ಭೋಪಾಲ್: ಪ್ರಾಧ್ಯಾಪಕರು ಪ್ರಾಂಶುಪಾಲರಿಗೆ ಕಪಾಳಮೋಕ್ಷ ಮಾಡಿದ ಆಘಾತಕಾರಿ ಘಟನೆ ಮಧ್ಯಪ್ರದೇಶದ ಕಾಲೇಜಿನ ಕಚೇರಿಯಲ್ಲಿ ನಡೆದಿದೆ.
ಮಧ್ಯಪ್ರದೇಶದ ಉಜ್ಜಯಿನಿಯಲ್ಲಿರುವ ಎಂಪಿ ಕಾಲೇಜಿನ ಕಚೇರಿಯೊಳಗೆ ಪ್ರಾಧ್ಯಾಪಕ ಮತ್ತು ಕಾಲೇಜು ಪ್ರಾಂಶುಪಾಲರ ನಡುವೆ ವಾಗ್ವಾದ ಪ್ರಾರಂಭವಾಗಿದೆ. ಮಾತಿಗೆ ಮಾತು ಬೆಳೆದು ಪ್ರಾಧ್ಯಾಪಕರ ಕೋಪ ತೀವ್ರವಾಗಿ ಹೋಗಿದ್ದು, ಪ್ರಾಂಶುಪಾಲರನ್ನು ಥಳಿಸಿದ್ದಾರೆ. ಈ ದೃಶ್ಯಾವಳಿ ಕಛೇರಿಯಲ್ಲಿದ್ದ ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದೆ. ಇದನ್ನೂ ಓದಿ: ಅಕ್ರಮವಾಗಿ ಒತ್ತುವರಿಯಾಗಿದ್ದ ಜಾಗ ಶಾಲೆಗೆ ವಾಪಸ್ – ತಹಶೀಲ್ದಾರ್‌ಗೆ ಗ್ರಾಮಸ್ಥರಿಂದ ಅಭಿನಂದನೆ
ಈ ದೃಶ್ಯದಲ್ಲಿ ಪ್ರಾಧ್ಯಾಪಕರು ಮತ್ತು ಪ್ರಾಂಶುಪಾಲರ ನಡುವೆ ಮಾತಿನ ಚಕಮಕಿ ನಡೆದಿದೆ. ಈ ವೇಳೆ ಪ್ರಾಧ್ಯಾಪಕನ ಕೋಪ ಹೆಚ್ಚಾಗಿ ತನ್ನ ಕೈಯಲ್ಲಿದ್ದ ಪುಸ್ತಕವನ್ನು ಎಸೆದಿದ್ದಾರೆ. ನಂತರ ಪ್ರಾಂಶುಪಾಲರ ಮೇಲೆ ಹಲ್ಲೆ ಮಾಡಲು ಹೋಗಿದ್ದಾರೆ. ಈ ವೇಳೆ ಪ್ರಾಂಶುಪಾಲರ ಕಪಾಳಕ್ಕೆ ಹೊಡೆದಿದ್ದಾರೆ.
ಪ್ರಸ್ತುತ ಪ್ರಾಂಶುಪಾಲರು ಪ್ರಾಧ್ಯಾಪಕರ ವಿರುದ್ಧ ಪೊಲೀಸರಿಗೆ ದೂರನ್ನು ನೀಡಿದ್ದಾರೆ.


![ಪ್ರಾಂಶುಪಾಲರಿಗೆ ಕಪಾಳಮೋಕ್ಷ ಮಾಡಿದ ಪ್ರಾಧ್ಯಾಪಕರು! 6 Professor thrashes Principal inside his office, video goes viral [Watch] | Catch News](http://images.catchnews.com/upload/2022/01/19/principal.png)
