ಬೆಂಗಳೂರು: ಸುಪ್ರಸಿದ್ಧ ಲೇಖಕ ಹಾಗೂ ಹಿರಿಯ ವಿದ್ವಾಂಸ ಪ್ರೊ.ಕೆ.ಎಸ್. ನಾರಾಯಣಾಚಾರ್ಯ(88) ನಿಧನರಾಗಿದ್ದಾರೆ.
ಇಂದು ಬೆಳಗಿನ ಜಾವ 2 ಗಂಟೆ ಸುಮಾರಿಗೆ ತಮ್ಮ ಬೆಂಗಳೂರಿನ ನಿವಾಸದಲ್ಲಿ ಪ್ರೊ.ಕೆ.ಎಸ್. ನಾರಾಯಣಾಚಾರ್ಯ ಅವರು ಕೊನೆಯುಸಿರೆಳೆದಿದ್ದಾರೆ. ಕೆ. ಎಸ್. ನಾರಾಯಣಾಚಾರ್ಯ ಅವರು, 1933ರಲ್ಲಿ ಕನಕಪುರದ ವೈದಿಕ ಶ್ರೀ ವೈಷ್ಣವ ಕುಟುಂಬದಲ್ಲಿ ಜನಿಸಿದರು. ಬೇಂದ್ರೆಯವರಿಂದ ಪ್ರೇರಣೆಗೊಳಗಾಗಿ ಇವರು ಪ್ರವಚನಗಳಿಂದ ಲೇಖನದೆಡೆಗೂ ಮುಖ ಮಾಡಿದರು. ನಂತರ ಪ್ರವಚನ ಮತ್ತು ಕಾದಂಬರಿಕಾರರಾಗಿ ಅಪಾರ ಅಭಿಮಾನಿಗಳನ್ನು ಹೊಂದಿದ್ದ ಅವರು ರಾಮಾಯಣಾಚಾರ್ಯ ಎಂದೇ ಖ್ಯಾತಿ ಪಡೆದಿದ್ದರು. ಇದನ್ನೂ ಓದಿ: ರೈತರ ಹೋರಾಟಕ್ಕೆ ಇಂದಿಗೆ ಒಂದು ವರ್ಷ – ಸಿಂಘು, ಟ್ರಿಕ್ರಿ ಗಡಿಯಲ್ಲಿ ಅನ್ನದಾತರ ಮಹಾಪಂಚಾಯತ್
Advertisement
Advertisement
ಶ್ರೀ ರಾಮಾವತಾರ ಸಂಪೂರ್ಣವಾದಾ, ಶ್ರೀ ರಾಮಾಯಣ ಪಾತ್ರ ಪ್ರಪಂಚ, ಶ್ರೀ ಮಹಾಭಾರತ ಪಾತ್ರ ಪ್ರಪಂಚ ಸೇರಿ ಹಲವಾರು ಪುಸ್ತಕಗಳನ್ನು ಕೆ. ಎಸ್. ನಾರಾಯಣಾಚಾರ್ಯ ಅವರು ಬರೆದಿದ್ದಾರೆ. ಅಲ್ಲದೇ ಇವರಿಗೆ ಸರ್ಕಾರದಿಂದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ. ವಿದ್ವನ್ಮಣಿ’, ‘ವೇದಭೂಷಣ’, ‘ವಾಲ್ಮೀಕಿ ಹೃದಯಜ್ಞ’, ‘ರಾಮಾಯಣಾಚಾರ್ಯ’, ‘ಮಹಾಭಾರತಾಚಾರ್ಯ’ ಮೊದಲಾದ ಬಿರುದುಗಳು ವಿವಿಧ ಮಠಾಧೀಶರಿಂದ ಕೆ. ಎಸ್. ನಾರಾಯಣಾಚಾರ್ಯ ದೊರೆತಿದೆ.
Advertisement
ಪ್ರಖ್ಯಾತ ವಿದ್ವಾಂಸರು ಹಾಗೂ ಅನೇಕ ಪೌರಾಣಿಕ ಕಾದಂಬರಿಗಳ ರಚನಾಕಾರರಾಗಿದ್ದ ಪ್ರೊ.ಕೆ.ಎಸ್.ನಾರಾಯಣಾಚಾರ್ಯರ ನಿಧನ ನೋವಿನ ಸಂಗತಿ.
ಪ್ರವಚನ ಮತ್ತು ಕಾದಂಬರಿಕಾರರಾಗಿ ಅಪಾರ ಅಭಿಮಾನಿಗಳನ್ನು ಅವರು ಹೊಂದಿದ್ದರು.
ಅವರ ಆತ್ಮಕ್ಕೆ ಶಾಂತಿ ಸಿಗಲಿ, ಕುಟುಂಬ ವರ್ಗದವರಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. pic.twitter.com/t2ugBeoxq5
— Pralhad Joshi (@JoshiPralhad) November 26, 2021
Advertisement
ಸದ್ಯ ಕೆ. ಎಸ್.ನಾರಾಯಣಾಚಾರ್ಯ ಅವರ ಅಗಲಿಕೆಗೆ ಅನೇಕ ಮಂದಿ ಸಂತಾಪ ಸೂಚಿಸಿದ್ದು, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ತಮ್ಮ ಟ್ವಿಟ್ಟರ್‌ನಲ್ಲಿ, ಪ್ರಖ್ಯಾತ ವಿದ್ವಾಂಸರು ಹಾಗೂ ಅನೇಕ ಪೌರಾಣಿಕ ಕಾದಂಬರಿಗಳ ರಚನಾಕಾರರಾಗಿದ್ದ ಪ್ರೊ.ಕೆ.ಎಸ್.ನಾರಾಯಣಾಚಾರ್ಯರ ನಿಧನ ನೋವಿನ ಸಂಗತಿ. ಪ್ರವಚನ ಮತ್ತು ಕಾದಂಬರಿಕಾರರಾಗಿ ಅಪಾರ ಅಭಿಮಾನಿಗಳನ್ನು ಅವರು ಹೊಂದಿದ್ದರು. ಅವರ ಆತ್ಮಕ್ಕೆ ಶಾಂತಿ ಸಿಗಲಿ, ಕುಟುಂಬ ವರ್ಗದವರಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಆಫ್ರಿಕಾದಲ್ಲಿ ರೂಪಾಂತರ ಕೋವಿಡ್ ತಳಿ ಪತ್ತೆ – ಕಟ್ಟೆಚ್ಚರಕ್ಕೆ ಎಲ್ಲ ರಾಜ್ಯಗಳಿಗೆ ಕೇಂದ್ರದಿಂದ ಸೂಚನೆ