ಬೆಂಗಳೂರು: ಎಂಜಿನಿಯರಿಂಗ್ 3ನೇ ಸೆಮಿಸ್ಟರ್‌ಗೆ ನೇರ ಪ್ರವೇಶ ಬಯಸುವ ವೃತ್ತಿಪರ ಡಿಪ್ಲೋಮಾ ಅಭ್ಯರ್ಥಿಗಳಿಗೆ ಮೊದಲ ಸುತ್ತಿನ ಸೀಟು ಹಂಚಿಕೆಗೆ ಆಪ್ಷನ್ಸ್ ದಾಖಲಿಸಲು ಆಗಸ್ಟ್ 21ರವರೆಗೆ ಅವಕಾಶ ನೀಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ (H Prasanna) ತಿಳಿಸಿದ್ದಾರೆ.
ಅದೇ ದಿನ ಮಧ್ಯಾಹ್ನ 2 ಗಂಟೆಗೆ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶ ಹಾಗೂ ಆ.22ರಂದು ಬೆಳಿಗ್ಗೆ 11ಕ್ಕೆ ಅಂತಿಮ ಫಲಿತಾಂಶ ಪ್ರಕಟಿಸಲಾಗುತ್ತದೆ. ಸೀಟು ಹಂಚಿಕೆಯಾದ ಅಭ್ಯರ್ಥಿಗಳು ಆ.24ರಿಂದ 25ರವರೆಗೆ ಶುಲ್ಕ ಪಾವತಿಸಿ, ಸೀಟು ಖಾತರಿ ಚೀಟಿ ಡೌನ್‌ಲೋಡ್ ಮಾಡಿಕೊಳ್ಳಬೇಕು. ಆ.26ರೊಳಗೆ ಕಾಲೇಜಿನಲ್ಲಿ ವರದಿ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ. ಇದನ್ನೂ ಓದಿ: ದೆಹಲಿಯಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಚ್ – ಸುಪ್ರೀಂ ಸಮಿತಿಯಿಂದ ತನಿಖೆ
ಬಿ-ಫಾರ್ಮಾ ಲ್ಯಾಟರಲ್ ಪ್ರವೇಶ:
2025ನೇ ಸಾಲಿನ ಬಿ-ಫಾರ್ಮಾ ಲ್ಯಾಟರಲ್ ಪ್ರವೇಶಕ್ಕೆ ವೇಳಾಪಟ್ಟಿ ಪ್ರಕಟಿಸಿದ್ದು, ಆ.20ರಿಂದ ಆಪ್ಷನ್ಸ್ ಎಂಟ್ರಿ ಆರಂಭವಾಗಲಿದೆ ಎಂದು ಹೇಳಿದ್ದಾರೆ.
ಈಗಾಗಲೇ ಮೆರಿಟ್ ಪಟ್ಟಿಯನ್ನು ಪ್ರಕಟ:
ಅರ್ಹ ಅಭ್ಯರ್ಥಿಗಳು ಆ.19 ಮತ್ತು 20ರಂದು ವೆರಿಫಿಕೇಷನ್ ಸ್ಲಿಪ್ ಡೌನ್‌ಲೋಡ್ ಮಾಡಿಕೊಳ್ಳಬೇಕು. ಆ.20ರಿಂದ 23ರವರೆಗೆ ಇಚ್ಛೆಗಳನ್ನು ದಾಖಲಿಸಲು ಅವಕಾಶ ನೀಡಲಾಗಿದೆ. ಆ.24ರಂದು ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶ ಹಾಗೂ ಆ.25ರಂದು ಸಂಜೆ 4ರ ನಂತರ ಅಂತಿಮ ಫಲಿತಾಂಶ ಪ್ರಕಟಿಸಲಾಗುತ್ತದೆ. ಶುಲ್ಕ ಪಾವತಿಸಿ ಕಾಲೇಜಿನಲ್ಲಿ ಪ್ರವೇಶ ಪಡೆಯಲು ಆ.27 ಕೊನೆ ದಿನ ಎಂದು ತಿಳಿಸಿದ್ದಾರೆ.ಇದನ್ನೂ ಓದಿ: ಅನುಪಮಾ ಬ್ರೇಕಪ್ ಸತ್ಯ ಬಿಚ್ಚಿಟ್ಟ ಬೆನ್ನಲ್ಲೇ ಎಕ್ಸ್-ಬಾಯ್‌ಫ್ರೆಂಡ್ ಹೇಳಿದ್ದೇನು?

