ಮಂಗಳೂರು: ಪಂಜಾಬ್‌ನಲ್ಲಿ ಧರ್ಮಸ್ಥಳ(Dharmasthala) ಮೂಲದ ಏರೋಸ್ಪೇಸ್ ಎಂಜಿನಿಯರ್(Aerospace Engineer) ಆಕಾಂಕ್ಷ ಸಾವು ಪ್ರಕರಣದಲ್ಲಿ ಪ್ರೊಫೆಸರ್(Professor) ಒಬ್ಬನನ್ನು ಜಲಂಧರ್ ಪೊಲೀಸರು ಬಂಧಿಸಿದ್ದಾರೆ.
ಲವ್ಲಿ ಪ್ರೊಫೆಷನಲ್ ಯೂನಿವರ್ಸಿಟಿಯ ಪ್ರೊಫೆಸರ್ ಬಿಜಿಲ್ ಮ್ಯಾಥ್ಯೂ(45) ಬಂಧಿತ ಆರೋಪಿ. ಇದನ್ನೂ ಓದಿ: ತನ್ನ ಚೊಚ್ಚಲ ಐಪಿಎಲ್‌ನಲ್ಲೇ ಉದ್ಧಟತನ – ಒಂದು ಪಂದ್ಯಕ್ಕೆ ದಿಗ್ವೇಶ್ ಅಮಾನತು, ಭಾರೀ ದಂಡ
ಆಕಾಂಕ್ಷ ಸಾವಿಗೆ ಯೂನಿವರ್ಸಿಟಿಯ ಪ್ರಾಧ್ಯಾಪಕ ಬಿಜಿಲ್ ಮ್ಯಾಥ್ಯೂ(Bijil Mathew) ಕಾರಣ ಎಂದು ಜಲಂಧರ್ ಪೊಲೀಸ್ ಠಾಣೆಗೆ ಆಕಾಂಕ್ಷ ಹೆತ್ತವರು ದೂರು ನೀಡಿದ್ದರು. ಆಕಾಂಕ್ಷ ಮೊಬೈಲ್ ಪಡೆದು ತನಿಖೆ ನಡೆಸಿರುವ ಪೊಲೀಸರಿಗೆ ಸಾವಿಗೂ ಮುನ್ನ ಆಕಾಂಕ್ಷ, ಬಿಜಿಲ್ ಮಾಥ್ಯೂಗೆ ತಾನು ಆತ್ಮಹತ್ಯೆ ಮಾಡಿಕೊಳ್ಳೊದಾಗಿ ಮೆಸೇಜ್ ಮಾಡಿರುವ ಬಗ್ಗೆ ಮಾಹಿತಿ ಲಭ್ಯವಾಗಿತ್ತು. ಇದನ್ನೂ ಓದಿ: ಉತ್ತರ ಕನ್ನಡ ಜಿಲ್ಲೆಯಲ್ಲಿ ಅಬ್ಬರಿಸಿದ ಮಳೆ; ಕುಮಟಾ-ಸಿದ್ದಾಪುರ ರಸ್ತೆ ಜಲಾವೃತ
ಅಲ್ಲದೇ ಆಕಾಂಕ್ಷ ಆತ್ಮಹತ್ಯೆಯ ಬಳಿಕ ಬಿಜಿಲ್ ಮಾಥ್ಯೂ ತಲೆಮರಿಸಿಕೊಂಡಿದ್ದ. ಇದೀಗ ಜಲಂಧರ್ ಪೊಲೀಸರು ಬಿಜಲ್ ಮ್ಯಾಥ್ಯೂನನ್ನು ಬಂಧಿಸಿದ್ದಾರೆ. ಕಾಲೇಜಿನಿಂದ ಕೂಡ ಮ್ಯಾಥ್ಯೂನನ್ನು ಅಮಾನತು ಮಾಡಲಾಗಿದೆ. ಇದನ್ನೂ ಓದಿ: ಬೆಂಗ್ಳೂರಲ್ಲಿ ಮಳೆಯಿಂದ ಜನರ ಪರದಾಟ… ರಾಜ್ಯ ಸರ್ಕಾರದ ಮೋಜು – ಬಿವೈವಿ ಸಿಡಿಮಿಡಿ
ಧರ್ಮಸ್ಥಳದ ಬೊಳಿಯೂರು ನಿವಾಸಿ ಆಕಾಂಕ್ಷ ಎಸ್ ನಾಯರ್ 6 ತಿಂಗಳ ಹಿಂದೆ ದೆಹಲಿಯ ಸ್ಪೈಸ್ ಜೆಟ್ ಏರೋಸ್ಪೇಸ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದಳು. ಹೆಚ್ಚಿನ ತರಬೇತಿಗೆ ಜರ್ಮನಿಗೆ ತೆರಳಲು ತಯಾರಿ ನಡೆಡಸಿದ್ದ ಆಕಾಂಕ್ಷ ಕೆಲವು ಶೈಕ್ಷಣಿಕ ದಾಖಲೆಗಳನ್ನು ಶುಕ್ರವಾರ ಪಂಜಾಬ್‌ನ(Panjab) ಲವ್ಲಿ ಪ್ರೊಫೆಷನಲ್ ಯೂನಿವರ್ಸಿಟಿಗೆ ತೆರಳಿದ್ದಳು. ಬಳಿಕ ಕಾಲೇಜಿನ ನಾಲ್ಕನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ್ದಳು. ಇದನ್ನೂ ಓದಿ: 1,600 ಕೋಟಿ ಕಾಮಗಾರಿ ನಡೆದಿದ್ದರೆ ಬೆಂಗ್ಳೂರಿಗೆ ಇಂತಹ ಸ್ಥಿತಿ ಬರುತ್ತಿರಲಿಲ್ಲ: ಆರ್. ಅಶೋಕ್
ಆಕಾಂಕ್ಷಗೆ ತಾನು ಓದುತ್ತಿದ್ದ ಯೂನಿವರ್ಸಿಟಿಯ ಪ್ರೊಫೆಸರ್ ಕೇರಳದ ಕೊಟ್ಟಾಯಂ ನಿವಾಸಿ ಎರಡು ಮಕ್ಕಳ ತಂದೆ ಬಿಜಿಲ್ ಮ್ಯಾಥ್ಯೂ ಜೊತೆ ಪ್ರೇಮಾಂಕುರವಾಗಿತ್ತು. ಅಲ್ಲದೇ ಮ್ಯಾಥ್ಯೂ ಜೊತೆ ಆತನ ಮನೆಗೆ ಹೋಗಿ ಮದುವೆಯಾಗುವಂತೆ ಒತ್ತಾಯಿಸಿ ಆಕಾಂಕ್ಷ ಜಗಳ ಮಾಡಿದ್ದಳು. ಬಳಿಕ ಕಾಲೇಜಿನಲ್ಲೂ ಜಗಳ ಮಾಡಿ ಕಟ್ಟಡದ ನಾಲ್ಕನೇ ಮಹಡಿಗೆ ಹೋಗಿ ಕೆಳಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಳು.