ ಪ್ರವೇಶಿಸಲು ಸಹಾಯ ಮಾಡಿದ್ದಕ್ಕೆ ಸಾಹಿತಿ ಚಂದ್ರಶೇಖರ ಪಾಟೀಲ್ ಅವರು ಕೇರಳ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ಕೇರಳ ಸರ್ಕಾರ ನಡೆದುಕೊಂಡಿದೆ. ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿ ಹಿಡಿದಿದೆ. ಹೀಗಾಗಿ ಕೇರಳ ಸರ್ಕಾರಕ್ಕೆ ನಾನು ಅಭಿನಂದನೆ ಸಲ್ಲಿಸುತ್ತೆನೆ. ಅಲ್ಲಿನ ಸರ್ಕಾರ ಸೂಕ್ತವಾದ ನಿರ್ಣಯ ತೆಗೆದುಕೊಂಡಿದೆ. ಮಹಿಳೆಯರ ಪ್ರವೇಶಕ್ಕೆ ವಿರೋಧಿಸಿದರೆ ಸುಪ್ರಿಂಗೆ ಅಗೌರವ ಸಲ್ಲಿಸಿದಂತಾಗುತ್ತದೆ. ನಾವು ಇಡೀ ಕೇರಳ ಜನತೆಗೆ ಅಭಿನಂದನೆ ಸಲ್ಲಿಸಬೇಕು. ಒಬ್ಬರಿಗೆ ಎಂಟ್ರಿ ಸಿಕ್ಕರೆ ಸಾಕು ಮೂಢನಂಬಿಕೆ, ಕೋಮುವಾದ ಆಧುನಿಕ ಮೌಲ್ಯಗಳಲ್ಲ ಅಂತ ಅವರು ಹೇಳಿದ್ರು.
Advertisement
Advertisement
ಇದೇ ವೇಳೆ ಪ್ರೋ. ಭಗವಾನ್ ಪುಸ್ತಕದಲ್ಲಿ ಶ್ರೀರಾಮನಿಗೆ ಅವಮಾನ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ಪ್ರಜಾಪ್ರಭುತ್ವದ ಮುಖ್ಯ ಗುಣ ಪ್ರತಿರೋಧವಾಗಿದೆ. ಪ್ರಜಾಪ್ರಭುತ್ವದಲ್ಲಿ ವೈಚಾರಿಕ ವಿರೋಧಗಳಿರಬೇಕು. ರಾಮಮಂದಿರ ಏಕೆ ಬೇಡ? ಹಳೆಯ ಪುಸ್ತಕವಾಗಿದೆ. ಇದೀಗ ಅದರ ಎರಡನೇ ಮುದ್ರಣ ಹೊರ ಬರುತ್ತಿದೆ. ಈಗ ಅದಕ್ಕೆ ವಿರೋಧ ವ್ಯಕ್ತವಾಗುತ್ತಿದೆ. ‘ಬೇಡ’ ಅನ್ನೋ ಪುಸ್ತಕ ಬರೆಯಲಾಗಿದೆ. ಅದನ್ನು ಎದುರಿಸಲು ‘ಏಕೆ ಬೇಕು?’ ಅನ್ನೋದನ್ನು ಬರೆಯಬೇಕು ಅಂದ್ರು. ಇದನ್ನೂ ಓದಿ: ಕಾನೂನಾತ್ಮಕವಾಗಿ ಮಾನ್ಯತೆ ಸಿಕ್ಕಿದ್ದು, ಹಿಂದೂಗಳು ಹಿಂದೂ ದೇವಸ್ಥಾನಕ್ಕೆ ಹೋಗೋದ್ರಲ್ಲಿ ತಪ್ಪೇನಿದೆ- ಜಯಮಾಲಾ ಪ್ರಶ್ನೆ
Advertisement
Advertisement
‘ಏಕೆ ಬೇಕು?’ ಅನ್ನೋ ಪುಸ್ತಕ ಬರೆದು ಎದುರಿಸಲಿ. ಆಗ ಅದು ಪ್ರಜಾಪ್ರಭುತ್ವದ ಗುಣವೆನ್ನಿಸಿಕೊಳ್ಳುತ್ತದೆ. ನಾನು ಮೂಲತಃ ನಾಸ್ತಿಕ. ಹೀಗಾಗಿ ದೇವರು, ಪುರಾಣಗಳ ಬಗ್ಗೆ ನನಗೆ ನಂಬಿಕೆ ಇಲ್ಲ. ಮಂದಿರ ನಿರ್ಮಾಣದ ವಿಚಾರ ನನ್ನ ವ್ಯಾಪ್ತಿಯಲ್ಲಿ ಬರೋದಿಲ್ಲ. ವಾಲ್ಮೀಕಿ ಮುಂಚೆಯೂ ರಾಮಾಯಣದ ಕಥೆ ಇದೆ ಅಂತಾರೆ. ನನ್ನ ಪಾಲಿಗೆ ಅದೊಂದು ಮಹಾಕಾವ್ಯವಾಗಿದೆ. ವಾಲ್ಮೀಕಿ ರಾಮಾಯಣ ಸಂಸ್ಕೃತ ಮೂಲದ್ದಾಗಿದೆ. ಆದರೆ ಸಂಸ್ಕೃತ ನನಗೆ ಬರೋದಿಲ್ಲ. ಹೀಗಾಗಿ ನಾನು ವಾಲ್ಮೀಕಿ ರಾಮಾಯಣ ಓದಿಲ್ಲ. ನಾನು ಕುವೆಂಪು ರಾಮಾಯಣ ಓದಿದ್ದೇನೆ. ನಮ್ಮಲ್ಲಿ ಒಟ್ಟು 300 ರಾಮಾಯಣಗಳಿವೆ. ರಾಮ ದೇವರೋ, ಇತಿಹಾಸ ಪುರುಷನೋ ಅನ್ನೋದನ್ನು ಸಂಶೋಧಕರಿಗೆ ಬಿಡಬೇಕು. ಹೀಗಾಗಿ ಈ ವಿಚಾರ ನನ್ನ ವ್ಯಾಪ್ತಿಗೆ ಬರೋದಿಲ್ಲ ಅಂತ ಅವರು ತಿಳಿಸಿದ್ರು.
ರಾಮಮಂದಿರ ನಿರ್ಮಾಣ ವಿಚಾರದ ಕುರಿತು ಮಾತನಾಡಿದ ಸಾಹಿತಿ, ಮೋದಿಯವರು ಕೋರ್ಟ್ ಆದೇಶ ಬಂದ ಮೇಲೆ ನೋಡೋಣ ಅಂದಿದ್ದಾರೆ. ಹೀಗಾಗಿ ಪ್ರಧಾನಿ ಹೇಳಿಕೆಗೆ ನನ್ನ ಸಂಪೂರ್ಣ ಬೆಂಬಲವಿದೆ ಅಂದ್ರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv