ಬೆಂಗಳೂರು: ವೃತ್ತಿಪರ ಕೋರ್ಸ್‌ಗಳಿಗೆ(Professional Course) ಸರ್ಕಾರಿ ಕೋಟಾದ ಸೀಟುಗಳ ಪ್ರವೇಶ ಸಂದರ್ಭದಲ್ಲಿ ಸರ್ಕಾರ ನಿಗದಿಪಡಿಸಿರುವ ಶುಲ್ಕ ಮತ್ತು ಇತರೇ ಶುಲ್ಕವನ್ನು ಹೊರತುಪಡಿಸಿ, ಹೆಚ್ಚಿನ ಶುಲ್ಕಕ್ಕೆ ಬೇಡಿಕೆ ಇಟ್ಟ ಪಕ್ಷದಲ್ಲಿ ಅಂತಹ ಸಂಸ್ಥೆಗಳ ವಿರುದ್ಧ ನೊಂದ ವಿದ್ಯಾರ್ಥಿಗಳು ಶುಲ್ಕ ನಿಯಂತ್ರಣ ಸಮಿತಿಗೆ ದೂರು ನೀಡಬಹುದು ಎಂದು ಸಮಿತಿಯ ಅಧ್ಯಕ್ಷ ನ್ಯಾಯಮೂರ್ತಿ ಬಿ.ಶ್ರೀನಿವಾಸಗೌಡ (B Srinivasa Gowda) ಅವರು ತಿಳಿಸಿದ್ದಾರೆ.
ಬೆಂಗಳೂರಿನ (Bengaluru) ಮಲ್ಲೇಶ್ವರದ 18ನೇ ಅಡ್ಡರಸ್ತೆಯ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ(KEA) ನೆಲಮಹಡಿಯಲ್ಲಿ ಸಮಿತಿಯ ಕಚೇರಿ ಇದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ: ಆರ್.ವಿ.ದೇಶಪಾಂಡೆ
ಮುಂದೆ ಪ್ರವೇಶ ಬಯಸುವ ಹಾಗೂ ಈಗಾಗಲೇ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳು ಕೂಡ ಈ ರೀತಿಯ ಸಮಸ್ಯೆ ಎದುರಿಸುತ್ತಿದ್ದರೆ ದೂರು ಸಲ್ಲಿಸಬಹುದು ಎಂದು ಅವರು ಸಲಹೆ ನೀಡಿದ್ದಾರೆ.
